ಈ ಬೆಳೆಗಳಿಗೆ ವಿಮೆ ಮಾಡಿಸಿದರೆ ಎಕರೆಗೆ 37 ಸಾವಿರ ಜಮೆ

Written by Ramlinganna

Updated on:

Insure your crop now ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಲು ಡಿಸೆಂಬರ್ 30 ಕೊನೆಯ ದಿನವಾಗಿದೆ. ಹೌದು, ರೈತರು ಯಾವ ಯಾವ ಬೆಳೆಗಳಿಗೆ ಡಿಸೆಂಬರ್ 30 ರೊಳಗೆ ವಿಮೆ ಮಾಡಿಸಲು ಅವಕಾಶವಿದೆ? ಹಾಗೂ ಯಾವ ಬೆಳಗೆ ಎಷ್ಟು ವಿಮೆ ಹಣ ಪಾವತಿಸಬಹುದು. ರೈತರಿಗೆ ಎಷ್ಟು ವಿಮೆ ಹಣ ಜಮೆಯಾಗಬಹುದು ಎಂಬುದನ್ನು ರೈತರು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು? ಹೀಗೆ ಚೆಕ್ ಮಾಡಿ

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನುಚೆಕ್ ಮಾಡಲು ಈ

https://samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಯಾವ ಯಾವ ಬೆಳೆಗೆ ವಿಮೆ ಮಾಡಿಸಲು ಯಾವುದು ಕೊನೆಯ ದಿನಾಂಕ ಎಂಬುದನ್ನು ಚೆಕ್ ಮಾಡುವ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಂಡರೆ ಸಾಕು, ನೀವು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಪಟ್ಟಿ ಕಾಣಿಸುತ್ತದೆ.

ಉದಾಹರಣೆಗೆ ಬಾಗಲಕೋಟೆ  ಜಿಲ್ಲೆಯ ರೈತರು ಕಡಲೆ ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 30 ಕೊನೆಯ ದಿನವಾಗಿದೆ.

ಬೀದರ್ ಜಿಲ್ಲೆಗೆ ಜೋಳ ಹಾಗೂ ಗೋಧಿ ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 30 ಕೊನೆಯ ದಿನವಾಗಿದೆ.

ಚಾಮರಾಜನಗರ ಜಿಲ್ಲೆಗೆ ಭತ್ತ ಬೆಳೆಗೆ ವಿಮೆ ಮಾಡಿಸಲು ಇದೇ ತಿಂಗಳು ಡಿಸೆಂಬರ್ 30 ಕೊನೆಯ ದಿನವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಗೆ ಮುಸುಕಿನ ಜೋಳ ಹಾಗೂ ಸೂರ್ಯಕಾಂತಿ ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 30 ಕೊನೆಯ ದಿನವಾಗಿದೆ.

Insure your crop now ಯಾವ ಬೆಳೆಗೆ ಎಷ್ಟು ವಿಮೆ ಹಣ ಪಾವತಿಸಬೇಕು? ಚೆಕ್ ಮಾಡುವುದು ಹೇಗೆ?

ಯಾವ ಬೆಳೆಗೆ ಎಷ್ಟು ವಿಮೆ ಹಣ ಪಾವತಿಸಬೇಕು ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/PublicHome.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಕಾಣುವ ಫಾರ್ಮರ್ಸ್ ಕಾಲಂ ಕೆಳಗಡೆ ಇರುವ Premium calculator ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ Crop ಪಕ್ಕದಲ್ಲಿರುವ ಸೆಲೆಕ್ಟ್  ಮೇಲೆ ಕ್ಲಿಕ್ ಮಾಡಬೇಕು.

ಆಗ ನೀವು ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು ಎಂಬ ಪಟ್ಟಿ ಕಾಣಿಸುತ್ತದೆ. ಅಲ್ಲಿ ನೀವು ಯಾವ ಬೆಳೆಗೆ ವಿಮೆ ಮಾಡಿಸಬೇಕೆಂದುಕೊಂಡಿದ್ದೀರೋ ಆ ಬೆಳೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಎಕರೆ ನಮೂದಿಸಬೇಕು. ಇದಾ ನಂತರ ನಿಮ್ಮ ಜಮೀನು ಗುಂಟೆಯಲ್ಲಿ ಗುಂಟೆ ನಮೂದಿಸಿ  Show Premium ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ಬೆಳೆ ಸಾಲದ ಬಡ್ಡಿ ಮನ್ನಾ- ಸಿಎಂ ಘೋಷಣೆ ಯಾವ ರೈತರಿಗೆ ಮನ್ನಾ? ಇಲ್ಲಿದೆ ಮಾಹಿತಿ

ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.ಅಲ್ಲಿ ಒಂದು ವೇಳೆ ನಿಮ್ಮ ಬೆಳೆ ಪ್ರಾಕೃತಿಕ ವಿಕೋಪದಿಂದಾಗಿ ಹಾಳಾದರೆ ಎಷ್ಟು ರೂಪಾಯಿಯವರೆಗೆ ಹಣ ಜಮಯಾಗಬಹುದು. ಫಾರ್ಮರ್ ಶೇರ್ ನಲ್ಲಿ ರೈತರು ಎಷ್ಟು ಹಣ ಪಾವತಿಸಬೇಕು ಎಂಬುದು ಕಾಮಿಸುತ್ತದೆ. ಅದರ ಮೇಲ್ಗಡೆ ಪ್ರತಿ ಹೆಕ್ಟೇರಿಗೆ ಎಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬ ಮಾಹಿತಿ ಕಾಣಿಸುತ್ತದೆ. ಈ ಆಧಾರದ ಮೇಲೆ ರೈತರು ಎಷ್ಟು ವಿಮೆ ಹಣ ಜಮಯಾಗಬಹುದು ಎಂಬುದನ್ನು ನಿರ್ಧರಿಸಬಹುದು. ಬೆಳೆ ಎಷ್ಟು ಪ್ರಮಾಣದಲ್ಲಿ ಹಾಳಾಗಿದೆ ಆ ಆಧಾರದ ಮೇಲೆ ರೈತರಿಗೆ ಬೆಳೆ ವಿಮೆ ನಿರ್ಧರಿಸಲಾಗುತ್ತದೆ.

Leave a Comment