ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ: ಆರೇಂಜ್ ಅಲರ್ಟ್ ಘೋಷಣೆ

Written by Ramlinganna

Updated on:

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಮೂರು ಜಿಲ್ಲೆಗಳಿಗೆ ಆರೇಂಜ್ ಹಾಗೂ ಮೂರು ಜಿಲ್ಲೆಗಳಿಗೆ  ಯೆಲ್ಲೋ ಅಲರ್ಟ್ ನೀಡಲಾಗಿದೆ.

ಹೌದು, ರಾಜ್ಯದ ಕೆಲವೆಡೆ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಕರಾವಳಿಯ ಮೂರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಉತ್ತರ ಒಳನಾಡಿನ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.

ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ಆರೇಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ, ಉತ್ತರ ಒಳನಾಡಿನ ಧಾರವಾಡ ಮತ್ತು ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ ಜಿಲ್ಲೆಯ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 45 ಕಿ.ಮೀ ಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮದ್ರಕ್ಕೆ ಇಳಿಯಬಾರದು ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿಉತ್ತಮ ಮಳೆ

ಕರಾವಳಿಯಲ್ಲಿ ಗುರುವಾರೂ ಮಳೆಯ ವಾತಾವರಣ ಮುಂದುವರಿದಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಲ್ಲಲ್ಲಿ ಚದುರಿದಂತೆ ಆಗಾಗ ಧಾರಾಕಾರ ಮಳೆಯಾಗುತ್ತಿದೆ.

ಇದನ್ನೂ ಓದಿ ಬೆಳೆ ವಿಮೆ ಪರಿಹಾರ ಬಿಡುಗಡೆ: ನಿಮಗೂ ಜಮೆಯಾಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಹವಾಮಾನ ಇಲಾಖೆಯ ಪ್ರಕಾರ ಕರಾವಳಿಯಲ್ಲಿ ಸೆಪ್ಟೆಂಬರ್ 29 ರಂದು ಯೆಲ್ಲೋ ಅಲರ್ಟ್ , ಸೆಪ್ಟೆಂಬರ್ 30 ರಂದುಹಾಗೂ ಅಕ್ಟೋಬರ್ 1 ರಂದು ಆರೇಂಜ್ ಅಲರ್ಟ್ ನೀಡಲಾಗಿದೆ. ಅಕ್ಟೋಬರ್ 2 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉಡುಪಿಯಿಲ್ಲಿ ಉತ್ತಮ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಗುರವಾರ ಉತ್ತಮ ಮಳೆಯಾಗಿದೆ. ಇನ್ನೂ ಒಂದೆರಡು ದಿನ ಮಳೆ ಮುಂದುವರೆಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಲ್ಲಿ 5 ದಿನ ಕಾಲ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೇ? ಈ ನಂಬರಿಗೆ ಕರೆ ಮಾಡಿ

ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆಎ? ನಿಮ್ಮೂರಿನ ವಾತಾವರಣದ ಮಾಹಿತಿ ಪಡೆಯಲು ವರುಣಮಿತ್ರ ಸಹಾಯವಾಣಿ ನಂಬರ್ ಗೆ ಕರೆ ಮಾಡಬಹುದು. ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 92433 45433 ನಂಬರಿಗೆ ಕರೆ ಮಾಡಿದರೆ ನಿಮ್ಮೂರಿನಲ್ಲಿ ಮಳೆ ಯಾವಾಗ ಆಗುತ್ತದೆ? ಗಾಳಿಯ ದಿಕ್ಕು, ಹವಾಮಾನ ವರದಿಯನ್ನು ಪಡೆಯಬಹುದು. ಈ ಉಚಿತ ಸಹಾಯವಾಣಿ ನಂಬರ್ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸಲಿದೆ. ಹಾಗಾಗಿ ರೈತರು, ಸಾರ್ವಜನಿಕರು ಮನೆಯಲ್ಲೇ ಕುಳಿತು ತಮಗೆ ಬೇಕಾದಾಗ ಕರೆ ಮಾಡಿ ಮಾಹಿತಿ ಪಡೆಯಬಹುದು.

ಬೀದರ್ ಜಿಲ್ಲೆಯಲ್ಲಿಯೂ ಭಾರಿ ಮಳೆ

ಬೀದರ್ ಜಿಲ್ಲೆಯಲ್ಲಿ ಗುರುವಾರ ಸಂಜೆ ಭಾರಿ ಮಳೆಯಾಗಿದ್ದು, ರಸ್ತೆಗಳೆಲ್ಲ ನೀರಿನಿಂದ ಆವೃತವಾಗಿ  ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಗುರುವಾರ ಬೆಳಗ್ಗೆಯಿಂದ ಸುಡು ಬಿಸಿಲು ಇತ್ತು.  ಮಧ್ಯಾಹ್ನ 4 ಗಂಟ ಸುಮಾರಿಗೆ  ಒಂದು ಗಂಟೆ ಸುರಿದ ಮಳೆಯಿಂದ ಇಡೀ ಬೀದರ್ ನಗರ ಹಳ್ಳಕೊಳ್ಳದಂತೆ ಹರಿಯಿತು.

Leave a Comment