38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by By: janajagran

Updated on:

Job notification in postal department ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗಿಲ್ಲಿದ ಭರ್ಜರಿ ಗುಡ್ ನ್ಯೂಸ್. ಹೌದು, ಭಾರತೀಯ ಅಂಚೆ ಇಲಾಖೆಯ ಬೃಹತ್ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಕರ್ನಾಟಕದ 2410 ಹುದ್ದೆಗಳು ಸೇರಿದಂತೆ ದೇಶಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆಮೇ 2 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ. ಜೂನ್ 5 ರವರೆಗೆ ಅಭ್ಯರ್ಥಿಗಳು ಆನ್ಲೈನ್ ನಲ್ಲಿಅರ್ಜಿ ಸಲ್ಲಿಸಬಹುದು.

ಅಂಚೆ ಇಲಾಖೆಯಲ್ಲಿ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

ಹುದ್ದೆಯ ಹೆಸರು:  ಗ್ರಾಮೀಣ ಡಾಕ್ ಸೇವಕ್

ಕರ್ನಾಟಕದಲ್ಲಿ ಒಟ್ಟು ಹುದ್ದೆಗಳು:  2410

ಒಟ್ಟು ಹುದ್ದೆಗಳು: 38926

ವಿದ್ಯಾರ್ಹತೆ:

ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅರ್ಜಿ ಸಲ್ಲಿಸಬಯುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸಾಗಿರಬೇಕು. ಐಟಿಐ, ಡಿಪ್ಲೋಮಾ ಪಡೆದವರೂ ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು, ಬರೆಯಲು ಹಾಗೂ ಮಾತಾಡಲು ಬರಬೇಕು. ಅಭ್ಯರ್ಥಿಗೆ ಬೇಸಿಕ್ ಕಂಪ್ಯೂಟರ್ ಜ್ಞಾನ ಇರಬೇಕು.

ವಯಸ್ಸು:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಸರಿಯಾಗಿ ಅಭ್ಯರ್ಥಿಗೆ ಕನಿಷ್ಠ18 ವರ್ಷ ತುಂಬಿರಬೇಕು. ಗರಿಷ್ಠ 40 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಇಗೆ 3 ವರ್ಷ ವಯಮಿತಿ ಸಡಿಲಿಕೆ ಇದೆ.

ಅರ್ಜಿ ಹಾಕುವಾಗ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು 100 ರೂಪಾಯಿ ಶುಲ್ಕ ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ. ಶುಲ್ಕದಿಂದ ವಿನಾಯ್ತಿಯಿದೆ.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಅರ್ಜಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ ನೇಮಕಾತಿ ಆಯ್ಕೆ ಪಟ್ಟಿ ಸಿದ್ದಪಡಿಸಿ ನೇಮಕ ಮಾಡಲಾಗುವುದು.

Job notification in postal department ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ

https://indiapostgdsonline.gov.in/

ಲಿಂಕ್  ಮೇಲೆ ಕ್ಲಿಕ್ ಮಾಡಬೇಕು. ಆಗ ಇಂಡಿಯಾ ಪೋಸ್ಟ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೋಟಿಫಿಕೇಶನ್ ಡಿಟೇಲ್ ನೋಡಬೇಕಾರೆ ಅಭ್ಯರ್ಥಿಗಳು  ನೋಟಿಫಿಕೇಶನ್ ಕೆಳಗಡೆ ಡಿಸ್ಟ್ರಿಕ್ಟಿವ್ ನೋಟಿಫಿಕೇಶನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ನೋಟಿಫಿಕೇಶನ್ ಪೇಜ್ಓಪನ್ ಆಗುತ್ತದೆ.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ರೆಜಿಸ್ಟರ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಇಲ್ಲಿ ಅಭ್ಯರ್ಥಿಗಳು ಮೊಬೈಲ್ ನಂಬರ್, ಈ ಮೇಲ್, ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿರುವಂತೆ ಹೆಸರು, ತಂದೆಯ ಹೆಸರು, ಹುಟ್ಟಿದ ದಿನಾಂಕ, ಜಾತಿ, ಭರ್ತಿ ಮಾಡಿ ಕ್ಯಾಪ್ಚ್ಯಾ ಕೋಡ್ ಭರ್ತಿ ಮಾಡಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಬೇಕು.

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ?

ಅಭ್ಯರ್ಥಿಗಳು ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎಂಬುದನ್ನು ನೋಡಲು ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು ನಂತರ ಜಿಲ್ಲೆ ಆಯ್ಕೆ ಮಾಡಿಕೊಂಡು ವೀವ್ ಪೋಸ್ಟ್ ಮೇಲೆ ಕ್ಲಿಕ್ ಮಾಡಿ ಯಾವ ಗ್ರಾಮದಲ್ಲಿ ಹುದ್ದೆಗಳು ಖಾಲಿಯಿವೆ ಎಂಬುದನ್ನು ನೋಡಬಹುದು.

ಇದನ್ನೂ ಓದಿಮೊಬೈಲ್ ನಲ್ಲೇ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

Leave a Comment