ಜನವರಿ 24, 25 ರಂದು ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ

Written by Ramlinganna

Updated on:

Job fair on 24th and 25th january ಹುಬ್ಬಳ್ಳಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಜನವರಿ 24 ರಿಂದ ಜಿಲ್ಲಾವಾರು ಉದ್ಯೋಗ ವಿನಿಮಯ ಕಚೇರಿಗಳ ವತಿಯಿಂದ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಲು ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹೌದು, ಹುಬ್ಬಳ್ಳಿ ನವ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಜನವರಿ 24 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 7 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ, ತಮ್ಮ ಸಂಸ್ಥೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಯಾವುದೇ ಪದವಿ, ಐಟಿಐ ಡಿಪ್ಲೋಮಾ (ಮೆಕ್ಯಾನಿಕಲ್, ಅಟೋಮೊಬೈಲ್, ಎಲೆಕ್ಟ್ರಿಕಲ್), ಬಿಇ (ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಅಟೋಮೊಬೈಲ್) ಪೂರೈಸಿದ 18 ರಿಂದ 35 ವಯೋಮಿತಿಯ ಅಭ್ಯರ್ಥಿಗಳು ಅಗತ್ಯದಾಖಲೆಗಳೊಂದಿಗೆ

https://forms.gle/3qV6Ynq3hggvftpG6

ವೆಬ್ಸೈಟ್ ಮುಖಾಂತರ ನೋಂದಣಿ ಮಾಡಿಕೊಂಡು ಸಂದರ್ಶನಕ್ಕೆ ಭಾಗವಹಿಸಬೇಕು.

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ನವನಗರ, ಹುಬ್ಬಳ್ಳಿ ಅಥವಾ ದೂರವಾಣಿ ಸಂಖ್ಯೆ 0836 2225288, 9806905751, 9845826523 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Job fair on 24th and ಜನವರಿ 25 ರಂದು ಉದ್ಯೋಗ ಮೇಳ

ಕೊಪ್ಪಳ ನಗರದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜನವರಿ 25 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಖಾಸಗಿ ಸಂಸ್ಥೆಗಳು ಭಾಗವಹಿಸಿ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. 18 ರಿಂದ30 ವಯೋಮಾನದ ಪಿಯುಸಿ / ತತ್ಸಮಾನ, ಡಿಪ್ಲೋಮಾ, ಐಟಿಐ, ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಇದನ್ನು ಓದಿ ಈ ಪಟ್ಟಿಯಲ್ಲಿದ್ದವರಿಗೆ ಬರಗಾಲ ಹಣ ಜಮೆ-ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಾಬ್ ಡ್ರೈವ್ ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ 81056 93234 ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲಾ ಮತ್ತು ಪ್ರಾದೇಶಿಕ ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ 7 ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.

ಉದ್ಯೋಗ ಮೇಳ ನಡೆಸುವುದರಿಂದ ಐಟಿ ಬಿಟಿ, ಹೋಟೆಲ್, ಉತ್ಪಾದನಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ ಯುವತಿಯರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಬೇಡಿಕೆಗೆ ಅನುಗುಣವಾಗಿ ಯುವ ಜನತೆಗೆ ಉದ್ಯೋಗಗಳನ್ನು ನೀಡಿ ಸ್ವಾವಲಂಬಿಯನ್ನಾಗಿ ಮಾಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಉದ್ಯೋಗ ಮೇಳವನ್ನು ಆಯೋಜಿಸಲು ಮುಂದಾಗಿದೆ.

Leave a Comment