ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಆರ್ಥಿಕ ಅಭಿವೃದ್ಧಿಗಾಗಿ ಹಲವಾರು ಯೋಜನೆಯಗಳನ್ನು ಜಾರಿಗೆ ತಂದಿದೆ. ಸರ್ಕಾರದ ಯೋಜನೆಗಳಲ್ಲಿ ಗಂಗಾ ಕಲ್ಯಾಣ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಹೇಗೆ ಮಾಡುತ್ತಾರೆ? ಯಾವ ಯಾವ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗುತ್ತದೆ? ಗಂಗಾ ಕಲ್ಯಾಣ ಯೋಜನೆ ಯಾವಾಗ ಆರಂಭವಾಯಿತು? ಯಾವ ರೈತರು ಅರ್ಹರು ಎಂಬಿತ್ಯಾದಿಗಳ ಮಾಹಿತಿ ಇಲ್ಲಿದೆ.
ಗಂಗಾ ಕಲ್ಯಾಣ ಯೋಜನೆ ಯಾವ ರೈತರಿಗಾಗಿ ಜಾರಿಗೆ ತರಲಾಗಿದೆ?
ಗಂಗಾ ಕಲ್ಯಾಣ ಯೋಜನೆಯನ್ನು ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಉಚಿತವಾಗಿ ಕೊಳವೆ ಬಾವಿ/ ತೆರೆದ ಬಾವಿು ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ಗಂಗಾ ಕಲ್ಯಾಣ ಯೋಜನೆಯನ್ನು 1983 ರಲ್ಲಿ ಆರಂಭಿಸಲಾಗಿದೆ. ಸರ್ಕಾರವು ರೈತರಿಗೆ ಕೊಳವೆ ಬಾವಿ ಕೊರೆಯಲು 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡುತ್ತದೆ.
ಇದನ್ನೂ ಓದಿ : ನಿಮ್ಮ ಹೊಲದ ಸರ್ವೆ ಟಿಪ್ಪಣಿ, ಪೋಡಿ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲೇ ಚೆಕ್ ಮಾಡಿ
ಕೊಳವೆ ಬಾವಿ ಕೊರೆದು ಪಂಪ್ ಸೆಟ್ ಹಾಗೂ ಇತರ ಪೂರಕ ಸಾಮಗ್ರಿಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಸಿಸಿಕೊಡಲಾಗುವುದು.
ಫಲಾನುಭವಿಗಳ ಆಯ್ಕೆ ಹೇಗೆ ಮಾಡುತ್ತಾರೆ?
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳನ್ನು ಎರಡು ರೀತಿಯಲ್ಲಿ ಆಯ್ಕೆ ಮಾಡಲಾಗುತ್ತದೆ. ಹೌದು, ಒಟ್ಟು ಗುರಿಯ ಶೇ. 80 ರಷ್ಟು ಫಲಾನುಭವಿಗಳನ್ನು ಆಯಾ ಜಿಲ್ಲೆಗಳ ಹಾಗೂ ಮತಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗುವುದು. ಉಳಿದ ಶೇ. 20 ರಷ್ಟು ಫಲಾನುಭವಿಗಳಲ್ಲಿ ಸಮಾಜಕಲ್ಯಾಣ ಸಚಿವರು ಶೇ. 15 ರಷ್ಟು ಫಲಾನುಭವಿಗಳನ್ನು ಆಯ್ಕೆ ಮಾಡುತ್ತಾರೆ. ಉಳಿದ ಶೇ. 5 ರಷ್ಟು ಫಲಾನುಭವಿಗಳನ್ನು ಆಯಾ ನಿಗಮಗಳ ಅಧ್ಯಕ್ಷರು ಆಯ್ಕೆ ಮಾಡುತ್ತಾರೆ.
ಗಂಗಾ ಕಲ್ಯಾಣ ಯೋಜನೆಯಡಿ ಯಾವ ಯಾವ ನಿಗಮಗಳು ಅರ್ಜಿ ಕರೆಯುತ್ತವೆ?
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ರಾಜ್ಯ ಎಲ್ಲಾ ವರ್ಗದ ರೈತರಿಗೆ ಸಹಾಯಧನ ಸಿಗಲೆಂದು ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೌದು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನಿತರ ನಿಗಮಗಳ ವತಿಯಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ರೈತರು ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ಈ ಹಿಂದೆ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ ಲಾಭ ಪಡೆದಿರಬಾರದು. ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನಿನ ಪಹಣಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದ ಜಮೀನು ಯಾರ ಹೆಸರಿಗೆ ಎಷ್ಟು ಎಕರೆಯಿದೆ? ಮೊಬೈಲ್ ನಲ್ಲೆ ಚೆಕ್ ಮಾಡಿ
ಕೇಂದ್ರ ಹಾಗೂ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದ ಹಲವಾರು ಯೋಜನೆಗಳ ಸೌಲಭ್ಯ ಇನ್ನೂವರೆಗೂ ನಿಜವಾದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಸರ್ಕಾರದ ಹಲವಾರು ಯೋಜನೆಗಳ ಲಾಭ ಪ್ರಭಾವಿಗಳ ಪಾಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಸರ್ಕಾರಗಳು ಯೋಜನಗಳ ಲಾಭ ರೈತರಿಗೆ ಸಿಗಲೆಂದು ಪತ್ರಿಕೆಗಳಲ್ಲಿ ಪ್ರಕಟಣೆ ನೀಡುತ್ತಾ ಬರುತ್ತಿದೆ.
ಅರ್ಜಿಗಳನ್ನು ಹೇಗೆ ಸಲ್ಲಿಸಬೇಕು?
ಗಂಗಾ ಕಲ್ಯಾಣ ಯೋಜನೆಯಡಿಲ್ಲಿ ಈಗ ಆನ್ಲೈನ್ ಮೂಲಕವೇ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.