SSLC ಪಾಸಾವದಿರಗೆ 8 ರಿಂದ ಇಲ್ಲಿ ಉದ್ಯೋಗ ಮೇಳ

Written by Ramlinganna

Updated on:

Job fair 8th September ಹುಬ್ಬಳ್ಳಿ, ಕಲಬುರಗಿ, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 8 ರಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಹೌದು, ಹುಬ್ಬಳ್ಳಿಯ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಟೆಲಿ ಕಾಲರ್ ಮತ್ತು ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೀಲಿಜಿನ್ ರಸ್ತೆಯ ತಿರುಮಲ ಟ್ರೇಡ್ ಸೆಂಟರ್ ನಲ್ಲಿರುವ ಕಿರಣ ಇನ್ಫೋಟೆಕ್ ನಲ್ಲಿ ಹಮ್ಮಿಕೊಳ್ಳಲಾಗಿದೆ.

ಬಿಕಾಂ, ಹಾಗೂ ಎಂಕಾಂ ಪದವೀಧರ 18 ರಿಂದ 32 ವಯಸ್ಸಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ತಮ್ಮ 1 ಭಾವಚಿತ್ರ, ಆಧಾರ್ ಕಾರ್ಡ್, ಬಯೋಡಾಟಾ (ರೆಸ್ಯೂಮ್) ಗಳ ಪ್ರತಿಗಳೊಂದಿಗೆ ಹಾಜರಾಗಬೇಕು.

https://surveyheart.com/form/643ce5a6bc01c4083b072455

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಸ್ಟಾರ್ಟ್ ಮೇಲೆ ಕ್ಲಿಕ್ ಮಾಡಿ  ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ  ನೋಂದಣಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836 2225288, 8453208555, 9806905751, 9480869880 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Job fair 8th September ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್ 8 ರಂದು ನೇರ ಸಂದರ್ಶನ

ಮಂಡ್ಯ ಜಿಲ್ಲೆಯ ಮೆ. ಪೇಟಿಎಂ ಇವರು ಎಸ್.ಎಸ್.ಎಲ್.ಸಿ ಉತ್ತೀರ್ಣ ಮೇಲ್ಪಟ್ಟು ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಸೆಪ್ಟೆಂಬರ್8 ರಂದು ಬೆಳಗ್ಗೆ 10.30 ಗಂಟೆಗೆ ಮಂಡ್ಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಆಸಕ್ತರು 2 ಭಾವಚಿತ್ರಗಳು, ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಅಂಕಪಟ್ಟಿ ಪ್ರತಿ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಭಾಗವಹಿಸಬಹುದು.

ಇದನ್ನೂ ಓದಿ ನಿಮ್ಮ ಜಮೀನನ ಖಾತಾ / ಪಟ್ಟಾ ಪ್ರತಿ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ

ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 9164642684 ಮತ್ತು 08232 295124 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿಯಲ್ಲಿ ಸೆಪ್ಟೆಂಬರ್ 8 ರಂದು ನೇರ ಸಂದರ್ಶನ

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಸೆಪ್ಟೆಂಬರ್ 8 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲಬುರಗಿ ಮುತ್ತೂಟ್ ಮೈಕ್ರಿಫಿನ್ ದಲ್ಲಿ ರಿಲೇಶನ್ ಶಿಪ್, ಆಫೀಸರ್ ಹುದ್ದೆಗೆ ಪಿಯುಸಿ ಅಥವಾ ಯಾವುದೇ ಪದವಿ ಪಾಸಾಗಿರಬೇಕು. ಶ್ರೀ ಬಸವ ಅಗ್ರಿಟೆಕ್ (ಜಾನ್ ಡೀರ್ ಟ್ರ್ಯಾಕ್ಟರ್ಸ್)ದಲ್ಲಿ ಸೇಲ್ಸ್, ಎಕ್ಸಿಕ್ಯೂಟಿವ್ ಹುದ್ದೆಗೆ ಪಿಯುಸಿ ಅಥವಾ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವಯೋಮಾನದೊಳಗಿರಬೇಕು. ಕನೆಕ್ಟ್ ಬಿಜಿನೆಸ್ ಸಲ್ಯೂಶನ್ ದಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಹುದ್ದೆಗೆ ಪಿಯುಸಿ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು. ಆಸಕ್ತರು ತಮ್ಮದಾಖಲೆಗಳೊಂದಿಗೆ ಸಂದರ್ಶಕ್ಕೆ ಹಾಜರಾಗಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗೆ 08472 274846, ಮೊಬೈಲ್ ನಂಬರ್ 9620095270 ಗೆ ಸಂಪರ್ಕಿಲು ಕೋರಲಾಗಿದೆ.

ಸೆಪ್ಟೆಂಬರ್ 15 ರಂದು ತುಮಕೂರು ಜಿಲ್ಲೆಯಲ್ಲಿ ನೇರ ಸಂದರ್ಶನ

ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಥರ್ಮೋವ್ಯಾಕ್ ಏರೋಸ್ಪೇಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಸೆಪ್ಟೆಂಬರ್ 15 ರಂದು ಬೆಳಗ್ಗೆ 10.30 ರಿಂದ 1 ರವರೆಗೆ ನೇರ ಸಂದರ್ಶನ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಐಟಿಐ (ಫಿಟ್ಟರ್) , ಡಿಪ್ಲೋಮಾ (ಮೆಕ್ಯಾನಿಕಲ್), ಬಿಇ (ಮೆಕ್ಯಾನಿಕಲ್) ಪಾಸಾದ ಪುರುಷ  ಹಾಗೂ ಮಹಿಳಾ ಅಭ್ಯರ್ಥಿಗಳು ಅನುಭವ ಹೊಂದಿರುವ ಡಿಪ್ಲೋಮಾ ಮತ್ತು ಐಟಿಐ ಪ್ರೆಶರ್ಸ್, ಮಾರ್ಕೆಟಿಂಗ್ ನಲ್ಲಿ ಎಂಬಿಎ ಮಾಡಿರುವ ಯಾವುದೇ ಅಭ್ಯರ್ಥಿಯು ಸೆಪ್ಟೆಂಬರ್ 15 ರವರೆಗೆ ಬೆಳಗ್ಗೆ 10.30 ರಿಂದ 1 ರವರೆಗೆ ಪ್ಲಾಟ್ ನಂ. 548 ಸೋಂಪುರ, 2ನೇ ಸ್ಟೇಜ್, ಬೀರಗೊಂಡನಹಳ್ಳಿ, ತ್ಯಾಮಗೊಂಡ್ಲು, ನೆಲಮಂಗಲ, ಬೆಂಗಳೂರು 562111 ಇಲ್ಲಿ  ಬಯೋಡೆಟಾದೊಂದಿಗೆ ಸಂದರ್ಶಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08162278488 , 9606955152 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು  ತಿಳಿಸಿದ್ದಾರೆ.

Leave a Comment