job fair on 9th may : ಮೇ 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಹೌದು, ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಮೇ 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಉದ್ಯೋಗ ಮೇಳದಲ್ಲ್ಲಿ ಭಾಗಹಿಸಲಿರುವ ಕಂಪನಿಗಳ ವಿವರ ಇಂತಿದೆ: ಮಣಪ್ಪುರಂ ಫೈನಾನ್ಸ್ದಲ್ಲಿ ಸೆಲ್ಸ್ ಎಕ್ಸಿಕ್ಯೊಟಿವ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಭಾರತ ಫೈನಾನ್ಸ್ದಲ್ಲಿ ಟೇಲಿಕಾಲರ್ ಹುದ್ದೆಗೆ ಪಿಯುಸಿ/ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಆಕಾಶ ಇನ್ಸ್ಸ್ಟಿಟ್ಯೂಟ್‌ದಲ್ಲಿ ಅಡಮೀಷನ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 21 ರಿಂದ 45 ವರ್ಷದೊಳಗಿರಬೇಕು. ಸ್ಪಂದನಾ ಸ್ಫೂರ್ತಿ ಫೈನಾನ್ಸ್ದಲ್ಲಿ ಫೀಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ/ಐಟಿಐ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 19 ರಿಂದ 27 ವರ್ಷದೊಳಗಿರಬೇಕು. ರಿಲಿಯಾನ್ಸ್ ನಿಪೋನ್ ಲೈಫ್ ಇನ್ಸೂರೆನ್ಸ್ದಲ್ಲಿ ಲೈಫ್ ಪ್ಲಾನಿಂಗ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 30 ರಿಂದ 45 ವರ್ಷದೊಳಗಿರಬೇಕು. ಮಹಿಳಾ ಅಭ್ಯರ್ಥಿಗಳು ಮಾತ್ರ ಭಾಗವಹಿಸಬೇಕು.
job fair on 9th may ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಕಲಬುರಗಿ ಎಸ್.ಆರ್.ಜೆ. ಗ್ರೂಪ್ ಆಫ್ ಇನ್ಸ್ಸ್ಟಿಟ್ಯೂಷನ್ಸ್ದಲ್ಲಿ ಶಿಕ್ಷಕರ ಹುದ್ದೆಗೆ ಪಿಯುಸಿ/ ಯಾವುದೇ ಪದವಿ ಮತ್ತು ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 35 ವರ್ಷದೊಳಗಿರಬೇಕು. ದೊಡ್ಲಾದಲ್ಲಿ ಸೇಲ್ಸ್ ಆಂಡ್ ಮಾರ್ಕೆಟಿಂಗ್ ಎಕ್ಸಿಕ್ಯೊಟಿವ್ ಹುದ್ದೆ ಹಾಗೂ ಪಿ.ಎಸ್.ಆರ್. ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ಅಕೌಂಟ್ಸ್ ಹುದ್ದೆಗೆ ಬಿ.ಕಾಮ್. ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರ ಹಾಗೂ ಆಧಾರ್‌ಕಾರ್ಡ್ ದಾಖಲೆಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬೇಕು. ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.
ಡಿಪ್ಲೋಮಾ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ
ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಹತ್ತಿರವಿರುವ ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ನಡೆಸಲಾಗುತ್ತಿರುವ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ.) ಯಲ್ಲಿ 2025-26ನೇ ಸಾಲಿಗೆ ಡಿಪ್ಲೋಮಾ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಕೋರ್ಸಿಗೆ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕೆ.ಜಿ.ಟಿ.ಟಿ.ಐ. ಪ್ರಾಂಶುಪಾಲರು ತಿಳಿಸಿದ್ದಾರೆ.
ಈ ಕೋರ್ಸಿನ ತರಬೇತಿ ಅವಧಿಯು 4 ವರ್ಷ ಇದ್ದು, (ಇದರಲ್ಲಿ 3 ವರ್ಷದ ಬೋಧನಾ ತರಬೇತಿ ಹಾಗೂ 1 ವರ್ಷದ ಕಡ್ಡಾಯ ವೇತನ ಸಹಿತ ಕೈಗಾರಿಕಾ ತರಬೇತಿ ಒಳಗೊಂಡಿರುತ್ತದೆ) ಹಾಗೂ ಎಐಸಿಟಿಇ (ಂIಅಖಿಇ) ಯಿಂದ ಅನುಮೋದನೆಗೊಂಡಿರುತ್ತದೆ. ಈ ಸಂಸ್ಥೆಯಲ್ಲಿ ಸುಸಜ್ಜಿತ ಮೂಲ ಸೌಕರ್ಯ ಮತ್ತು ಆಧುನಿಕ ಯಂತ್ರೋಪಕರಣಗಳನ್ನು ಹೊಂದಿದ್ದು, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಹಾಸ್ಟೇಲ್ ಸೌಲಭ್ಯ ಕಲ್ಪಿಸಲಾಗಿದೆ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕೆ.ಜಿ.ಟಿ.ಟಿ.ಐ. ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 8884886172, 8660171836, 9902345676 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.