Job fair on 15th july : ಎಸ್.ಎಸ್.ಎಲ್.ಸಿ,ಪಿಯುಸಿ,ಪದವಿ,ಐಟಿಐ ಹಾಗೂ ಡಿಪೋಲಮಾ ಪಾಸಾದವರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹೌದು, ನೀವು ವಿವಿಧ ಉದ್ಯೋಗಕ್ಕಾಗಿ ಕಾಯುತ್ತಿದ್ದರೆ ನಿಮಗಾಗಿ ಇಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ವಿಶ್ವ ಕೌಶಲ್ಯ ದಿನದ ಅಂಗವಾಗಿ ಜುಲೈ 15 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸೆಲ್ಕೋ ಸೋಲಾರ್ ಲೈಟ್ ಪ್ರೈವೆಟ್ ಲಿಮಿಟೆಡ್ ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 25 ವಯೋಮಾನದೊಳಗಿರಬೇಕು. ಯತ್ ಫಾರ್ ಸೇವಾದಲ್ಲಿ ಟೆಲಿಕಾಲರ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 40 ವಯೋಮಾನದೊಳಗಿರಬೇಕು.
ಕಿಯಾಮೋಟರ್ಸ್ ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ , ಟೆಲಿಕಾಲರ್, ಇನ್ಸುರೆನ್ಸ್ ಎಕ್ಸಿಕ್ಯೂಟಿವ್, ರೆಸೆಪ್ಸನಿಸ್ಟ್ ಹುದ್ದೆಗೆ ಯಾವುದೇ ಪದವಿ ಮತ್ತು ಟೆಕ್ನಿಶಿಯನ್ ಹುದ್ದೆಗೆ ಐಟಿಐ ,ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ18 ರಿಂದ 30 ವಯೋಮಾನದೊಳಗಿರಬೇಕು
Job fair on 15th july ಐಟಿಐ ಡಿಪ್ಲೋಮಾ ಪಾಸಾದವರಿಗೆ ಉದ್ಯೋಗಾವಕಾಶ
ಸ್ವತಂತ್ರ ಮೈಕ್ರೋ ಫೈನಾನ್ಸ್ ದಲ್ಲಿ ಫೀಲ್ಡ್ ಆಫೀಸರ್ ಸೀನಿಯರ್ ಫೀಲ್ಡ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು. ರಿಲೇಶನ್ಸಿಪ್ ಆಫೀಸರ್, ಬ್ರ್ಯಾಂಚ್ ಮ್ಯಾನೇಜರ್, ಏರಿಯಾ ಮ್ಯಾನೇಜರ್ ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 34 ವಯೋಮಾನದೊಳಗಿರಬೇಕು.
ಟ್ಯಾಲಿ ಸಲ್ಯೂಶನ್ ಆ್ಯಂಡ್ ಆದಿತ್ಯ ಮೆಡಿಕಲ್ ಸೋರ್ ದಲ್ಲಿ ಬಿಜಿನೆಸ್ ಕನ್ಸಲೆಂಟ್ ಹುದ್ದೆಗೆ ಯಾವುದೇ ಪದವಿ, ಟೆಲಿಕಾಲರ್ ಹುದ್ದೆಗೆ ಪಿಯುಸಿ, ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಬಿ ಫಾರ್ಮಾ, ಡಿ ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು.ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು.
ಬೆವೆರೆಜ್ ಐಎನ್ಸಿದಲ್ಲಿ ಅಪ್ರೆಂಟಿಶಿಪ್ ಹುದ್ದೆಗೆ ಐಟಿಐ, ಎಲೆಕ್ಟ್ರಿಶಿಯನ್, ಫಿಟ್ಟರ್ ವಿದ್ಯಾರ್ಹತೆ ಹೊಂದಿರಬೇಕು. ಮಶೀನ್ ಆಪರೇಟರ್ಹುದ್ದೆಗೆ ಡಿಪ್ಲೋಮಾ ಎಲೆಕ್ಟ್ರಿಶಿಯನ್ ಮೆಕ್ಯಾನಿಕಲ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ18 ರಿಂದ 25 ವಯೋಮಾನದೊಳಗಿರಬೇಕು.
ಇದನ್ನೂ ಓದಿ : ಮೊಬೈಲ್ ನಂಬರ್ ಹಾಕಿ ನಿಮಗೆಷ್ಟು ಹಣ ಜಮೆ ಚೆಕ್ ಮಾಡಿ
ಕ್ರೆಡಿಟ್ ಎಕ್ಸಸ್ ಗ್ರಾಮೀಣ ಲೀ.ದಲ್ಲಿ ಟ್ರೈನಿ ಕೇಂದ್ರ ಮ್ಯಾನೇಜರ್ ಹುದ್ದೆಗೆ ಪಿಯುಸಿ, ಐಟಿಐ, ಡಿಪ್ಲೋಮಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವಯೋಮಾನದೊಳಗಿರಬೇಕು.
ಯುನೈಟೆಡ್ ಆಸ್ಪತ್ರೆಯಲ್ಲಿ ಡ್ಯೂಟಿ ಡಾಕ್ಟರ್ ಹುದ್ದೆಗೆ ಎಂಬಿಬಿಎಸ್, ಬಿಎಚ್ಎಮ್ಎಸ್, ಬಿಎಎಮ್ಎಸ್ ವಿದ್ಯಾರ್ಹತೆ ಹೊಂದಿರಬೇಕು. ನರ್ಸಿಂಗ್ ಸ್ಟಾಫ್ ಐಸಿಯು, ಎಚ್.ಡಿ.ಯು, ಕ್ಯಾಜುವಲ್ಟಿ ಹುದ್ದೆಗೆ ಜಿಎನ್ಎಮ್, ಬಿಎಸ್.ಸಿ ವಿದ್ಯಾರ್ಹತೆ ಹೊಂದಿರಬೇಕು. ಸಿಎಸ್.ಎಸ್.ಡಿ ಟೆಕ್ನಿಶಿಯನ್ ಹುದ್ದೆಗೆ ಡಿಪ್ಲೋಮಾ, ಬಿ.ಎಸ್.ಸಿ, ಇನ್ ಸಿಎಸ್ಎಸ್ಡಿ ವಿದ್ಯಾರ್ಹತೆ ಹೊಂದಿರಬೇಕು. ಓಟಿ ಟೆಕ್ನಿಶಿಯನ್ ಹುದ್ದೆಗೆ ಡಿಪ್ಲೋಮಾ ಬಿಎಸ್.ಸಿ ಇನ್ ಓಟಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವಯೋಮಾನದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡಾಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472 274846, ಮೊಬೈಲ್ ಸಂಖ್ಯೆ 9620095270 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.