ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ರಾಮನಗರ, ಚಿತ್ರದುರ್ಗ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಮನಗರ ಜಿಲ್ಲೆಯ ಹಾರೋಹಳ್ಳಿ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ 2 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 15 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಹಾರೋಹಳ್ಳಿ ಶಿಶು ಅಭಿವೃದ್ಧಿಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಜೂನ್ 21 ರ ಸಾಯಂಕಾಲ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ನಾಗೇಶ ಬಿಲ್ಡಿಂಗ್, ಕೃಷ್ಣಸ್ವಾಮಿ ದೇವಸ್ಥಾನದ ಎದುರು ರಸ್ತೆ ಕೋಟೆ, ಹಾರೋಹಳ್ಳಿ ರಾಮನಗರ ಜಿಲ್ಲೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ನಂಬರ್ 7892933001 ಗೆ ಸಂಪರ್ಕಿಸಲು ಕೋರಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಮನಗರದ ಜಿಲ್ಲೆಯೆ 5 ತಾಲೂಕುಗಳ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಮನಗರ ಜಿಲ್ಲೆಯ 5 ತಾಲೂಕುಗಳ 5 ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 8 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 22 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದವರಿಗೆ ಎಷ್ಟು ಎಕರೆ ಜಮೀನಿದೆ? ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಆಸಕ್ತ ಮಹಿಳಾ ಅರ್ಜಿದಾರರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸ್ವೀಕರಿಸಿ ಮೊಹರು ಮಾಡಿದ ಲಕೋಟೆಯಲ್ಲಿ ನಿಗದಿತ ಅವಧಿಯೊಳಗೆ ಸಂಬಂಧಪಟ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜೂನ್ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯತ್ ಭವನ, 2ನೇ ಮಹಡಿ, ಬಿ.ಎಂ. ರಸ್ತೆ, ರಾಮನಗರ ಜಿಲ್ಲೆ, ದೂರವಾಣಿ ಸಂಖ್ಯೆ 080 29524996 ಗೆ ಸಂಪರ್ಕಿಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಹುದ್ದೆಗೆ ಅರ್ಜಿ ಆಹ್ವಾನ
ಚಿತ್ರದುರ್ಗ ತಾಲೂಕಿನ ಭರಮಸಾಗರದ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 7 ಅಂಗನವಾಡಿ ಕಾರ್ಯಕರ್ತೆ 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮೀಸಲಾತಿ ಆಧಾರದ ಮೇಲೆ 19 ರಿಂದ 35 ವರ್ಷ ವಯೋಮಿತಿಯೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್16 ಕೊನೆಯ ದಿನವಾಗಿದೆ.
ಭರಮಸಾಗರ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿಯನ್ನು ಪಡೆದು ಅರ್ಹ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ವಿ.ಪಿ. ಬಡಾವಣೆ, 2ನೇ ಕ್ರಾಸ್, ಶ್ರೀನಿವಾಸ ಆಸ್ಪತ್ರೆ, ಹತ್ತಿರ, ಚಿತ್ರದುರ್ಗ ಜಿಲ್ಲೆ 577501 ಇವರನ್ನು ಸಂಪರ್ಕಿಸಬಹುದು ಎಂದು ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಿದ್ದಕಾರಣ ಮೇ 10ರವರೆಗೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಭರ್ತಿಗೆ ಅರ್ಜಿ ಪಡೆಯುವುದನ್ನು ತಡೆಹಿಡಿಯಲಾಗಿತ್ತು. ಈಗ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.
Good