ಉದ್ಯೋಗ ಮೇಳ-ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಪಾಸಾದವರಿಗೆ ಉದ್ಯೋಗಾವಕಾಶ

Written by Ramlinganna

Updated on:

ಚಿತ್ರದುರ್ಗ ಜಿಲ್ಲಾಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಾರ್ಚ್ 18 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಯುಜಿಕಿ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನೆಲಮಂಗಲ, ಬೆಂಗಳೂರು ಮತ್ತು ಇಟನ್ ಏರೋಸ್ಪೇಸ್ ದೇವನಹಳ್ಳಿ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮೆಕಾನಿಕಲ್, ಎಲೆಕ್ಟ್ರಿಕಕಲ್, ಎಲೆಕ್ಟ್ರಾನಿಕ್ಸ್, ವಿದ್ಯಾರ್ಹತೆಯುಳ್ಳವರು ಅಪ್ರೆಂಟಿಸ್ ಹುದ್ದೆಗಳಿಗೆ ನೇರ ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಬಹುದು.

18 ರಿಂದ 26 ವರ್ಷದೊಳಗಿನ ವಯೋಮಿತಿಯವರು 5 ಪ್ರತಿ ಬಯೋಡಾಟಾ, ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು.

ಹೆಚ್ಚಿನ ಮಾಹಿತಿತಾಗಿ ಜಿಲ್ಲಾ ಉಧ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 7022459064, 8310785143, 8105619020 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 17 ರಂದು ಬೆಳಗ್ಗೆ 10.30 ರಿಂದ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳು

ಆದಿತ್ಯ ಬಿರ್ಲಾ ಲೈಫ್ ಇನ್ಸುರೆನ್ಸ್ ಏಜಿನ್ಸಿ ಪಾರ್ಟರ್, ಅಸೋಸಿಯೇಟ್ ಏಜೆನ್ಸಿ ಪಾರ್ಟರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವಯೋಮಾನದೊಳಗಿರಬೇಕು.

ಭಾರತ ಫೈನಾನ್ಸಿಯಲ್ ಇನಕ್ಲುಜಸ್ ಲಿಮಿಟೆಡ್ ದಲ್ಲಿ ಫೀಲ್ಡ್ ಅಸಿಸ್ಟೆಂಟ್, ಲೋನ್ ಆಫೀಸರ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪಿಯುಸಿ ಅಥವಾ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು.

ಪ್ಲಿಪ್ ಕಾರ್ಟ್ ದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವಯೋಮಾನದೊಳಗಿರಬೇಕು. ಕೃಷಿ ಬಂಧುದಲ್ಲಿ ಬಿಜಿನೆಸ್ ಡೆವಲಪ್ಮೆಂಟ್ ಆಫೀಸರ್ ಆನ್ಲೈನ್ ಸೇಲ್ಸ್ ಆ್ಯಂಡ್ ಮಾರ್ಕೆಟಿಂಗ್, ಸೋಶಿಯಲ್ ಮಿಡಿಯಾ ಪ್ಲಾರ್ಟ್ ಫಾಮ್ ಹಾಗೂ ವೆಬ್ಸೈಟ್ ಡಿಸೈಲನ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸ್ಯೂಮ್ (ಬಯೋಡಾಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.

ಇದನ್ನೂ ಓದಿ : ರೈತರ ಜಮೀನಿಗೆ ಹೋಗುವ ಕಾಲಾದಾರಿ, ಬಂಡಿದಾರಿ ಹಳ್ಳಕೊಳ್ಳಗಳ, ಬೆಟ್ಟಗುಡ್ಡಗಳ ಮಾಹಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿತಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472 274846 ಗೆ ಸಂಪರ್ಕಿಸಲು ಕೋರಲಾಗಿದೆ.

ವಿದೇಶದಲ್ಲಿ ಉದ್ಯೋಗಾವಕಾಶ ಅಭ್ಯರ್ಥಿಗಳ ನೋಂದಣಿಗೆ ಸೂಚನೆ

ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಂತಾರಾಷ್ಟೀಯ ವಲಸೆ ಕೇಂದ್ರ ಮೂಲಕ ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ವಿದೇಶದಲ್ಲಿ ಉದ್ಯೋಗಕ್ಕಾಗಿ ನೋಂದಣಿ ಮಾಡಿಕೊಳ್ಳಬೇಕೆಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್ ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತಿಯುಳ್ಳ ಅಭ್ಯರ್ಥಿಗಳು ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಕಿಯೋನಿಕ್ಸ್ ಬಿಲ್ಡಿಂಗ್, ಹೈಕೋರ್ಟ್ ಎದುರುಗಡೆ, ಕಲಬುರಗಿ ಕಚೇರಿಗೆ ಭೇಟಿ ನೀಡಿ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೃಷ್ಣ ಕಟ್ಟಿಮನಿ ಮೊಬೈಲ್ ಸಂಖ್ಯೆ 8197674505 ಹಾಗೂ ಅರುಣಕುಮಾರ ಸಜ್ಜನ ಇವರ ಮೊಬೈಲ್ ಸಂಖ್ಯೆ  9632214436 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment