ಇಂದಿನಿಂದ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Written by Ramlinganna

Published on:

Karnataka rain : ಉತ್ತರ ಒಳನಾಡು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಮುಂದಿನ ನಾಲ್ಕೈದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಗದಗ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳಿಗೆ ಮುಂದಿನ 24 ಗಂಟೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ ಲಕ್ಷಣ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸೆಪ್ಟೆಂಬರ್ 23 ರಿದ 25 ರವರೆಗೆ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಿಗೆ ಬೇರೆ ಬೇರೆ ದಿನಗಳಲ್ಲಿ ಯೆಲ್ಲೋ ಅಲರ್ಟ್ ಮುನ್ಸೂಚನ ನೀಡಲಾಗಿದೆ.

ನಿರೀಕ್ಷೆ ಪ್ರಕಾರ ಅಕ್ಟೋಬರ್ ಮೂರನೇ ವಾರದಲ್ಲಿ ಹಿಂಗಾರು ಆರಂಭವಾಗುವ ಸಾಧ್ಯತೆಯಿದೆ ಎಂದು ಹಿರಿಯ ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

Karnataka rain ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?                        

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಮಳೆಯ ಮಾಹಿತಿ ನೀಡಲು ಬಂದಿವೆ ಮೊಬೈಲ್ ಆ್ಯಪ್

ನೀವು ಮನೆಯಲ್ಲಿಯೇ ಮಳೆಯ ಮಾಹಿತಿ ಚೆಕ್ ಮಾಡಲು ಮೇಘದೂತ, ಮೌಸಮ್ ಆ್ಯಪ್ ಗಳು ಇವೆ. ಈ ಆ್ಯಪ್ ಗಳನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡರೆ ಸಾಕು, ನಿಮಗೆ ಮುಂದಿನ ಐದು ದಿನಗಳ ಮಳೆಯ ಮಾಹಿತಿಯನ್ನು ಚೆಕ್ ಮಾಡಬಹುದು.

ಸಿಡಿಲು ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ? (How to install Sidilu App)

ಸಿಡಿಲು ಎಂಬ ಆ್ಯಪ್ ನ್ನು ನಿಮ್ಮ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಳ್ಳಲು ಈ

https://play.google.com/store/apps/details?id=com.moserptech.sidilu&hl=en&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು  ಅಲ್ಲಿ ಕಾಣುವ install ಮೇಲೆ ಕ್ಲಿಕ್ ಮಾಡಬೇಕು.ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. Allow Sidilu to access this devices location  ಕೆಳಕಡೆ While using the App ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಇದ್ದ ಸ್ಥಳದ ಸುತ್ತಮುತ್ತ ಎಲ್ಲಲ್ಲಿ ಸಿಡಿಲು ಬಡಿಯುವ ಸಾಧ್ಯತೆಯಿದೆ ಎಂಬು ಕಾಣಿಸುತ್ತದೆ.

ಒಂದು ವೇಳೆ ನಿಮ್ಮ ಸುತ್ತಮುತ್ತ ಸಿಡಿಲು ಬಡಿಯುವ ಸಾಧ್ಯತೆಯಿಲ್ಲದಿದ್ದಲ್ಲಿ No lightning activity in your area  ಎಂಬ ಮೆಸೇಜ್ ಗೋಚರಿಸುತ್ತದೆ. ನೀವು ಇದ್ದ ಸ್ಥಳ ತೋರಿಸಲಾಗಿರುತ್ತದೆ. ನಿಮ್ಮ ಸುತ್ತಮುತ್ತ 1 ಕಿ.ಮೀ ದಿಂದ 5 ಕಿ.ಮೀ ವ್ಯಾಪ್ತಿಯಲ್ಲಿ ಸಿಡುಲು ಬೀಳುವ ಸಾಧ್ಯತೆಯಿದ್ದರೆ ಅಲ್ಲಿ ನಿಮಗೆ ಮೆಸೇಜ್ ಗೋಚರಿಸುತ್ತದೆ.

ಇದನ್ನೂ ಓದಿ ನಿಮ್ಮ ಜಮೀನಿನ ಎಲ್ಲಾ ದಾಖಲೆ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

Thunder (ಗುಡುಗು) ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಇರುತ್ತದೆಯೋ ಇಲ್ಲವೋ ಎಂಬ ಮೆಸೆಜ್ ಗೋಚರಿಸುತ್ತದೆ.

Leave a Comment