ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪಾಸಾದ ಅಭ್ಯರ್ಥಿಗಳಿಗೆ ಆಗಸ್ಟ್ 4 ಹಾಗೂ 6 ರಂದು ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಆಗಸ್ಟ್ 4 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ನಗರದ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಓಎಫ್ಎಕ್ಸ್, ಟ್ರೇಡ್ ಸಾಫ್ಟ್ ವೇರ ದಲ್ಲಿ ಜಾವಾ ಡೆವಲಪರ್ ಟೆಸ್ಟಿಂಗ್ ಇಂಜನಿಯರಿಂಗ್ ಡಿಸೈನರ್ ಹುದ್ದೆಗೆ ಬಿಸಿಎ, ಎಂಸಿಎ, ಬಿಟೆಕ್, ಎಂಟೆಕ್, (ಸಿ.ಎಸ್.ಐಟಿ, ಇಸಿ, ಇಇ) ಬಿ.ಎಸ್.ಸಿ, ಎಮ್.ಎಸ್.ಸಿ, ವಿದ್ಯಾರ್ಹತೆ ಹೊಂದಿರಬೇಕು. ಆಡ್ಮಿನ್ ಎಚ್.ಆರ್. ಅಕೌಂಟೆಂಟ್ ಹುದ್ದೆಗೆ ಬಿಬಿಎ, ಬಿಕಾಂ, ಎಂ.ಬಿ.ಎ, ಎಂಕಾಂ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವಯೋಮಾನದೊಳಗಿರಬೇಕು. ಕೃಷಿ ಬಂಧುವಲ್ಲಿ ಬಿಜಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವಯೋಮಾನದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿ ಝರಾಕ್ಸ್, ರೆಸ್ಯೂಮ್ (ಬಯೋಡಾಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472 274846. ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.
ಆಗಸ್ಟ್ 6 ರಂದು ಬೃಹತ್ ಉದ್ಯೋಗ ಮೇಳ
ಕಾರವಾರ ಜಿಲ್ಲೆಯ ದಿವೇಕರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಗಸ್ಟ್ 6 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. 15 ಕ್ಕೂ ಹೆಚ್ಚಿನ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ ಎಂದು ಪ್ರಾಚಾರ್ಯ ಡಾ. ಕೇಶವ ಕೆ.ಜಿ. ತಿಳಿಸಿದ್ದಾರೆ.
ಅವರು ನಗರದಲ್ಲಿ ಸೋಮವಾರ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 9ರಿಂದ ಸಾಯಂಕಾಲ 5ರವರೆಗೆ ಸಂದರ್ಶನ ನಡೆಯಲಿದೆ. ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ, ಡಿಪ್ಲೋಮಾ ಒಳಗೊಂಡು ಎಲ್ಲಾ ರೀತಿಯ ವಿದ್ಯಾರ್ಹತೆ ಇದ್ದವರು ಪಾಲ್ಗೊಳ್ಳಬಹುದಾಗಿದೆ. ಸ್ವ ವಿವರ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಪಾಸ್ ಪೋರ್ಟ್ ಸೈಜ್ ಫೋಟೋ ತರಬೇಕು.
ಹೆಸರು ನೋಂದಾಯಿಸಲು 8884461669, 8884461670 ದೂರವಾಣಿಗೆ ಕರೆ ಮಾಡಬಹುದು ಅಥವಾ ಸಂದರ್ಶನದ ದಿನವೇ ಆಗಮಿಸಿ ಹೆಸರು ನೋಂದಾಯಿಸಿಕೊಳ್ಳಲು ಕೂಡಾ ಅವಕಾಶವಿದೆ ಎಂದು ತಿಳಿಸಿದರು.
ಕೆನರಾ ವೆಲ್ ಫೇರ್ ಟ್ರಸ್ಟ್ ನಿಂದ ಚರ್ಚಾ, ಭಾಷಣ ಸ್ಪರ್ಧೆ ಒಳಗೊಂಡು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸುಪ್ರಿಂಕೋರ್ಟ್ ನ್ಯಾಯವಾದಿ ದೇವದತ್ತ ಕಾಮತ್ ಅವರು ಆಸಕ್ತಿಯಿಂದ ಇಂತಹ ಕಾರ್ಯಕ್ರಮ ಮಾಡಲು ಬೆಂಬಲ ನೀಡುತ್ತಿದ್ದಾರೆ ಎಂದರು.
ಕೃಷ್ಣಾನಂದ ಶೆಟ್ಟಿ, ನಾಗರಾಜ ಮಡಿವಾಳ, ಫಯಾಜ್ ಮೊಹ್ಮದ್ ಇದ್ದರು.
ಅಗ್ನಿಪತ್ ಯೋಜನೆಯ ಅಗ್ನಿವೀರ್ ಪ್ರವೇಶಕ್ಕೆ ಅರ್ಜಿ
ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್ಲೈನ್ ಮೂಲಕ ಆಯ್ಕೆ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಹಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ತೇರ್ಗಡೆ ಹೊಂದಿರಬೇಕು. ಹಾಗೂ ಗಣಿತ, ಭೌತಶಾಸ್ತ್ರ, ಇಂಗ್ಲೀಷ್ ವಿಷಯಗಳಲ್ಲಿ ಕನಿಷ್ಠ ಶೇ. 50 ಅಂಕ ಪಡೆದಿರಬೇಕು. ಅಥವಾ 3 ವರ್ಷದ ಡಿಪ್ಲೋಮಾದಲ್ಲಿ ತೇರ್ಗಡೆ ಹೊಂದಿರಬೇಕು. ಅದರಲ್ಲಿ ಶೇ. 50 ಅಂಕಗಳೊಂದಿಗೆ ತೇರ್ಗಡೆ ಹಾಗೂ ಇಂಗ್ಲೀಷ್ ನಲ್ಲಿ ಕನಿಷ್ಠ ಶೇ. 50 ಅಂಕಗಳೊಂದಿಗೆ ತೇರ್ಗಡೆ ಹೊಂದಿರಬೇಕು.
ಆನ್ಲೈನ್ ನಲ್ ನಲ್ಲಿ ಆಗಸ್ಟ್ 17 ರವರೆಗೆ