ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by Ramlinganna

Updated on:

Job vacancy for various posts ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ, ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಕೋರಲಾಗಿದೆ.

ತುಮಕೂರು ನಗರ ಶಿಶು ಅಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 3 ಅಂಗನವಾಗಿ ಕಾರ್ಯಕರ್ತೆ ಹಾಗೂ 11 ಸಹಾಯಕಿಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅ್ಹ ಸ್ಥಳಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಱರ್ಜಿಯನ್ನುಏಪ್ರೀಲ್ 5 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತುಮಕೂರು ನಗರ ಇವರಿಗೆ ಸಲ್ಲಿಸಬಹುದುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08162955399 ನ್ನು ಸಂಪರ್ಕಿಸಬಹುದು.  ಊರುಕೆರೆ, ಉಪ್ಪಾರಹಳ್ಳಿ, -4, ಹಾಗೂ ನಜ್ಜರಬಾದ -2 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಹುದ್ದೆಗಳು ಖಾಲಿಯಿವೆ. ಹುದ್ದೆಗಳು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.

ಇದನ್ನೂ ಓದಿ : ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಸರ್ಕಾರಿ ಸೌಲಭ್ಯ ಪಡೆಯಿರಿ

ಮಲ್ಲಸಂದ್ರ ಗೊಲ್ಲರಹಟ್ಟಿ, ಹಬ್ಬತ್ತನಹಳ್ಳಿ, ಲಿಂಗಾಪುರ, ಸಂತೇಪೇಟೆ, ಡಿ.ಎಂ. ಪಾಳ್ಯ, ವಿರಸಾಗರ-2, ಉಪ್ಪಾರಹಳ್ಳಿ-1, ದೇವರಾಯಪಟ್ಟಣ, ದಿಬ್ಬೂರ-1. ಭೀಮಸಂದ್ರ ಹಾಗೂ ಪಿ.ಎಚ್. ಕಾಲೋನಿ-4 ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಸಹಾಯಕಿ ಹುದ್ದಗಳು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.

ಮಾರ್ಚ್ 21 ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ

ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಎಲ್ ಆ್ಂಡ್ ಫೈನಾನ್ಶಿಯಲ್ ಸರ್ವಿಸೆಸ್ ಹಾಗೂ ಸೂರ್ಯೋದಯ್ ಸ್ಟಾಲ್ ಫೈನಾನ್ಸ್ ಬ್ಯಾಂಕ್ ಲಿಮಿಟೆಡ್ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಮಾರ್ಚ್ 21 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಸಂದರ್ಶನವು ಅಂದು ಬೆಳಗ್ಗೆ 10.30 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಆಸಕ್ತ 18 ರಿಂದ 30 ವರ್ಷದೊಳಗಿನ ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೆಟಾ ದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಇದನ್ನೂ ಓದಿ : ಪಿಎಂ ಕಿಸಾನ್ 13ನೇ ಕಂತಿನ ಹಣ ನಿಮಗೇಕೆ ಜಮೆಯಾಗಿಲ್ಲ? ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

ಹೆಚ್ಚಿನ ಮಾಹಿತಿತಾಗಿ ದೂರವಾಣಿ ಸಂಖ್ಯೆ 0816 2278488 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Job vacancy for various posts ಮಾರ್ಚ್  19 ರಂದು ವಿವಿಧ ಹುದ್ದೆಗೆ ನೇರ ಸಂದರ್ಶನ

ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ರಾಮಕೃಷ್ಣ ವಿದ್ಯಾ ಸಂಸ್ಥೆ ವಿಜಯಪುರ ಸಹಯೋಗದಲ್ಲಿ ಮಾರ್ಚ್ 19 ರಂದು ಬೆಳಗ್ಗೆ 10 ರಿಂದ ಸಾಯಂಕಾಲ 4 ಗಂಟೆಯವರೆಗೆ ವಿವಿಧ ಹುದ್ದೆಗಳ ಭರ್ತಿಗೆ ಶ್ರೀರಾಮಕೃಷ್ಣ ವಿದ್ಯಾ ಸಂಸ್ಥೆ ಆವರಣದಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಬೋಧಕ ಮತ್ತು ಬೋಧಕೇತರ ವಿವಿಧ ಹುದ್ದೆಗಳಿಗೆ ಸಂದರ್ಶನ ಜರುಗಲಿದೆ.  ಈ ಕುರಿತಂತೆ ಹೆಚ್ಚಿನ ಮಾಹಿತಿತಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮೊಬೈಲ್ ನಂಬರ್ 9448114385, 9945000793ಗೆ  ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಒಕ್ಕೂಟದಿಂದ ಮಾರ್ಚ್ 19 ರ ಭಾನುವಾರ ಬೆಳಗ್ಗೆ 9 ರಿಂದ ಸಾಯಂಕಾಲ 5 ಗಂಟೆಯವರೆಗೆ ನಗರದ ವೀರಶೈವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಕೆ. ಮುರಳೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ ಶಿಕ್ಷಕರ ಹುದ್ದೆಗಳ ನೇಮಕ ಮಾಡಿಕೊಳ್ಳುವುದಕ್ಕಾಗಿ ಈ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದದಾರೆ.ಮೇಳದಲ್ಲಿ 120ಕ್ಕೂ ಹೆಚ್ಚು ಖಾಸಗಿ ಶಾಲೆಗಳು ಪಾಲ್ಗೊಳ್ಥುತ್ತಿದ್ದು, ಮೇಳದಲ್ಲಿ ದೈಹಿಕ ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳಿಗೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಉಚಿತ ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

Leave a Comment