Job fair on 17 and 18th may ವಿವಿಧ ಕಂಪನಿಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗಾಗಿ ಬಿ.ಎ, ಬಿ.ಎಸ್,ಸಿ ಬಿ ಇಡಿ, ಡಿಬ್ಲೋಮಾ, ಬಿ.ಇಕ, ಬಿಟೆಕ್ ವಿದ್ಯಾರ್ಥಿಗಳಿಗೆ ಮೇ 17 ಮತ್ತು 18 ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಹೌದು, ಇದೇ ಮೇ 18 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಎಸ್.ಆರ್.ಜೆ ಗ್ರೂಪ್ ಆಫ್ ಇನಸ್ಟಿಟ್ಯೂಶನ್ ನಲ್ಲಿ ಶಿಕ್ಷಕರ ಹುದ್ದೆಗೆ ಯಾವುದೇ ಪದವಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು. ಎನ್.ಟಿ.ಟಿ.ಎಫ್ ದಲ್ಲಿ ಟಿ.ಒ.ಟಿ (ಟ್ರೈನಿ) ಹುದ್ದೆಗೆ ಡಿಪ್ಲೋಮಾ , ಬಿ.ಇ. ಬಿ.ಟೆಕ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 25 ವರ್ಷದೊಳಗಿರಬೇಕು.
ಉದ್ಯೋಗ ಮೇಳದಲ್ಲಿ ಭಾಗವಹಿಸಲಿಚ್ಚಿಸುವ ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್ , ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 274846 ಗೆ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.
Job fair on 17 and 18th may ಯಾದಗಿರಿ ಜಿಲ್ಲೆಯಲ್ಲಿ ಮೇ 17 ರಂದು ಉದ್ಯೋಗ ಮೇಳ
ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮೇ 17 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಶಿ ಸೂಪರ್ ಬಜಾರ್ ನಲ್ಲಿ ಕಂಪ್ಯೂಟರ್ ಆಪರೇಟರ್, ಸೆಲ್ಸ್ ಮ್ಯಾನ್, ಕ್ಯಾಶಿಯರ್, ಸ್ಟೋರ್ ಕೀಪರ್, ಡ್ರೈವರ್ ಹುದ್ದಗೆ 11 ಹುದ್ದೆಗಳು ಖಾಲಿಯಿವೆ.
10ನೇ ತರಗತಿ ಅಥವಾ ಅದಕ್ಕಿಂತ ಮೇಲ್ಪಟ್ಟು ಪಾಸ್ ಆಗಿರಬೇಕು. ಯಾದಗಿರಿ ಉದ್ಯೋಗ ಸ್ಥಳವಾಗಿದೆ. 20 ರಿಂದ 30 ವರ್ಷ ಒಳಗಿರಬೇಕು. ಈ ನೇರಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ದಾಖಲೆಗಳೊಂದಿಗೆ ಬಯೋಡಾಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ, ಚಿತ್ತಾಪುರ ರಸ್ತೆ, ಜಿಲ್ಲಾಡಳಿತ ಭವನ (ಮಿನಿ ವಿಧಾನಸೌಧ) ಬಿ-ಬ್ಲಾಕ್, ದೂರವಾಣಿ ಸಂಖ್ಯೆ 08473 253718, ಮೊಬೈಲ್ 9448250868 ಗೆ ಸಂಪರ್ಕಿಸಬಹುದು.
ಮೇ 16 ರಂದು ಕ್ಯಾಂಪಸ್ ಸಂದರ್ಶನ
ಬೆಂಗಳೂರಿನ ಜಿಗಣಿ ಕಿರ್ಲೋಸ್ಕರ್ ಟೋಯೋಟೋ ಟೆಕ್ಸಟೈಲ್ಸ್ ಮಶಿನರಿ ಪ್ರೈವೆಟ್ ಲಿಮಿಟೆಡ್ ವತಿಯಿಂದ ಐಟಿಐ ವೃತ್ತಿಯ ಫಟ್ಟರ್, ಎಲೆಕ್ಟ್ರಿಶಿಯನ್, ಟರ್ನರ್, ವೆಲ್ಡರ್ ಪಾಸಾದ ಹಾಗೂ ಪ್ರಸ್ತುತ ಕೊನೆಯ ವರ್ಷದಲ್ಲಿ ಅಭ್ಯಸಿಸುತ್ತಿರುವ ಶಿಶುಕ್ಷು ತರಬೇತಿ ಪಡೆಯದೇಇರುವ ತರಬೇತುದಾರರಿಗೆ ಇದೇ ಮೇ 16 ರಂದು ಬೆಳಗ್ಗೆ 9 ಗಂಟೆಗೆ ಕಲಬುರಗಿ ನಗರದ ಎಂ.ಎಸ್.ಕೆ ಮಿಲ್ ರಸ್ತೆಯಲ್ಲಿರುವ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಇದನ್ನೂ ಓದಿ : ನಿಮ್ಮ ಆಧಾರ್ ಕಾರ್ಡಿಗೆ ಯಾವ ಮೊಬೈಲ್ ನಂಬರ್ ಲಿಂಕ್ ಆಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಅಭ್ಯರ್ಥಿಗಳ ವಯೋಮಿತಿ 19 ರಿಂದ 23 ವರ್ಷದೊಳಗಿರಬೇಕು. ಮೇಲ್ಕಂಡ ದಿನದಂದು ನಡೆಯುವ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ತಮ್ಮ ಎಸ್.ಎಸ್.ಎಲ್.ಸಿ ಮತ್ತು ಐಟಿಐ ಅಂಕಪಟ್ಟಿ ಇರಬೇಕು. ಇತ್ತೀಚಿನ ಎರಡು ಭಾವಚಿತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಹಾಗೂ ಇತರೆ ಮೂಲ ದಾಖಲಾತಿ ಹಾಗೂ ಝರಾಕ್ಸ್ ಪ್ರತಿಗಳೊಂದಿಗೆ ಕಲಬುರಗಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಯಲ್ಲಿ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ಮೊಬೈಲ್ ಸಂಖ್ಯೆ 7259272146 ಗೆ ಸಂಪರ್ಕಿಸಲು ಕೋರಲಾಗಿದೆ.