ಕೊಳವೆ ಬಾವಿ ಕೊರೆಯಲು 3.50 ಲಕ್ಷವರೆಗೆ ಸಬ್ಸಿಡಿ ಇಲ್ಲಿದೆ ಮಾಹಿತಿ

Written by By: janajagran

Updated on:

Jeevjal scheme subsidy  ರೈತರು ತಮ್ಮ ಜಮೀನುಗಳಲ್ಲಿ ಕೊಳವೆ ಬಾವಿ ಕೊರೆಯಲು 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿರುವ ದಿನಾಂಕವನ್ನು ವಿಸ್ತರಿಸಲಾಗಿದೆ. ಇದಕ್ಕಿಂತ ಮುಂಚಿತವಾಗಿ ಏಪ್ರೀಲ್ 25 ಕಡೆಯ ದಿನಾಂಕವಾಗಿತ್ತು. ಈಗ ಈ ದಿನಾಂಕವನ್ನು ಮೇ 10ರವರೆಗೆ ವಿಸ್ತರಿಸಲಾಗಿದೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಡಿಯಲ್ಲಿ ಬರುವ ರೈತರು ಮೇ 10 ರೊಳಗೆ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು.

ಹೌದು, ಗಂಗಾ ಕಲ್ಯಾಣ ಯೋಜನೆಯಂತೆ ಜೀವಜಲ ಯೋಜನೆಯಡಿಯಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗದ ವತಿಯಿಂದ ನೀರಾವರಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ವೀರಶೈವ ಲಿಂಗಾಯತ ಸಮುದಾಯದ ಪ್ರ ವರ್ಗ-3 ಬಿ ಯಲ್ಲಿ ಒಳಪಡುವ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Jeevjal scheme subsidy  ಜೀವಜಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹತೆ

ಜೀವ ಜಲಯ ಯೋಜನೆಯಡಿಯಲ್ಲಿ ಸೌಲಭ್ಯಪಡೆಯಲಿಚ್ಚಿಸುವ ರೈತರು ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು.   ವಾರ್ಷಿಕ ವರಮಾನ 40, ಸಾವಿರ ರೂಪಾಯಿಗಳ ಮಿತಿಯಲ್ಲಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55   ವರ್ಷಗಳ ಮಿತಿಯಲ್ಲಿರಬೇಕು.

ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ 1ಎಕರೆ ಜಮೀನು ಹೊಂದಿರಬೇಕು.

ಮೇಲೆ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ 24 ಜಿಲ್ಲೆಗಳಿಗೆ ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ 2.50 ಲಕ್ಷ ರೂಪಾಯಿ ನಿಗದಿಪಡಿಸಲಾಗಿದ್ದು, ಇದರಲ್ಲಿ 2 ಲಕ್ಷ ರೂಪಾಯಿ ಸಹಾಯಧನ ಹಾಗೂ 50 ಸಾವಿರ ರೂಪಾಯಿ ಶೇ. 4 ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು.  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಘಟಕ ವೆಚ್ಚ4 ಲಕ್ಷ ರೂಪಾಯಿ ನಿಗದಿಪಡಿಸಲಾಗಿದ್ದು, ಇದರಲ್ಲಿ 3.50 ಲಕ್ಷ ಸಹಾಯಧನ ಹಾಗೂ 50 ಸಾವಿರ ರೂಪಾಯಿ ಶೇ. 4 ರ ಬಡ್ಡಿದರಲ್ಲಿಸಾಲ ನೀಡಲಾಗುವುದು. ನಿಗದಿತ ಘಟಕ ವೆಚ್ಚದಿಂದ ಜೀವಜಲ ಯೋಜನೆಯಡಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗದಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರಿ ಸೌಲಭ್ಯ ಒದಗಿಸಲಾಗುವುದು.

ಜೀವಜಲ ಯೋಜನೆಯಡಿಯಲ್ಲಿ ಕರೆಯಲಾಗಿರುವ ಅರ್ಜಿಯನ್ನು ರೈತರು ಆನ್ಲೈನ್ ಮೂಲಕವೇ ಡೌನ್ಲೋಡ್ ಮಾಡಿಕೊಳ್ಳಬಹುದು. ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಈ

 ಈ https://dbcdc.karnataka.gov.in/storage/pdf-files/%E0%B2%9C%E0%B3%80%E0%B2%B5%E0%B2%9C%E0%B2%B2%20%E0%B2%85%E0%B2%B0%E0%B3%8D%E0%B2%9C%E0%B2%BF.pdf

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅರ್ಜಿ ಓಪನ್ ಆಗುತ್ತದೆ. ಅರ್ಜಿಯಲ್ಲಿ ಕೇಳಲಾದ ಎಲ್ಲಾ  ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರಕಚೇರಿಯ ದೂರವಾಣಿ ಸಂಖ್ಯೆ 080 22865522 ಅಥವಾ ಆಯಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ನಿಗಮ ನಿಯಮಿತದ ದೂರವಾಣಿ ಸಂಖ್ಯೆಗಳನ್ನು ವೆಬ್ ಸೈಟ್ನನಲ್ಲಿ ನೀಡಲಾಗಿದೆ.

ಯಾವ ಯಾವ ದಾಖಲೆ ಇರಬೇಕು?

ಅರ್ಜಿ ಸಲ್ಲಿಸುವ ರೈತರಿಗೆ ಅರ್ಹ ಜಾತಿ ಮತ್ತು ಆದಾಯ ಪ್ರಮಾಣ ಪತ್ರಪಡೆದಿರಬೇಕು. ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು. ಹಾಗು ಅವರ ಕಾಯಂ ವಿಳಾಸ ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ಆಧಾರ ಕಾರ್ಡ್ ಹೊಂದಿರಬೇಕು.

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ಒಂದು ಕುಟುಂಬದಲ್ಲಿಒಬ್ಬರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈಗಾಲೇ ಬೇರೆ ಯಾವುದೇ ನಿಗಮಗಳ ಯೋಜನೆಯಡಿಯಲ್ಲಿ ಅಥವಾ ನಿಗಮದಲ್ಲೇ ಈ ಹಿಂದೆ ಸಾಲ ಸೌಲಭ್ಯ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳು ಹಾಗೂ ಅವರ ಕುಟುಂಬದವರು ಸೌಲಭ್ಯ ಪಡೆಯಲು ಅರ್ಹರಾಗಿರುವುದಿಲ್ಲ.

2 thoughts on “ಕೊಳವೆ ಬಾವಿ ಕೊರೆಯಲು 3.50 ಲಕ್ಷವರೆಗೆ ಸಬ್ಸಿಡಿ ಇಲ್ಲಿದೆ ಮಾಹಿತಿ”

Leave a Comment