ಸೆಪ್ಟೆಂಬರ್ 23 ರಂದು ಕಲಬುರಗಿ, ಸೆಪ್ಟೆಂಬರ್ 24 ರಂದು ಮೈಸೂರು ಹಾಗೂ 27 ರಂದು ಹಾಸನದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಕಲಬುರಗಿ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಸೆಪ್ಟೆಂಬರ್ 23 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿವಿಧ ಕಂಪನಗಳಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಕೃಷಿ ಬಂದು ಕಂಪನಿಯಲ್ಲಿ ಅಕೌಂಟೆಂಟ್, ರಿಲೇಷನಶಿಷ್ ಆಫೀಸರ್, ವೆಬ್ ಮತ್ತು ಗ್ರಾಫಿಕ್ ಡಿಸೈನರ್, ವೆಬ್ ಡೆವಲಪರ್, ಟೆಲೆ ಕಾಲರ್, ಫೀಲ್ಡ್ ಆಫೀಸರ್, ಕಸ್ಟಮರ್ ಸಪೋರ್ಟ ಹುದ್ದೆಗಳಿಗೆ ಯಾವುದೇ ಪದವಿ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಕಂಪ್ಯೂಟರ್ ಅನುಭವ ಹೊಂದಿರಬೇಕು.
ಕಲಬುರಗಿ ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಕಂಪನಿಯಲ್ಲಿ ರಿಲೇಶನಶಿಪ್ ಆಫೀಸರ್ ಹುದ್ದೆಗಳಿಗೆ ಪಿಯುಸಿ, ಐಟಿಐ, ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 19 ರಿಂದ 28 ವರ್ಷದೊಳಗಿರಬೇಕು.
ಕಲಬುರಗಿ ಐಸಿಐಸಿಐ ಹೋಮ್ ಫೈನಾನ್ಸ್ ನಲ್ಲಿ ಕ್ರೆಡಿಟ್ ಮ್ಯಾನೇಜರ್, ಸೆಲ್ಸ್ ಮ್ಯಾನೇಜರ್ ಮತ್ತು ಸೇಲ್ ಆಫೀಸರ್ ಹುದ್ದೆಗಳಿಗೆ ಯಾವುದೇ ಪದವಿ ಹೊಂದಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಹೋಮ್ ಲೋನ್ ನಲ್ಲಿ ಅನುಭವ ಹೊಂದಿರಬೇಕು.
ಕಲಬುರಗಿ ಹೆಚ್.ಡಿಎಫ್.ಸಿ ಬ್ಯಾಂಕ್ ಲಿಮಿಟೆಡ್ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯುಟಿವ್ ಕಂಪನಿಯಲ್ಲಿ ಸೇಲ್ಸ್ ಎಕ್ಸಿಕ್ಯುಟಿವ್ ಹುದ್ದೆಗೆ ಯಾವುದೇ ಪದವಿ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಯಾದಗಿರಿ, ಶಹಾಪೂರ, ಬಿಜಾಪುರ, ರಾಯಚೂರಿನಲ್ಲಿ ಹುದ್ದೆಗಳಿಗೆ ಅವಕಾಶವಿದೆ.
ಕಲಬುರಗಿ ಸ್ವತಂತ್ರ ಮೈಕ್ಸೋಫಿನ್ ಪ್ರೈವೆಟ್ ಲಿಮಿಟೆಡ್ ಕಂಪನಿಯಲ್ಲಿ ಫೀಲ್ಡ್ ಆಫೀಸರ್ ಹುದ್ದೆಗಳಿಗಾಗಿ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 28 ವರ್ಷದೊಳಗಿನವರು ಸಂದರ್ಶನದಲ್ಲಿ ಭಾಗವಹಿಸಬಹುದು.
ಆಸಕ್ತಿಯುಳ್ಳ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳು ತಮ್ಮಬಯೋಡಾಟಾ ಹಾಗೂ ಆಧಾರ್ ಕಾರ್ಡ್ ದೊಂದಿಗೆ ಭಾಗವಹಿಸಬಹುದು. ವಿದ್ಯಾರ್ಹತಯ ಪ್ರಮಾಣ ಪತ್ರ, ಆಧಾರ್ ಕಾರ್ಡಗಳೊಂದಿಗೆ ಸೆಪ್ಟೆಂಬರ್ 23 ರಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472 274846 ಗೆ ಸಂಪರ್ಕಿಸಬಹುದು.
ಮೈಸೂರಿನಲ್ಲಿ ಸೆಪ್ಟೆಂಬರ್ 24 ರಂದು ಉದ್ಯೋಗ ಮೇಳ
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಸೆಪ್ಟೆಂಬರ್ 24 ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ.
ಇದನ್ನೂ ಓದಿ : ಎಸ್ಎಸ್ಎಲ್ಸಿ ಪಾಸಾದ ಅಭ್ಯರ್ಥಿಗಳಿಗೆ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
ಉದ್ಯೋಗ ಮೇಳದಲ್ಲಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 18 ರಿಂದ 35 ವಯೋಮಾನದೊಳಗಿರಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ, ಎಂಬಿಎ, ಸ್ನಾತಕೋತ್ತರ ಪದವಿ ಅಭ್ಯರ್ಥಿಗಳು ಹಾಜರಾಗಬೇಕು. ವಿದ್ಯಾರ್ಹತೆ ಅಂಕಪಟ್ಟಿ ಝರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರವುಳ್ಳ ಬಯೋಡಾಟಾ ಪ್ರತಿಗಳೊಂದಿಗೆ 1ನೇ ಮೇನ್, 6ನೇ ಅಡ್ಡರಸ್ತೆ, ರಾಮಲಿಂಗೇಶ್ವರ, ದೇವಸ್ಥಾನದ ಹತ್ತಿರ ವಿದ್ಯಾರಣ್ಯಪುರಂನಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಮೈಸೂರು ದೂರವಾಣಿ ಸಂಖ್ಯೆ 0821 2489972 ಗೆ ಸಂಪರ್ಕಿಸಬಹುದು.
ಸೆಪ್ಟೆಂಬರ್ 27 ರಂದು ಉದ್ಯೋಗ ಮೇಳ
ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 27 ರಂದು ಬೆಳಗ್ಗೆ 10 ಗಂಟೆಯಿಂದ 1.30 ರವರೆಗೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿಈ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಜಿಲ್ಲೆಯ ಹೆಸರಾಂತ ಕಂಪನಿಗಳು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡುತ್ವವೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮಾ, ಐಟಿಐ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆ ಹೊಂದಿದ 18 ರಿಂದ 30 ವಯೋಮಾನದೊಳಗಿನವರು ಭಾಗವಹಿಸಬಹುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08172 296374, 8660141863, 9900849750 ಗೆ ಸಂಪರ್ಕಿಸಬಹುದು.