Karnataka guarantee schemes benefits : ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಪಂಚ ಗ್ಯಾರೆಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ರಿಂದ 60 ಸಾವಿರ ರೂಪಾಯಿಯವರೆಗೆ ಸೌಲಭ್ಯ ಸಿಗಲಿದೆ. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮೊದಲು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಣೆ ಮಾಡಿತ್ತು. ಹೌದು, ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ ಹಾಗೂ ಯುವ ನಿಧಿ ಈ ಐದು ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಣೆ ಮಾಡಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆಬಂದ ನಂತರ ಒಂದೊಂದು ಯೋಜನೆಗಳನ್ನು ಜಾರಿಗೆ ತರುತ್ತಿದೆ.
ಈಗಾಗಲೇ ಶಕ್ತಿ ಯೋಜನೆ ಆರಂಭವಾಗಿದೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ.
ಅದೇ ರೀತಿ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭವಾಗಿದೆ. ಅನ್ನಭಾಗ್ಯದ ಯೋಜನೆಯಡಿಯಲ್ಲಿ 5 ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಐದು ಕೆಜಿಗೆ ಒಬ್ಬ ಸದಸ್ಯನಿಗೆ 170 ರೂಪಾಯಿಯಂತೆ ಕುಟುಂಬದ ಸದಸ್ಯರನುಸಾರವಾಗಿ ಜುಲೈ ತಿಂಗಳಲ್ಲಿ ಹಣ ಜಮೆ ಮಾಡಲಾಗಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಅಕ್ಕಪಕ್ಕದ ಜಮೀನು ಯಾರ ಹೆಸರಿಗೆ ಎಷ್ಟಿದೆ? ಇಲ್ಲೇ ಚೆಕ್ ಮಾಡಿ
ಗೃಹ ಲಕ್ಷ್ಮೀ ಯೋಜನೆಯಡಿಯಲ್ಲಿ ಇದೇ ಆಗಸ್ಟ್ ತಿಂಗಳಲ್ಲಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 2000 ರೂಪಾಯಿ ಜಮೆ ಮಾಡಲಾಗುವುದು. ಅತೀ ಶೀಘ್ರದಲ್ಲಿ ಯುವನಿಧಿ ಯೋಜನೆಯನ್ನು ಸಹ ಜಾರಿಗೆ ತರಲಾಗುವುದು ಎಂದು ಸರ್ಕಾರ ತಿಳಿಸಿದೆ.
Karnataka guarantee schemes benefits ಕುಟುಂಬಕ್ಕೆ ವಾರ್ಷಿಕ 50 ರಿಂದ 60 ಸಾವಿರ ರೂಪಾಯಿ ಹಣ ಸಿಗುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿದ ಕುಟುಂಬಕ್ಕೆ ತಿಂಗಳಿಗೆ 2 ಸಾವಿರ ರೂಪಾಯಿಯಂತೆ ವರ್ಷಕ್ಕೆ 24 ಸಾವಿರ ರೂಪಾಯಿ ಜಮೆಯಾಗುವುದು. ಗೃಹ ಜ್ಯೋತಿ ಯೋಜನೆಯಡಿ ಸರಾಸರಿ 500 ರೂಪಾಯಿ ತಿಂಗಳಿಗೆ ಬಿಲ್ ಬಂದರೆ 6 ಸಾವಿರ ರೂಪಾಯಿ ಪ್ರತಿ ವರ್ಷಕ್ಕೆ ಉಚಿತವಾಗಿ ವಿದ್ಯುತ್ ಸೌಲಭ್ಯ ಸಿಗುವುದು.
ಶಕ್ತಿ ಯೋಜನೆಯಡಿ ಉಚಿತ ಪ್ರಯಾಣಕ್ಕೆ ದಿನಕ್ಕೆ ಕನಿಷ್ಛ 50 ರೂಪಾಯಿ ಸೌಲಭ್ಯ ಸಿಗುವುದು. ತಿಂಗಳಿಗೆ ಕನಿಷ್ಛ ಪ್ರಯಾಣಕ್ಕೆ1500 ರೂಪಾಯಿ, ವರ್ಷಕ್ಕೆ 18 ಸಾವಿರ ರೂಪಾಯಿಯವರೆಗೆ ಸೌಲಭ್ಯ ಪಡೆಯಬಹುದು. ಏಕೆಂದರೆ ರಾಜ್ಯದ ಯಾವುದೇ ಮೂಲೆಯಲ್ಲಿ ಪ್ರಯಾಣ ಮಾಡಲು ಮಹಿಳೆಯರಿಗೆ ಉಚಿತ ಸೌಲಭ್ಯ ಒದಗಿಸಲಾಗಿದೆ. ಅದೇ ರೀತಿ ಅನ್ನಭಾಗ್ಯದ ಯೋಜನೆಯಡಿಯಲ್ಲಿ ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳ ಕುಟುಂಬಕ್ಕೆ ತಿಂಗಳಿಗೆ 680 ರೂಪಾಯಿ ವರ್ಷಕ್ಕೆ 8000 ರೂಪಾಯಿ ಜಮೆಯಾಗುವುದು.
ಅದೇ ರೀತಿ ಯುವ ನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ 1500 ಹಾಗೂ 3000 ರೂಪಾಯಿ ನಿರುದ್ಯೋಗ ಭತ್ಯೆ ಹೀಗೆ ಸರಿಸುಮಾರು ಒಂದು ಕುಟುಂಬಕ್ಕೆ ಒಂದು ವರ್ಷಕ್ಕೆ ತಿಂಗಳಿಗೆ 50 ರಿಂದ 60 ಸಾವಿರ ರೂಪಾಯಿಯವರೆಗೆ ಹಣ ಜಮೆಯಾಗುವುದು.
ಶಕ್ತಿ ಯೋಜನೆಯಿಂದ ಮಹಿಳೆಯರು ಸಂತುಷ್ಟ- ಆಗಸ್ಟ್ 24 ರಂದು ಗೃಹ ಲಕ್ಷ್ಮೀಗೆ ಚಾಲನೆ
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಪಂಚ ಗ್ಯಾರೆಂಟಿ ಯೋಜನೆಗಳಿಂದ ರಾಜ್ಯದ ಜನತೆ ಸಂತುಷ್ಟವಾಗಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿತ್ತು. ಅದರಂತೆ ಜೂನ್ 11 ರಂದು ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಈಯೋಜನೆಯ ಸೌಲಭ್ಯವನ್ನು ಈಗಾಗಲೇ ಮಹಿಳೆಯರು ಪಡೆಯುತ್ತಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ತಲಾ 170 ರೂಪಾಯಿಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ. ಡಿಸೆಂಬರ್ – ಜನವರಿ ತಿಂಗಳಲ್ಲಿ ನಿರುದ್ಯೋಗಿಗಳಿಗೆ ಕ್ರಮವಾಗಿ 1500 ಮತ್ತು 3 ಸಾವಿರ ರೂಪಾಯಿ ಭತ್ಯೆ ನೀಡುವ ಯಿುವ ನಿಧಿ ಯೋಜನೆ ಸಹ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರೆಂಟಿ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಅವರು ಕಲಬುರಗಿ ನಗರದಲ್ಲಿ ಹಮ್ಮಿಕೊಂಡ ಗೃಹಜ್ಯೋತಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆನೀಡಿ ಮಾತನಾಡಿದರು.