ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ಬಂದಿಲ್ಲವೇ…? ರೈತರು ಕೂಡಲೇ ಇಲ್ಲಿ ಅರ್ಜಿ ಸಲ್ಲಿಸಿ

Written by By: janajagran

Published on:

ಕೇಂದ್ರ ಸರ್ಕಾರವು ಜಾರಿಗೆ ತಂದ ಹಲವಾರು ಯೋಜನೆಗಳಲ್ಲಿ ಪಿಎಂ ಕಿಸಾನ್ ಯೋಜನೆ ಅತ್ಯಂತ ಹೆಚ್ಚು ಪ್ರಸಿದ್ಧಿ ಪಡೆದಿದೆ. ಸಣ್ಣ, ಅತೀ ಸಣ್ಣ ರೈತರಿಗೆ ಸಹಾಯವಾಗಲೆಂದು ಕೇಂದ್ರ ಸರ್ಕಾರವು ಪ್ರತಿವರ್ಷ 6 ಸಾವಿರ ರೂಪಾಯಿ ಮೂರು ಕಂತುಗಳಲ್ಲಿ ಹಣ ಬಿಡುಗಡೆ ಮಾಡುತ್ತಿದೆ. ಈಗಾಗಲೇ 10 ಕಂತುಗಳಲ್ಲಿ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರೈತರ ಖಾತೆಗೆ ಹಣ ಜಮೆ ಮಾಡಲಾಗಿದೆ. ಆದರೆ 10ನೇ ಕಂತಿನಲ್ಲಿ ದೇಶದ ಸುಮಾರು 2 ಕೋಟಿ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಿಲ್ಲ. ಇದರಿಂದಾಗಿ ದೇಶದ ಹಲವಾರು ರೈತರಿಗೆ ನಿರಾಶೆಯಾಗಿದೆ. ಕಾರಣ ತಿಳಿಸಿದೆ ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ಸ್ಥಗಿತಗೊಳಿಸಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಿಎಂ ಕಿಸಾನ್ 10ನೇ ಕಂತಿನ ಸ್ಥಗಿತಕ್ಕೆ ಕಾರಣ ನಿಮಗೆ ಗೊತ್ತಾ ?

ನಿಮಗೆ ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಹಣ ಯಾವ ಕಾರಣಕ್ಕಾಗಿ ಬಂದಿಲ್ಲವೆಂಬುದನ್ನು ನೋಡಬೇಕಾದರೆ ಈ

https://pmkisan.gov.in/BeneficiaryStatus.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ಮೊಬೈಲ್ ನಂಬರ್  ಸೆಲೆಕ್ಟ್ ಮಾಡಿ ಮೊಬೈಲ್ ನಂಬರ್ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮ್ಮ 10ನೇ ಕಂತಿನ ಹಣ ಅಂದರೆ ಜನವರಿ ತಿಂಗಳಲ್ಲಿ ಬಿಡುಗಡೆಯಾದ ಹಣ ಯಾವ ಕಾರಣಕ್ಕಾಗಿ ತಡೆಹಿಡಿಯಲಾಗಿದೆ ಎಂಬುದು ಗೊತ್ತಾಗುತ್ತದೆ.

ಪಿಎಂ ಕಿಸಾನ್ ಯೋಜನೆ 10ನೇ ಕಂತಿನ ಹಣ ಬರದ ರೈತರು ಏನು ಮಾಡಬೇಕು?

ಪಿಎಂ ಕಿಸಾನ್ ಯೋಜನೆಯಡಿ 10ನೇ ಕಂತಿನ ಹಣ ಬರದ ರೈತರು ಅಂದರೆ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ನಲ್ಲಿ payment stopped by state on request ಎಂದು ಮೆಸೆಜ್ ಇರುವವರು ಕೂಡಲೇ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು. ಜಮೀನಿನ ಪಹಣಿ, ಸರ್ವೆನಂಬರ್, ಆಧಾರ್ ಸಂಖ್ಯೆ, ಬ್ಯಾಂಕ್ ಪಾಸ್ ಬುಕ್ ನೊಂದಿಗೆ ರೈತರ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಬೇಕು. ರೈತ ಸಂಪರ್ಕ ಕೇಂದ್ರದಲ್ಲಿ ಕೇಳಲಾದ ದಾಖಲಾತಿಗಳನ್ನು ಸಲ್ಲಿಸಿದರೆ ಮಾತ್ರ ಇನ್ನೂ ಮುಂದೆ ಪಿಎಂ ಕಿಸಾನ್ ಯೋಜನೆ ಹಣ ಬರಲಿದೆ.

ಬ್ಯಾಂಕ್ ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ವ್ಯತ್ಯಾಸವಿದ್ದರೆ ಏನು ಮಾಡಬೇಕು?

ಒಂದು ವೇಳೆ ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ನಲ್ಲಿ ಹೆಸರು ವ್ಯತ್ಯಾಸವಿದ್ದರೆ ಬ್ಯಾಂಕ್ ನಲ್ಲಿ ಅರ್ಜಿ ಸಲ್ಲಿಸಿ ಆದಾರ್ ಕಾರ್ಡ್ ನಲ್ಲಿರುವಂತೆ ಹೆಸರು ಸರಿಪಡಿಸಬಹುದು. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು ಬ್ಯಾಂಕ್ ನಲ್ಲಿಯೂ ಒಂದೇ ರೀತಿ ಇರಬೇಕು. ಬ್ಯಾಂಕ್ ಪಾಸ್ಬುಕ್ ನಲ್ಲಿ ಹಾಗೂ ಆಧಾರ್ ಕಾರ್ಡ್ ನಲ್ಲಿ ಹೆಸರು ಸ್ವಲ್ಪ ವ್ಯತ್ಯಾಸವಿದ್ದರೂ ಮುಂದಿನ ಕಂತಿನಲ್ಲಿ ಹಣ ಜಮೆಯಾಗಲು ಸಮಸ್ಯೆಯಾಗಬಹುದು. ಕೂಡಲೇ ರೈತರು ಆಧಾರ್ ಕಾರ್ಡ್ ನಲ್ಲಿರುವಂತೆ ಬ್ಯಾಂಕ್ ನಲ್ಲಿ ಹೆಸರು ಸರಿಪಡಿಸಬಹುದು.

ಇ-ಕೆವೈಸಿ ಮಾಡಿಸುವುದು ಹೇಗೆ? How to do E-KYC?

ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್  ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.  ರೈತರು ಈ  https://pmkisan.gov.in/aadharekyc.aspx ಲಿಂಕ್  ಮೇಲೆ ಕ್ಲಿಕ್ ಮಾಡಬೇಕು   ಅಲ್ಲಿ ಆಧಾರ್ ನಂಬರ್ ನಮೂದಿಸಿ ಇಮೇಜ್ ಟೆಕ್ಸ್ಟ್ ಬಾಕ್ಸ್ ನಲ್ಲಿ ಮುಂದುಗಡೆ ಕಾಣುವ ಕೋಡ್ ಹಾಕಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ಮೊಬೈಲ್ ನಂಬರ್ ನಮೂದಿಸಿ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ಅಲ್ಲಿ ನಮೂದಿಸಿದ ನಂತರ EKYC Successfully submitted ಎಂಬ ಸಂದೇಶ ಕಾಣುತ್ತದೆ. ಆಗ ನಿಮ್ಮಪಿಎಂ ಕಿಸಾನ್ ಯೋಜನೆಯ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.  ಒಂದು ವೇಳೆ ಇ-ಕೆವೈಸಿ  Invalid ಅಂತ ಕಂಡರೆ ನೀವು ಹತ್ತಿರದ CSC ಸೆಂಟರ್ ಗೆ ಹೋಗಿ ಸರಿಪಡಿಸಬಹುದು.

Leave a comment