job : ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪಾಸಾದ ಅಭ್ಯರ್ಥಿಗಳಿಗಿಲ್ಲಿದೆ ಗುಡ್ ನ್ಯೂ್ಸ್. ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಮಿನಿ ಉದ್ಯೋಗ ಮೇಳ ಆಯೋಜಿಸಾಗಿದೆ.
ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇದೇ ಜೂನ್ 20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳÀವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
job ವಿದ್ಯಾರ್ಹತೆ
ಜೋಯಾಲುಕ್ಕಾಸ್ದಲ್ಲಿ ಸೆಲ್ಸ್ ಎಕ್ಸಿಕ್ಯೊಟಿವ್, ಸೆಲ್ಸ್ ಟ್ರೇನಿ ಮತ್ತು ಆಫೀಸ್ಬಾಯ್ ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಫ್ಲಿಪ್ಕಾರ್ಟ್ದಲ್ಲಿ ಡೆಲಿವರಿ ಎಕ್ಸಿಕ್ಯೊಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 38ವರ್ಷದೊಳಗಿರಬೇಕು. ಹಬ್ ಸೊಟರ್ ಹುದ್ದೆಗೆ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 35 ವರ್ಷದೊಳಗಿರಬೇಕು.
ಅನ್ನಪೂರ್ಣ ಮೈಕ್ರೋ ಫೈನಾನ್ಸ್ದಲ್ಲಿ ಫೀಲ್ಡ್ ಕ್ರೆಡಿಟ ಆಫೀಸರ್ ಹುದ್ದೆ ಹಾಗೂ ಅಸಿಸ್ಟೆಂಟ್ ಬ್ರಾö್ಯಂಚ್ ಮ್ಯಾನೇಜರ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ/ ಪಿಯುಸಿ/ಐಟಿಐ/ಡಿಪ್ಲೋಮಾ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ಯುನಿಟ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 21 ರಿಂದ 32 ವರ್ಷದೊಳಗಿರಬೇಕು.
ಬ್ರೆಟ್ ಕಂಪ್ಯೂಟರ್ ಟ್ರೆನಿಂಗ್ ಇನ್ಸಿ÷್ಟಟ್ಯೂಟ್ದಲ್ಲಿ ಅಕೌಂಟೆAಟ್ ಹುದ್ದೆಗೆ ಬಿ.ಕಾಂ./ ಎಮ್.ಕಾಂ. ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ಟೀಚರ್ ಹುದ್ದೆಗೆ ಡಿಪ್ಲೋಮಾ ಬಿ.ಇ/ ಬಿ.ಎಸ್.ಸಿ (ಸಿ.ಎಸ್). ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 22 ರಿಂದ 40 ವರ್ಷದೊಳಗಿರಬೇಕು.
ಇದನ್ನೂ ಓದಿ ನೀವು ಯಾವ ಯಾವ ಬೆಳೆಗೆ ವಿಮೆ ಮಾಡಿಸಬಹುದು? ಇಲ್ಲಿದೆ ಮಾಹಿತಿ
ಸ್ವತಂತ್ರ ಮೈಕ್ರೋ ಫೈನಾನ್ಸ್ದಲ್ಲಿ ಕಲೆಕ್ಷನ್ ಆಫೀಸರ್ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ಶ್ರೀ ಸಾಯಿ ಅರ್ಥ ಮೂವರ್ಸ್ದಲ್ಲಿ ಸೆಲ್ಸ್ ಪಿಆರ್ಇ, ಸೆಲ್ಸ್ ಇಂಜಿನಿಯರ್, ಸಿ.ಆರ್.ಎಮ್/ಸಿ.ಆರ್.ಇ. ಮತ್ತು ಮಾರ್ಕೇಟಿಂಗ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರಬೇಕು. ಸರ್ವಿಸ್ ಇಂಜಿನಿಯರ್ ಹುದ್ದೆಗೆ ಐಟಿಐ/ಡಿಪ್ಲೋಮಾ (ಯಾವುದೇ ಟ್ರೇಡ್) ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಕ್ರೆಡಿಟ್ ಎಕ್ಸೆಸ್ ಗ್ರಾಮೀಣ ಲೀ.ದಲ್ಲಿ ರಿಲೇಷನ್ಶೀಫ್ ಆಫೀಸರ್ ಹುದ್ದೆಗೆ ಪಿಯುಸಿ/ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಅಫಜಲಪುರ ತಾಲೂಕಿನ ಚೌಡಾಪುರದ ಪೂಜ್ಯ ಶ್ರೀ ವಿ.ಎಲ್.ಭಟ್ಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಗ್ಲೀಷ ಮತ್ತು ಗಣಿತ ಶಿಕ್ಷಕರ ಹುದ್ದೆಗೆ ಎಮ್.ಎ., ಬಿ.ಎಡ್. ಎಮ್.ಎಸ್.ಸಿ. ಬಿ.ಎಡ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೇಟಾ) ಭಾವಚಿತ್ರಗಳು ಹಾಗೂ ಆಧಾರ್ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗಮೇಳÀದಲ್ಲ್ಲಿ ಭಾಗವಹಿಸಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.