ರಾಜ್ಯದಲ್ಲಿ ಜೂನ್ 14 ರವರೆಗೆ ಲಾಕ್ಡೌನ್ ವಿಸ್ತರಣೆ (Karnataka govt extended lockdown ) ಮಾಡಿರುವ ಜೊತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮತ್ತೇ 500 ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

ಹೌದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ -19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ಡೌನ್ ನ್ನು ಜೂನ್ 14ರವರೆಗೆ ಮುಂದುವರೆಸಲು ತೀರ್ಮಾನಿಸಲಾಗಿದೆ ಎಂದರು.

ನೇಕಾರರು, ಚಲನಚಿತ್ರ, ಮೀನುಗಾರರು, ದೂರದರ್ಶನ ನೋಂದಾಯಿತ ಕಾರ್ಮಿಕರಿಗೆ, ಮುಜರಾಯಿ ಇಲಾಖೆಯ ಅರ್ಚಕರು ಮತ್ತು ಅಡುಗೆ ಸಿಬ್ಬಂದಿ, ಮಸೀದಿ ಬೇಸಿಮಾ ಮೌಜಿನ್ ಗಳಿಗೆ, ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ರೂಪಾಯಿ, ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ತಲಾ ಐದು ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಹೆಚ್ಚುವರಿಯಾಗಿ ಜೂನ್ ಮತ್ತು ಜುಲೈನಲ್ಲಿ ಹಾಲಿನ ಪುಡಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *