Job notification in post office ಎಸ್ಎಸ್ಎಲ್ಸಿ ಪಾಸಾದ ಅಭ್ಯರ್ಥಿಗಳಿಗಿಲ್ಲಿದೆ ಗುಡ್ ನ್ಯೂಸ್. ಹೌದು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿಯಿರುವ 40,889 ಪೋಸ್ಟ್ ಮ್ಯಾನ್ (ಗ್ರಾಮೀಣ ಡಾಕ್ ಸೇವಕ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದೇಶಾದ್ಯಂತ ಕರೆಯದ 40889 ಹುದ್ದೆಗಳಲ್ಲಿ ಕರ್ನಾಟಕದಲ್ಲಿ 3036 ಹುದ್ದೆಗಳು ಖಾಲಿಯಿವೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 16 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುವುದಿಲ್ಲ.
Job notification in post office ಆನ್ಲೈನ್ ನಲ್ಲಿ ಹುದ್ದೆಗಳ ವಿವರ ಚೆಕ್ ಮಾಡಲು ಕ್ಲಿಕ್ ಮಾಡಿ
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://indiapostgdsonline.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪೇಜ್ ಓಪನ್ ಆಗುತ್ತದೆ. ಅಲ್ಲಿ ಕರ್ನಾಟಕದ ಮೇಲೆ ಕ್ಲಿಕ್ ಮಾಡಬೇಕು. ನಂತರ ಜಿಲ್ಲೆಗಳು ಕಾಣಿಸುತ್ತವೆ. Select Division ನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ವೀವ್ ಪೋಸ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕಲಬುರಗಿ ಜಿಲ್ಲೆಯಲ್ಲಿರುವ ಪೋಸ್ ಆಫೀಸ್ ಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎಂಬುದನ್ನು ನಮೂದಿಸಲಾಗಿರುತ್ತದೆ. ವಿದ್ಯಾರ್ಹತೆ ಏನಿರಬೇಕು ಎಂಬುದು ತೋರಿಸಲಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು
ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು. ಅಭ್ಯರ್ಥಿಗೆ 18 ವರ್ಷ ಪೂರ್ಣಗೊಂಡಿರಬೇಕು. 40 ವರ್ಷದೊಳಗಿರಬೇಕು. ಎಸ್.ಸಿ ಎಸ್ಯಿಯವರಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಗೆ ಯಾವ ರಾಜ್ಯದಲ್ಲಿ ಅರ್ಜಿ ಸಲ್ಲಿಸಲಿಚ್ಚಿಸುವರೋ ಆ ರಾಜ್ಯದ ಭಾಷೆ ಬರಬೇಕು. ಕಂಪ್ಯೂಟರ್ ಜ್ಞಾನ ಇರಬೇಕು. ಸೈಕಲ್ ನಡೆಸಲು ಬರಬೇಕು.
ಆನ್ಲೈನ್ ನಲ್ಲಿಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://indiapostgdsonline.gov.in/Reg_validation.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಹಕಾಬೇಕು. ಇ ಮೇಲ್ ಐಡಿ ನಮೂದಿಸಬೇಕು. ಅಭ್ಯರ್ಥಿಯ ಹೆಸರು ಅಂಕಪಟ್ಟಿಯಲ್ಲಿರುವಂತೆ ಹಾಕಿ, ತಂದೆಯ ಹೆಸರು ನಮೂದಿಸಬೇಕು.ನಂತರ ಹುಟ್ಟಿದ ದಿನಾಂಕ, ಲಿಂಗ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ನಮೂದಿಸಬೇಕು. ವಿದ್ಯಾರ್ಹತೆ ಆಯ್ಕೆ ಮಾಡಿಕೊಳ್ಳಬೇಕು. ಯಾವ ವರ್ಷ ಉತ್ತೀರ್ಣರಾಗಿದ್ದಾರೆ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ
ಆಗ ನಿಮ್ಮ ಹೆಸರು ನೋಂದಣಿಯಾಗುತ್ತದೆ. ನಿಮಗೆ ರೆಜಿಸ್ಟರ್ ನಂಬರ್ ಕ್ರಿಯೇಟ್ ಆಗುತ್ತೆದೆ. ಈ ರಿಜಿಸ್ಟರ್ ನಂಬರ್ ದಿಂದಾಗಿ ನೀವು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ನಿಮ್ಮ ರಿಜಿಸ್ಟರ್ ನಂಬರ್ ಹಾಗೂ ಯಾವ ರಾಜ್ಯದಲ್ಲಿ ಅರ್ಜಿ ಸಲ್ಲಿಸಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆ ಮಾಡಿಕೊಂಡು ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿ ಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 16 ರೊಳಗೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಶುಲ್ಕ ಎಷ್ಟಿರುತ್ತದೆ.?
ಅರ್ಜಿ ಶುಲ್ಕವು ಕೇವಲ 100 ರೂಪಾಯಿ ಇರುತ್ತದೆ.
ಯಾವ ಹುದ್ದೆಗೆ ಎಷ್ಟು ವೇತನ ಇರುತ್ತದೆ?
ಬ್ರ್ಯಾಂಚ್ ಪೋಸ್ ಮಾಸ್ಟರ್ ಹುದ್ದೆಗೆ 12000-29380 ವೇತನ ಇರುತ್ತದೆ. ಅದೇ ರೀತಿ ಅಸಿಸ್ಟೆಂಟ್ ಬ್ಯ್ಯಾಂಚ್ ಪೋಸ್ ಮಾಸ್ಟರ್ ಹುದ್ದೆಗೆ 10000-24,470 ಮೂಲ ವೇತನ ಇರುತ್ತದೆ. ಪೋಸ್ಟ್ ಮ್ಯಾನ್ ಹುದ್ದೆಗೆ 10,000- 24470 ವೇತನ ಇರುತ್ತದೆ.