hynugarike subsidy : ಹೈನುಗಾರಿಕೆ ಯೋಜನೆ ಅಡಿಯಲ್ಲಿ ರೈತರಿಗೆ 1.25 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಅಂಬೇಡ್ಕರ್ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಹೈನುಗಾರಿಕೆಯನ್ನು ಸ್ಥಾಪಿಸಲು ಮತ್ತು ಅಭಿವೃದ್ಧಿಪಡಿಸಲು 1.25 ಲಕ್ಷಗಳ ಸಹಾಯಧನವನ್ನು ನೀಡಲಾಗುತ್ತದೆ, ಇದು ಸ್ಥಿರ ಜೀವನೋಪಾಯ ಮತ್ತು ಹಾಲು ಉತ್ಪಾದನೆಗೆ ನೆರವಾಗುತ್ತದೆ
ಇದರೊಂದಿಗೆ ಕುರಿ ಸಾಕಾಣಿಕೆ ಯೋಜನೆಯ ಅಡಿಯಲ್ಲಿ ಫಲಾನುಭವಿಗಳಿಗೆ 50,000 ರ ಸಹಾಯಧನವನ್ನು ಒದಗಿಸಲಾಗುತ್ತದೆ, ಇದು ಸ್ಥಿರ ಕುರಿ ಸಾಕಾಣಿಕೆ ಮತ್ತು ಆದಾಯ ಉತ್ಪಾದನೆಗೆ ನೆರವಾಗುತ್ತದೆ.
ಇದನ್ನೂ ಓದಿ :ನಿಮ್ಮ ಜಮೀನು ಯಾರ ಯಾರ ಹೆಸರಿನೊಂದಿಗೆ ಜಂಟಿಯಲ್ಲಿದೆ? ಇಲ್ಲೇ ಚೆಕ್ ಮಾಡಿ
ಗಂಗಾ ಕಲ್ಯಾಣ ಯೋಜನೆಯಡಿ 1½ ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನಿನಲ್ಲಿ ಕೊಳವೆಬಾವಿ ಕೊರೆಸಿ, ಪಂಪ್ ಸೆಟ್ ಅಳವಡಿಸಿ ವಿದ್ಯುದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಈ ಯೋಜನೆಯಡಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು(ಗ್ರಾ), ಬೆಂಗಳೂರು(ನಗರ), ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಕೆಳಗೆ ಕುಸಿದಿರುವುದರಿಂದ ಈ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.4.75 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಇದರಲ್ಲಿ ರೂ.4.25 ಲಕ್ಷ ಸಹಾಯಧನವಿದ್ದು, ಉಳಿದ ರೂ.50,000/- ಅವಧಿಸಾಲವಾಗಿರುತ್ತದೆ. ಇತರೆ ಜಿಲ್ಲೆಗಳಲ್ಲಿ ಘಟಕ ವೆಚ್ಚ ರೂ.3.75 ಲಕ್ಷ ನಿಗದಿಪಡಿಸಿದ್ದು, ಇದರಲ್ಲಿ ರೂ.3.25 ಲಕ್ಷ ಸಹಾಯಧನ ಮತ್ತು ರೂ.50,000/- ಅವಧಿಸಾಲವಾಗಿರುತ್ತದೆ. ಘಟಕ ವೆಚ್ಚದ ಪೈಕಿ ವಿದ್ಯುದ್ದೀಕರಣಕ್ಕೆ ಘಟಕ ವೆಚ್ಚದ ಸಹಾಯಧನದ ಮಿತಿಯಲ್ಲಿ ಪ್ರತಿ ಕೊಳವೆಬಾವಿಗೆ ರೂ.75,000/-ಗಳನ್ನು ಸಂಬಂಧಿಸಿದ ಎಸ್ಕಾಂಗಳಿಗೆ ಬಿಡುಗಡೆ ಮಾಡಲಾಗುವುದು.
hynugarike subsidy ಯಾವ ಯಾವ ಯೋಜನೆಗಳಡಿ ಅರ್ಜಿ ಆಹ್ವಾನ
ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಮುದಾಯದ ಫಲಾನುಪೇಕ್ಷಿಗಳಿಗೆ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಕೆಳಕಂಡ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಕುರಿ ಸಾಕಾಣಿಕೆ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ಸ್ವಾವಲಂಬಿ ಸಾರಥಿ ಮತ್ತು ಪುಡ್ ಕಾರ್ಟ್-ಮೊಬೈಲ್ ಕಿಚನ್ ಉದ್ದೇಶಕ್ಕಾಗಿ, ಹೈನುಗಾರಿಕೆ, ವ್ಯಾಪಾರ ಮತ್ತು ಇನ್ನಿತರ ಉದ್ದೇಶಕ್ಕಾಗಿ), ಮೈಕ್ರೋ ಕ್ರೆಡಿಟ್ ಕಿರುಸಾಲ ಯೋಜನೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹಿಂದಿನ ಸಾಲಿನಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಹ ಫಲಾನುಭಿಗಳು ಕರ್ನಾಟಕ ಒನ್/ಗ್ರಾಮ ಒನ್/ಸೇವಾ ಸಿಂಧು ಪೋರ್ಟಲ್ದಲ್ಲಿ ಆನ್ಲೈನ್ ಮೂಲಕ 2025ರ ಸೆಪ್ಟೆಂಬರ್ 10 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ





