ಈ ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೂ ಕಾಲಾವಕಾಶ- ಇಲ್ಲಿದೆ ಮಾಹಿತಿ

Written by Ramlinganna

Updated on:

Insure your crops soon: ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ಇನ್ನೂ ಕಾಲಾವಕಾಶವಿದೆ. ಹಾಗಾದರೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದರ ಪಟ್ಟಿ ಇಲ್ಲಿದೆ.

ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದಂತೆ ಈಗ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಯಾ ಜಿಲ್ಲಾವಾರು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.? ಇಲ್ಲಿದೆ ಮಾಹಿತಿ.

Insure your crops soon ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು?

ರೈತರು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/PublicView/FindCutOff.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಆಗ ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಬಹುದು ಎಂಬ ಪಟ್ಟಿ ಕಾಣಿಸುತ್ತದೆ.

ಉದಾಹರಣೆಗೆ ನೀವು ಬಾಗಲಕೋಟೆ ಜಿಲ್ಲೆ ಆಯ್ಕೆ ಮಾಡಿಕೊಂಡರೆ ಸೂರ್ಯಕಾಂತಿ, ಗೋಧಿ ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 1 ಕೊನೆಯ ದಿನವಾಗಿದೆ. ಅದೇ ರೀತಿ ಮುಸುಕಿನ ಜೋಳ, ಈರುಳ್ಳಿ ಬೆಳೆಗೆ ಡಿಸೆಂಬರ್ 15 ಕೊನೆಯ ದಿನವಾಗಿದೆ. ಅದೇ ರೀತಿ ಕಡಲೆ ಬೆಳೆಗೆ ಡಿಸೆಂಬರ್ 30 ಕೊನೆಯ ದಿನವಾಗಿದೆ.

ನೀವು ಚಿಕ್ಕಮಗಳೂರು ಜಿಲ್ಲೆಯವರಾಗಿದ್ದರೆ ಟೊಮ್ಯಾಟೋ, ಜೋಳ, ಹುರುಳಿ, ಕಡಲೆ ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 1 ಕೊನೆಯ ದಿನವಾಗಿದೆ.

ಇದನ್ನೂ ಓದಿರೈತರು ಈ ಗುರುತಿನ ಚೀಟಿ ಪಡೆದರೆ ಬೆಳೆ ಪರಿಹಾರ ಜಮೆ: ಇಲ್ಲಿದೆ ಮಾಹಿತಿ

ದಾವಣಗೆರೆ ಜಿಲ್ಲೆಯವರಿಗೆ ಕಡಲೆ ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ. ಇದೇ ರೀತಿ ನೀವು ನಿಮ್ಮ ಜಿಲ್ಲೆಯಲ್ಲಿ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದು ಹಾಗೂ ಕೊನೆಯ ದಿನ ಯಾವುದು ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ರೈತರೇಕೆ ಬೆಳೆ ವಿಮೆ ಮಾಡಿಸಬೇಕು?

ಹಿಂಗಾರು ಬೆಳೆ ಹಾನಿಯಿಂದ ಪಾರಾಗಲು ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಮಂಜೂರು ಮಾಡಿದೆ. ಮುಂದಿನ ದಿನಗಳಲ್ಲಿ ಬೆಳೆ ಹಾನಿಯಿಂದ ಪಾರಾಗಲು ತಪ್ಪದೆ ಬೆಳೆ ವಿಮೆ ಮಾಡಿಸಿಕೊಳ್ಳಬಹುದು.

Insure your crops soon ಬೆಳೆ ವಿಮೆ ಮಾಡಿಸಲು ರೈತರಿಗೆ ಏನೇನು ಬೇಕು?

ಬೆಳೆ ವಿಮೆ ಮಾಡಿಸಲು ರೈತರು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರ, ಸಿ.ಎಸ್.ಸಿ ಕೇಂದ್ರಗಳಲ್ಲಿ ವಿಮೆ ಮಾಡಿಸಬಹುದು. ರೈತರು ಅರ್ಜಿಯೊಂದಿಗೆ ಆರ್.ಟಿ.ಸಿ (ಪಹಣಿ), ಪಾಸ್ ಬುಕ್, ಆಧಾರ್ ಕಾರ್ಡ್ ಪ್ರತಿಯನ್ನು ನೀಡಿ ಬೆಳೆ ವಿಮೆ ಮಾಡಿಸಿಕೊಳ್ಳಬಹುದು. ಅಧಿಸೂಚಿಸಲಾದ ಬೆಳೆಗಳಿಗೆ ವಿಮಾ ಪ್ತಸ್ತಾವನೆ ಸಲ್ಲಿಸಲು ಒಂದೊಂದು ಬೆಳೆಗಳಿಗೆ ಒಂದೊಂದು ದಿನಾಂಕದವರೆಗೆ  ಅವಕಾಶ ಲ್ಪಿಸಲಾಗಿದೆ. ಬೆಳೆ ವಿಮೆ ಮಾಡಿಸಲು ರೈತರಿಗೆ ಎಫ್ಐಡಿ ಸಂಖ್ಯೆ ಸಹ ಬೇಕಾಗುತ್ತದೆ.

ಬೆಳೆ ವಿಮೆ ಕುರಿತಂತೆ ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಸಂಪರ್ಕಿಸಬಹುದು.

Leave a Comment