job fair on 4th january : ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜನವರಿ 4 ರಂದು ಶನಿವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.20 ರವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಮಹತ್ವದ ಮಾಹಿತಿ ಪಡೆೆೆೆೆಯಿರಿ
ಬೈಯೂ ಫುಡ್ಸ್ ದಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಅಥವಾ ಎಂಬಿಎ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವಯೋಮಾನದೊಳಗಿರಬೇಕು. ಅಭ್ಯರ್ಥಿಗಳು ದ್ವಿಚಕ್ರ ವಾಹನ ಮತ್ತು ಡಿ.ಎಲ್ ಕಡ್ಡಾಯವಾಗಿ ಹೊಂದಿರಬೇಕು. ಝೋಮ್ಯಾಟೋದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ, ಪಿಯುಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ45 ವಯೋಮಾನದೊಳಗಿರಬೇಕು.
ಮೈಸೂರಿನ ಸಿಪೆಟ್ ದಲ್ಲಿ ಮೆಶಿನ್ ಆಪರೇಟರ್ ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್ ಹುದ್ದೆಗೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರಬೇಕು.ಮಿಶನ್ ಆಪರೇಟರ್ ಇಂಜೆಕ್ಷನ್ ಮೌಲ್ಡಿಂಗ್ ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಅಥವಾ ಯಾವುದೇ ಪದವಿ ಹೊಂದಿರಬೇಕು. ಮೆಶಿನ್ ಆಪರೇಟರ್ ಆ್ಯಂಡ್ ಪ್ರೋಗ್ರಾಮರ್ ಸಿಎನ್.ಸಿ ಲೆತ್ ಹುದ್ದೆಗೆ ಐಟಿಐ ಟರ್ನರ್ ಫಿಲ್ಟರ್ ಅಥವಾಎಲೆಕ್ಟ್ರಿಕಲ್ ವಿದ್ಯಾರ್ಹತೆ ಹೊಂದಿರಬೇಕು. ಪ್ಲಾಸ್ಟಿಕ್ ಪ್ರಾಡೆಕ್ಟ್ ಆ್ಯಂಡ್ ಮೌಲ್ಟ್ ಡಿಸೈನ್ ಹುದ್ದೆಗೆ ಐಟಿಐ ಡಿಪ್ಲೋಮಾನ ಮೆಕ್ಯಾನಿಕಲ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು.
job fair on 4th January ಯಾವ ಯಾವ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರಿನ ಸಿಪೆಟ್‌ದಲ್ಲಿ ಮೆಶೀನ್ ಆಪರೇಟರ್ ಪ್ಲಾಸ್ಟಿಕ್ಸ್ ಪ್ರೊಸೆಸಿಂಗ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ಮೆಶಿನ್ ಆಪರೇಟರ್-ಇಂಜೆಕ್ಷನ್ ಮೌಲ್ಡಿಂಗ್ ಹುದ್ದೆಗೆ ಎಸ್.ಎಸ್.ಎಲ್.ಸಿ/ಪಿಯುಸಿ/ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಮೆಷಿನ್ ಆಪರೇಟರ್ ಆಂಡ್ ಪ್ರೋಗ್ರಾಮರ್ ಸಿಎನ್‌ಸಿ ಲೆತ್ ಹುದ್ದೆಗೆ ಐಟಿಐ ಟರ್ನರ್/ಫಿಟ್ಟರ್/ಎಲೆಕ್ಟಿçಕಲ್ ವಿದ್ಯಾರ್ಹತೆ ಹೊಂದಿರಬೇಕು. ಪ್ಲಾಸ್ಟಿಕ್ಸ್ ಪ್ರಾಡೆಕ್ಟ್ ಆಂಡ್ ಮೌಲ್ಟ್ ಡಿಸೈನ್ ಹುದ್ದೆಗೆ ಐಟಿಐ / ಡಿಪ್ಲೋಮಾ (ಮೆಕ್ಯಾನಿಕ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಇದನ್ನೂ ಓದಿ : ನಿಮ್ಮ ಜಮೀನಿನ ಆಕಾರಬಂದ್ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿ
ಮೂತ್ತೂಟ್ ಫೈನಾನ್ಸ್ದಲ್ಲಿ ಎಚ್.ಆರ್. ಇಂಟರ್ನ್ ಹುದ್ದೆಗೆ, ಸೇಲ್ಸ್ ಟ್ರೈನಿ ಹುದ್ದೆ, ಕಸ್ಟಮರ್ ಕೇರ್ ಎಕ್ಸಿಕ್ಯೊಟಿವ್ ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. ದ್ವಿಚಕ್ರ ವಾಹನ ಮತ್ತು ಡಿಎಲ್ ಕಡ್ಡಾಯವಾಗಿ ಹೊಂದಿರಬೇಕು. ಎಚ್.ಸಿ.ಜಿ. ಕ್ಯಾನ್ಸರ್ ಕೇರ್ ಆಸ್ಪತ್ರೆಯಲ್ಲಿ ರಜಿಸ್ಟರ್ಡ್ ನರ್ಸ್ ಹುದ್ದೆಗೆ ಜಿ.ಎನ್.ಎಮ್. ವಿದ್ಯಾರ್ಹತೆ ಹೊಂದಿರಬೇಕು. ಎಕ್ಸಿಕ್ಯೊಟಿವ್ ಫ್ರಂಟ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಬಯೋ ಮೆಡಿಕಲ್ ಇಂಜಿನಿಯರ್ ಹುದ್ದೆಗೆ ಡಿಪ್ಲೋಮಾ (ಇಇಇ) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‌ಕಾರ್ಡ್ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗ ಮೇಳÀದಲ್ಲ್ಲಿ ಭಾಗವಹಿಸಬೇಕು. ನೇರ ಸಂದರ್ಶನ ದಲ್ಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು, ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.
ಜನವರಿ 11 ರಿಂದ 13 ರವರೆಗೆ ಬೃಹತ್ ಕೃಷಿ ಮೇಳ
ವಿಜಯಪುರ ನಗರದ ಹೊರವಲಯದಲ್ಲಿರುವ ಹಿಟ್ನಳ್ಳಿ ಫಾರ್ಮ್ ನಲ್ಲಿ ಕೃಷಿ ವಿಶ್ವವಿದ್ಯಾಲಯ ಆವರಣ, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಜನವರಿ 11 ರಿಂದ 13 ರವರೆಗೆ ಬೃಹತ್ ಕೃಷಿ ಮೇಳ ಆಯೋಜಿಸಲಾಗಿದೆ.
ಕೃಷಿಮೇಳದಲ್ಲಿ ಏನೇನಿರಲಿದೆ
ಆಧುನಿಕ ಕೃಷಿ ತಂತ್ರಜ್ಞಾನ ಮಾಹಿತಿಯ ಜೊತೆಗೆ ಬೃಹತ್ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ರೈತರಿಗೆ ಆಧುನಿಕ ಬೇಸಾಯ ಕ್ರಮಗಳ ಕುರಿತಂತೆ ಕಾಲ ಕಾಲಕ್ಕೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಆಗುತ್ತಿರುವ ನಿರಂತರ ಸಂಶೋಧನೆಗಳ ಫಲಿತಾಂಶಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಮೇಳಗಳಂತಹ ಬೃಹತ್ ವಿಸ್ತರಣಾ ಕಾರ್ಯಕ್ರಮಗಳು ಬಹಳ ಮಹತ್ವವನ್ನುಪಡೆದಿವೆ. ರೈತರಿಗೆ ಆಶಾಕಿರಣವಾಗಿರುವ ಈ ಸಲದ ಕೃಷಿ ಮೇಳದ ಸಮಿತಿ ಅಧ್ಯಕ್ಷ ಹಾಗೂ ಡೀನ್ ಡಾ ಅಶೋಕ ಸಜ್ಜನ, ಸಹ ಸಂಶೋಧನಾ ನಿರ್ದೇಶಕಡಾ. ಎಸ್.ಬಿ. ಜಗ್ಗಿನವರ, ಜಂಟಿ ಕೃಷಿ ನಿರ್ದೇಶಕಿ ಡಾ. ರೂಪಾ ಎಲ್. ಸಹ ವಿಸ್ತರಣಾ ನಿರ್ದೇಶಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಡಾ. ಆರ್.ಬಿ. ಬೆಳ್ಳಿ ಕೋರಿದ್ದಾರೆ.