ಪ್ರತಿ ಜಿಲ್ಲೆಗೆ ಒಂದರಂತೆ ಗೋಶಾಲೆ ಸ್ಥಾಪನೆ ಮಾಡಲಾಗುವುದು (cm bs yediyurappa announced byre in every district in karnataka) ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಘೋಷಣೆ ಮಾಡಿದ್ದಾರೆ. ಹೌದು,ಸೋಮವಾರ ಮಂಡಿಸಿದ 2021-22ನೇ ಸಾಲಿನ ಬಜೆಟ್ ನಲ್ಲಿ ಮುಖ್ಯಮಂತ್ರಿಗಳಿಗಳು ಈ ಘೋಷಣೆ ಮಾಡಿದ್ದಾರೆ.
ಕಳೆದೆರಡು ತಿಂಗಳ ಹಿಂದೆ ಪ್ರತಿಪಕ್ಷಗಳ ವಿರೋಧದ ನಡುವೆಯೂ ಗೋ ಹತ್ಯಾ ನಿಷೇಧ ವಿಧೇಯಕವನ್ನು ಮಂಡಿಸಿ ಉಭಯ ಸದನಗಳಲ್ಲೂ ಅಂಗೀಕಾರ ಪಡೆದ ಸರ್ಕಾರ, ಇದೀಗ ಗೋವುಗಳ ಸಂರಕ್ಷಣೆ ನಿಟ್ಟಿನಲ್ಲಿ ಗೋ ಶಾಲೆಗಳ ಸ್ಥಾಪನೆಗೆ ಮುಂದಾಗಿದೆ. ವಯಸ್ಸಾದ ಗೋವುಗಳ ಪಾಲನೆ, ಪೋಷಣೆ ಹಿನ್ನೆಲೆಯಲ್ಲಿ ಈ ಗೋ ಶಾಲೆಗಳು ನೆರವಿಗೆ ಬರಲಿವೆ ಎಂದು ತಿಳಿಸಿದ್ದಾರೆ.
ಈ ಕುರಿತಾಗಿ ಬಜೆಟ್‌ನಲ್ಲಿ ವಿವರಣೆ ನೀಡಿರುವ ಸಿಎಂ ಯಡಿಯೂರಪ್ಪ, ಹೊರ ರಾಜ್ಯದ ದೇಶಿ ತಳಿಗಳಾದ ಗಿರ್, ಸಾಹಿವಾಲ್, ಒಂಗೋಲ್, ಥಾರ್ ಪಾರ್ಕರ್ ಮತ್ತು ದೇವಣಿ ತಳಿಗಳನ್ನು ಅಭಿವೃದ್ಧಿಪಡಿಸಿ ರಾಜ್ಯದ ರೈತರಿಗೆ ಪರಿಚಯಿಸಲು ಯೋಜನೆ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.