ವಿವಿಧ ಹುದ್ದೆಗಳ ಭರ್ತಿಗೆ ಎಸ್ಎಸ್ಎಲ್ಸಿ, ಪಿಯುಸಿ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Written by Ramlinganna

Published on:

ವಿವಿಧ ಜಿಲ್ಲೆಗಳಲ್ಲಿಖಾಲಿಯಿರುವ ಹುದ್ದೆಗಳ ಭರ್ತಿಗೆ ವಿವಿಧ ಕಂಪನಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜೂನ್ 20 ರ ಮಂಗಳವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

ಐಡಿಎಫ್ ಫೈನಾನ್ಸಿಯಲ್ ಸರ್ವಿಸ್ ಪ್ರೈವೆಟ್ ಲಿಮಿಟೆಡ್ ನಲ್ಲಿ 20 ಹುದ್ದೆ ಇದ್ದು, ಫೀಲ್ಡ್ ಆಫೀಸರ್, ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗೆ ವಿದ್ಯಾರ್ಹತೆ 10ನೇ, ಪಿಯುಸಿ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು.

ಉದ್ಯೋಗ ಸ್ಥಳ ಸುರುಪುರ, ದೇವದುರ್ಗ, ಶಿರವಾಳ, ಯಡ್ರಾಮಿ, ಅಫಜಲ್ಪುರ, 18 ರಿಂದ 36 ವರ್ಷದೊಳಗಿರಬೇಕು. ಈ ನೇರ ಸಂದರ್ಶನಕ್ಕೆ ಬರುವ ಅಭ್ಯರ್ಥಿಗಳು ತಮ್ಮ ದಾಖಲಾತಿಗಳೊಂದಿಗೆ ವ್ಯಕ್ತಿ ಪರಿಚಯ ರಿಸ್ಯೂಮ್ , ಬಯೋಡಾಟಾದೊಂದಿಗೆ ಹಾಜರಾಗಬೇಕು. ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ನೇರ ಸಂದರ್ಶನ ನಡೆಯುವ ನಡೆಯುವ ಸ್ಥಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಯಾದಗಿರಿ, ಚಿತ್ತಾಪುರ ರಸ್ತೆ. ಜಿಲ್ಲಾಡಳಿತ ಭವನ (ಮಿನಿ ವಿಧಾನ ಸೌಧ) ರೂ. ನಂ. ಬಿ1, ಬಿ2 2ನೇ ಮಹಡಿ ಯಾದಗಿರಿ 585202.

ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 08473 253718, ಮೊಬೈಲ್ ನಂಬರ್ 9448250868 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ಬೀದರ್ ಅಂಚೆ ಅಧೀಕ್ಷಕರು ಬೀದರ್ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ ವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜೂನ್ 26 ರಂದು ಬೆಳಗ್ಗೆ 11 ಗಂಟೆಗೆ ಬೀದರ್ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ಸಂದರ್ಶನದಲ್ಲಿಹಾಜರಾಗಲು ಬೀದರ್ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿದ್ದು, ಕಡ್ಡಾಯವಾಗಿ 18 ರಿಂದ 50 ವರ್ಷದೊಳಗಿನವರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು 5000 ರೂಪಾಯಿಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.

ಇದನ್ನೂ ಓದಿ : ಪಿಎಂ ಕಿಸಾನ್ ಮುಂದಿನ ಕಂತು ಜಮೆಯಾಗಲಿ ಇಕೆವೈಸಿ ಕಡ್ಡಾಯ- ಇಕೆವೈಸಿ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ವವಹಾರಕ್ಕೆ ತಕ್ಕಂತೆ ಸೂಕ್ತ ಕಮಿಷನ್ ನೀಡಲಾಗುವುದು. ನಿಗದಿತ ವೇತನ ಇರುವುದಿಲ್ಲ. ಅಭ್ಯರ್ಥಿಗಳು ಬೇರೆ ಯಾವುದೇ ವಿಮಾ ಕಂಪನಿ, ಸಂಸ್ಥೆ, ಏಜೆಂಟ್ ಆಗಿರಬಾರದು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಸಂಪರ್ಕಿಸಬಹುದು.

ಬೆಳಗಾವಿಯಲ್ಲಿ ಉದ್ಯೋಗ ಮೇಳ

ಬೆಳಗಾವಿ ಜಿಲ್ಲೆಯ ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸುವ ಹಿನ್ನೆಲೆಯಲ್ಲಿ ಜೂನ್ 17 ರಂದು ಬೆಳಗಾವಿಯಲ್ಲಿ ಉಚಿತ ರೋಟರಿ ಮೆಗಾ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ಕ್ಲಬ್ ಆಫ್ ವೇಣು ಗ್ರಾಮ ಅಧ್ಯಕ್ಷ ಉಮೇಶ ರಾಮಗುರವಾಡಿ ತಿಳಿಸಿದರು.

ಬೆಳಗಾವಿ ನಗರ, ತಾಲೂಕು ಹಾಗೂ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರು ಈ ಮೇಳದಲ್ಲಿ ಪಾಲ್ಗೊಳ್ಳಬಹುದು.  ಜೂನ್ 17 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಳಗಾವಿ ಕ್ಲಬ್ ರಸ್ತೆಯ ಜ್ಯೋತಿ ಕಾಲೇಜು ಸಭಾ ಭವನದಲ್ಲಿ ಉದ್ಯೋಗ ಮೇಳ ನಡೆಯಲಿದೆ. 10 ಮತ್ತು 12ನೇ ತರಗತಿ ಮುಗಿಸಿದವರ ಜೊತೆಗೆ ಉನ್ನತ ಶಿಕ್ಷಣ ಪಡೆದವರು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.

19 ರಂದು ಉದ್ಯೋಗ ಮೇಳ

ಚಳ್ಳಕೆರೆ ನಗರದ ಚಿತ್ರದುರ್ಗ ರಸ್ತೆಯ ವಾಸವಿ ಪದವಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಜೂನ್ 19 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲಿಚ್ಚಿಸುವವರು ಜೂನ್ 18 ರ ಭಾನುವಾರದೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಪ್ರಾಂಶುಪಾಲ ಶ್ರೀರಾಮುಲು ಮನವಿ ಮಾಡಿದ್ದಾರೆ.

ಉದ್ಯೋಗ ಮೇಳದಲ್ಲಿ ಅಂತಿಮ ವರ್ಷದ ಪದವಿ ಮತ್ತು ಪದವಿ ಪೂರೈಸಿದ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಅವಕಾಶವಿದೆ.

ಜೂನ್ 17 ರಂದು ದಾವಣಗೆರೆಯಲ್ಲಿ ನೇರ ಸಂದರ್ಶನ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಾದರಿ ವೃತ್ತಿ ಕೇಂದ್ರದ ವತಿಯಿಂದ ಜೂನ್ 17 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ  08192 259446, ಮೊಬೈಲ್ ನಂಬರ್ 6361550016 ಗೆ ಸಂಪರ್ಕಿಸಬಹುದು.

Leave a comment