ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಯ ವಿವಿಧ ಕಡೆ ಮಳೆಯಾದ ವರದಿಯಾಗಿದೆ. ಇದೇ ರೀತಿ ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಕಡೆ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ. 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಇದನ್ನೂ ಓದಿ : ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿಕೊಳ್ಳಿ
ಗಾಳಿಯ ದಿಕ್ಕಿನಲ್ಲಿ ಬದಲಾವಣೆ (ಟ್ರಫ್) ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಾವಿಯ ಚಿಕ್ಕೋಡಿಯಲ್ಲಿ 5 ಸೆಂ. ಮೀಟರ್, ರಾಯಬಾಗ್, ಬೈಲಹೊಂಗಲ, ಕಲಘಟಗಿಯಲ್ಲಿ ತಲಾ 2 ಸೆಂ. ಮೀಟ ಮಳೆಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ತುಂತುರು ಮಳೆ ಬರುವ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆಯ ಈ ಮುನ್ಸೂಚನೆ ಪ್ರಕಾರ ಮೈಸೂರು ಜಿಲ್ಲೆಯಲ್ಲಿ ಏಪ್ರೀಲ್ 18 ರವರೆಗೆ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ನಾಗನಹಳ್ಳಿಯ ಗ್ರಾಮೀಣ ಕೃಷಿ ಹವಾಮಾನ ಸೇವಾ, ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಕೃಷಿ ಸಲಹೆಗಳು- ಮಾವಿನ ಬೆಳೆ ಕಾಯಿಕಟ್ಟುವ ಹಂತದಲ್ಲಿದ್ದು, ರೈತರು ತಪ್ಪದೆ ನೀರುಣಿಸಬೇಕು. ನೀರಿನ ಅನುಕೂಲಗಳು ಹೆಚ್ಚಿಗೆ ಇದ್ದ ರೈತರು ಕಾಯಿಕಟ್ಟುವ ಹಂತದಿಂದ ಮಾಗುವ ಹಂತದವರೆಗೆ ಪ್ರತಿ 15-20 ದಿನಗಳಿಗೊಮ್ಮೆ ನೀರುಣಿಸಬೇಕು. ಮಾವಿನ ತೋಟದಲ್ಲಿ ಮಣ್ಣಿನ ತೇವಾಂಶ ಸಂರಕ್ಷಣೆಗಾಗಿ, ಕಳೆಗಳು ಮತ್ತು ಬೆಳೆಗಲ ಅವಶೇಷಗಳನ್ನು ಮಲ್ಚಿಂಗ್ ಮಾಡಲು ಶಿಫಾರಸ್ಸು ಮಾಡಲಾಗಿದೆ.
ಇದನ್ನೂ ಓದಿ : ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಭತ್ತ ಬೆಳೆಯಲ್ಲಿ ಹಳದಿ ಕಾಂಡ ಕೊರಕ ಕೀಟಬಾಧೆ ಕಂಡುಬಂದಾಗ ಈ ಕೆಳಗೆ ಸೂಚಿಸಿರುವ ಯಾವುದಾದರೊಂದು ಕೀಟನಾಶಕವನ್ನು ಲೀಟರ್ ನೀರಿಗೆ ಸೇರಿಸಿ ಸಂಪಡಿಸಬೇಕು ಎಂದು ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ. ಪ್ರಕಾಶ, ಸಹ ಸಂಶೋಧಕ ಡಾ. ಜಿ.ವಿ. ಸುಮಂತ್ ಕುಮಾರ್ ಸಲಹೆ ನೀಡಿದ್ದಾರೆ.ರೈತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 94498 69914, 9535345814 ಗೆ ಸಂಪರ್ಕಿಸಲು ಕೋರಲಾಗಿದೆ.
ನಿಮ್ಮೂರಿನಲ್ಲಿನ ಹವಾಮಾನ ವರದಿ ಬೇಕೆ?
ನಿಮ್ಮೂರಿನ ಮಳೆಯ ವರದಿ ಹಾಗೂ ಗಾಳಿ, ಹವಾಮಾನ ವರದಿಯನ್ನು ಮನೆಯಲ್ಲಿಯೇ ಕುಳಿತು ಪಡೆಯಲು ಸರ್ಕಾರವು ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ಹೌದು, ವರುಣಮಿತ್ರ ಎಂಬ ಸಹಾಯವಾಣಿಯನ್ನು ಆರಂಭಿಸಿದೆ. ಈ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು, ನಿಮ್ಮೂರಿನಲ್ಲಿ ಮಳೆ ಯಾವಾಗು ಬರುತ್ತದೆ? ಹಾಗು ಇಂದಿನ ಹವಾಮಾನ ವರದಿಯನ್ನು ಕ್ಷಣಮಾತ್ರದಲ್ಲಿ ಪಡೆಯಬಹುದು. ಹಾಗಾದರೆ ವರುಣಮಿತ್ರ ಉಚಿತ ಸಹಾವಾಣಿ ನಂಬರ್ ಯಾವುದೆಂಬ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.
ವರುಣಮಿತ್ರ ಸಹಾಯವಾಣಿ ನಂಬರ್ 9243345433
ವರುಣಮಿತ್ರ ಈ ಉಚಿತ ಸಹಾಯವಾಣಿಗೆ ರೈತರು ಕರೆ ಮಾಡಿ ತಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ? ಗಾಳಿಯ ದಿಕ್ಕು, ಯಾವ ದಿಕ್ಕಿನಿಂದ ಯಾವ ದಿಕ್ಕಿನ ಕಡೆಗೆ ಗಾಳಿ ಬಿಸಲಿದೆ. ಗಾಳಿಯ ವೇಗ ಸೇರಿದಂತೆ ಅಂದಿನ ಹವಾಮಾನ ವರದಿಯನ್ನು ಪಡೆದುಕೊಳ್ಳಬಹುದು. ರೈತರು ಈ ಉಚಿತ ಸಹಾಯವಾಣಿ ನಂಬರ್ ನ್ನು ತಮ್ಮ ಮೊಬೈಲ್ ನಲ್ಲಿ ಸೇವ್ ಮಾಡಿಕೊಂಡರೆ ಸಾಕು, ತಮಗೆ ಬೇಕಾದಾಗ ಕರೆ ಮಾಡಿ ತಮ್ಮೂರಿನ ಹವಾಮಾನ ಮಾಹಿತಿಯನ್ನು ಪಡೆದುಕೊಳ್ಳಬಹುದು. ಇದಕ್ಕೆ ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ.