Karnataka Rajyotsava History : ಕನ್ನಡ ರಾಜ್ಯೋತ್ಸವ ನವೆಂಬರ್ 1 ರಂದು ಏಕೆ ಆಚರಿಸಲಾಗುತ್ತದೆ ಮೈಸರು ರಾಜ್ಯಕ್ಕೆ ಕರ್ನಾಟಕ ಎಂದು ಏಕೆ ನಾಮಕರಣ ಮಾಡಲಾಯಿತು? ಕರ್ನಾಟಕ ಪದ ಹೇಗೆ ಉತ್ಪತ್ತಿಯಾಯಿತು ಎಂಬುದರ ಮಾಹಿತಿ ಇಲ್ಲಿದೆ.
1950 ರಲ್ಲಿ ಸಂವಿಧಾನ ರಚನೆಯಾದ ನಂತರ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳು ರಚನೆಯಾದವು. 1956 ರ ನವೆಂಬರ್ 1 ರಂದು, ಮೈಸೂರು , ಮದ್ರಾಸ್, ಮುಂಬಯಿ ಮತ್ತು ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು.
ಮೈಸೂರು ಸಂಸ್ಥಾನ, ಮುಂಬಯಿ ಕರ್ನಾಟಕ, ಹೈದರಾಬಾದ್ ಕರ್ನಾಟಕ ಹಾಗೂ ಮದ್ರಾಸ್ ಕರ್ನಾಟಕ ಹೀಗೆ ನಾಲ್ಕು ವಿಭಾಗವಾಗಿದ್ದ ಅಂದಿನ ಪ್ರಾಂತ್ಯಗಳು ನವೆಂಬರ್ 1 ರಂದು ಅಧಿಕೃತವಾಗಿ ಒಂದಾದವು. 1956 ರ ನವೆಂಬರ್ 1ರಂದು ಕನ್ನಡ ಭಾಷಿಗರಿಗಾಗಿ ಒಂದು ರಾಜ್ಯ ಉದಯವಾದ ಹಿನ್ನೆಲೆಯಲ್ಲಿ ಅಂದಿನಿಂದ ಪ್ರತಿ ವರುಶ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ.
Karnataka Rajyotsava History ಕರ್ನಾಟಕ ರಾಜ್ಯೋತ್ಸವ ಇತಿಹಾಸ
ಕನ್ನಡ ಚಳವಳಿ ಹೋರಾಟಗಾರ ಎಂ. ರಾಮಮೂರ್ತಿ ಅವರು ಮೊದಲ ಬಾರಿಗೆ ಕೆಂಪು–ಹಳದಿ ಬಣ್ಣದ ಕನ್ನಡ ಬಾವುಟ ತಯಾರಿಸಿ ಬಳಸಿದ್ದರು. ಅದು ಕರ್ನಾಟಕದ ಬಾವುಟವಾಗಿ ಇಂದಿಗೂ ರಾಷ್ಟ್ರ, ರಾಜ್ಯಗಳಲ್ಲಿ ರಾಜಾಜಿಸುತ್ತಿದೆ.ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ರಾಜ್ಯದ ಹೆಸರು ಮೈಸೂರು ಇರಬೇಕೆಂದಿದ್ದರು. ಆದರೆ ಉತ್ತರ ಕರ್ನಾಟಕದ ಜನರು ಮೈಸೂರು ಹೆಸರನ್ನು ಉಳಿಸಿಕೊಳ್ಳಲು ಒಪ್ಪಲಿಲ್ಲ. ಮೈಸೂರು ರಾಜ್ಯವನ್ನು ಕರ್ನಾಟಕವೆಂದು ಹೆಸರಿಡಬೇಕೆಂಬುದರ ಕುರಿತು 1972 ರ ಜುಲೈನಲ್ಲಿ ಚರ್ಚೆ ಯಾಯಿತು. ಸುದೀರ್ಗವಾಗಿನಡೆದ ಚರ್ಚೆಯ ನಂತರ ವಿಧಾನಸಭೆಯಲ್ಲೂ ಸರ್ವಾನುಮತದಿಂದ ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣ ಮಾಡಲು ಅನುಮತಿ ಸಿಕ್ಕಿತು.
ಇದನ್ನೂ ಓದಿ ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಇಲ್ಲೆ ಚೆಕ್ ಮಾಡಿ
ನಂತರ 1973 ರ ನವೆಂಬರ್ 1ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು.. . ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.
ಕರ್ನಾಟಕ ಹೆಸರು ಬಂದದ್ದು ಹೇಗೆ ? ಕರ್ನಾಟಕ ಪದದ ಮೂಲ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಆದರೆ ಕರ್ನಾಟಕ ಎಂಬ ಪದದ ಅರ್ಥದ ಬಗ್ಗೆ ಹಲವು ಅಭಿಪ್ರಾಯಗಳಿವೆ. ಕರು + ನಾಡು = ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ. ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದು ಹೇಳಲಾಗುತ್ತದೆ. ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸಿವೆ.
ಬೆಳೆ ಹಾನಿ ಪರಿಹಾರ ಹಣ ಜಮೆಯಾಗಲು ನಿಮ್ಮ ಹೆಸರಿಗೆ ಎಫ್ಐಡಿ ಇರುವುದು ಕಡ್ಡಾಯ
ರೈತರಿಗೆ ಬೆಳೆ ಹಾನಿ ಪರಿಹಾರ ಜಮೆಯಾಗಬೇಕಾದರೆ ಅವರ ಹೆಸರಿನಲ್ಲಿ ಫ್ರೂಟ್ಸ್ ಐಡಿ ಇರುವುದು ಕಡ್ಡಾಯವಾಗಿದೆ. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಅವರ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಫಾರ್ಮರ್ಸ್ ಡಿಟೇಲ್ ಕೆಳಗಡೆ ನಿಮ್ಮ ಆಧಾರ್ ನಂಬರ್ ನಮೂದಿಸಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದ್ದರೆ ನಿಮ್ಮ ಹೆಸರು, ಫ್ರೂಟ್ಸ್ ಐಡಿ ನಂಬರ್ ಕಾಣಿಸುತ್ತದೆ.ಈ ಫ್ರೂಟ್ಸ್ ಐಡಿ ನಂಬರ್ ಸಹಾಯದಿಂದ ನೀವು ಸರ್ಕಾರಿ ಯೋಜನೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆಯಬಹುದು.