ಕಲಬುರಗಿ, ಹುಬ್ಬಳ್ಳಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ವಿವಿಧ ಕಂಪನಿಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಜೂನ್ 23 ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಹೌದು, ಹುಬ್ಬಳ್ಳಿ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಜೂನ್ 23 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೇಳದಲ್ಲಿ 7 ರಿಂದ 9 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ ತಮ್ಮ ಸಂಸ್ಥೆಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶ ನಡೆಸಲಿದ್ದಾರೆ.
18 ರಿಂದ 35 ವಯೋಮಿತಿಯ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
https://surveyheart.com/form/643ce5a6bc01c4083b072455
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಲಿಂಕ್ ಓಪನ್ ಆಗುತ್ತದೆ. ಅಲ್ಲಿ ಸ್ಟಾರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಆಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ಲಿಂಗ, ಹುಟ್ಟಿದ ದಿನಾಂಕ ಈ ಮೇಲ್ ಐಡಿ, ಆಧಾರ್ ಕಾರ್ಡ್, ಮೊಬೈಲ್ ನಂಬರ್ ನಮೂದಿಸಿ ಸಂದರ್ಶನಕ್ಕೆ ಅರ್ಜಿ ಸಲ್ಲಿಸಬೇಕು.
ವೆಬ್ ಸೈಟ್ ಮೂಲಕ ನೋಂದಣಿ ಮಾಡಿಕೊಂಡು ಸಂದರ್ಶನಕ್ಕೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ನವನಗರ, ಹುಬ್ಬಳ್ಳಿ ಅಥವಾ ದೂರವಾಣಿ ಸಂಖ್ಯೆ 0836 2225288, ಮೊಬೈಲ್ ನಂಬರ್ 9480869880, 8453208555, 8197440155 ಗೆ ಕರೆ ಮಾಡಬಹುದು. ಕಚೇರಿ ವೇಳಯಲ್ಲಿ ಕಚೇರಿಗೆ ಸಂಪರ್ಕಿಸಬಹುದು.
ಕಲಬುರಗಿ ಜಿಲ್ಲೆಯಲ್ಲಿ ನೇರ ಸಂದರ್ಶನ
ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉಧ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜೂನ್ 23 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ
ಎಮ್.ಪಿ ಗಾರ್ಡಿಂಗ್ ಸೊಲ್ಯೂಶನ್ ಪ್ರೈವೆಟ್ ಲಿಮಿಟೆಡ್ ದಲ್ಲಿ ಟೆಕ್ನಿಶಿಯನ್ ಹುದ್ದೆಗೆ ಐಟಿಐ / ಡಿಪ್ಲೋಮಾ (ಇ ಆ್ಯಂಡ್ ಇ, ಇ ಆ್ಯಂಡ್ ಸಿ) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ವಾಲ್ವಾಯ್ಲ್ ಫ್ಲೂಯ್ಡ್ ಪವರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ದಲ್ಲಿ ಟ್ರೈನಿ ಹುದ್ದೆಗೆ ಐಟಿಐ / ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ನೀಡ್ಸ್ ಮ್ಯಾನ್ ಪವರ್ ಸಪೋರ್ಟ್ ಸರ್ವಿಸಸ್ ಪ್ರೈವೆಟ್ ಲಿಮಿಟೆಡ್ ದಲ್ಲಿ ಟೆಕ್ನಿಶಿಯನ್ ಹುದ್ದೆಗೆ ಐಟಿಐ / ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು.
ಇದನ್ನೂ ಓದಿ : Ration card status ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡಾಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಧ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 274846 ಹಾಗೂ ಮೊಬೈಲ್ ನಂಬರ್ 96200 95270 ಗೆ ಸಂಪರ್ಕಿಸಲು ಕೋರಲಾಗಿದೆ.
ಹಾವೇರಿಯಲ್ಲಿ ಜುಲೈ 23 ರಂದು ಮಿನಿ ಉದ್ಯೋಗ ಮೇಳ
ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂನ್ 23 ರಂದು ಬೆಳಗ್ಗೆ 11 ಗಂಟೆಗೆ ಗಾಂಧಿಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಖಾಸಗಿ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ ಪಿಯುಸಿ, ಐಟಿಐ, ಡಿಪ್ಲೋಮಾ ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ 18 ರಿಂದ 35 ವರ್ಷದೊಳಗಿನ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು.
ಉದ್ಯೋಗಾಕಾಂಕ್ಷಿಗಳು ಕನಿಷ್ಠ 5 ಬಯೋಡಾಟಾ ಹಾಗೂ ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಉದ್ಯೋಗ ಮೇಳದ ದಿನದಂದು ಕಡ್ಡಾಯವಾಗಿ ನೋಂದಾಯಿಸಿಕೊಂಡು ಉದ್ಯೋಗ ಮೇಳಕ್ಕೆ ಹಾಜರಾಗಬಹುದು.