ಮಹಾತ್ಮಗಾಂದಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಗ್ರಾಪಂಗಳಿಗೆ ಗ್ರಾಮ ಕಾಯಕ ಮಿತ್ರ ಹುದ್ದೆಗಳ (Grama kayaka mitra) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಸಾಲಿನಲ್ಲಿ 20 ಸಾವಿರಕ್ಕಿಂತಹ ಹೆಚ್ಚು ಮಾನವ ದಿನಗಳನ್ನು ಸೃಜಿಸಿರುವ ಪ್ರತಿ ಗ್ರಾಪಂಗೆ ಒಬ್ಬರು ಗ್ರಾಮ ಕಾಯಕಮಿತ್ರ (ಗ್ರಾಮ ರೋಜಗಾರ್ ಸಹಾಯಕ) ರನ್ನು ನೇಮಿಸಿಕೊಳ್ಳಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 164 ಗ್ರಾಪಂಗಳಿಗೆ ಗ್ರಾಮ ಕಾಯಕ ಮಿತ್ರರ ನೇಮಕಾತಿಗಾಗಿ ನಡೆಸಲಾದ ಕ್ರಿಯೆಯಲ್ಲಿ ಒಟ್ಟು 67 ಗ್ರಾಪಂಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳು ಸ್ವೀಕೃತವಾಗದೇ ಇರುವುದರಿಂದ ಕಾಯಕಮಿತ್ರ ನೇಮಕಾತಿಗಾಗಿ ಮರು ಪ್ರಕಟಣೆ ಹೊರಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿ ಕನಿಷ್ಟ 10ನೇ ತರಗತಿ ಪಾಸಾಗಿರಬೇಕು. ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸವಾಗಿರಬೇಕು ಮತ್ತು ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು. ಮಾಸಿಕ 6 ಸಾವಿರ ರೂಪಾಯಿ ಗೌರವಧನ ನೀಡಲಾಗುದು. ಕಾರ್ಯನಿರ್ವಹಣೆ ಆಧರಿಸಿ 5 ಸಾವಿರ ಪ್ರೋತ್ಸಾಹ ಧನವಿರುತ್ತದೆ.
ವಯೋಮಾನ- 45 ವರ್ಷದೊಳಗಿನವರಾಗಿಬೇಕು. ಕಳೆದ 3 ವರ್ಷಗಳ ಅವಧಿಯಲ್ಲಿ ಕನಿಷ್ಟ 2 ವರ್ಷ ಯೋಜನೆಯಡಿ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು. ಅರ್ಹ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಲು ಕೋರಲಾಗಿದೆ.
ಕಾರವಾರ ಜಿಲ್ಲೆಯ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ನರೇಗಾ ಯೋಜನೆಯಡಿಯಲ್ಲಿ ಕಾರವಾರ ಜಿಲ್ಲೆಯ 8 ಗ್ರಾಪಂಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬಯಸುವರು ಕನಿಷ್ಠ 10ನೇ ತರಗತಿ ಪಾಸಾಗಿಬೇಕು.. ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಕ್ರೀಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು ಮತ್ತು ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುವರಾಗಿರಬೇಕು. 45 ವರ್ಷ ದೊಳಗಿನವರಾಗಿರಬೇಕು. ಮಾಸಿಕ ಗೌರವ ಧನ 6 ಸಾವಿರ ಹಾಗೂ ಕಾರ್ಯನಿರ್ವಹಣೆ ಆಧರಿಸಿ 5 ಸಾವಿರ ಪ್ರೋತ್ಸಾಹ ಧನವಿರುತ್ತದೆ.
ಕಾರವಾರ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ, ಕುಂದರಗಿ ಮತ್ತು ಮಾವಿನಮನೆ. ಮುಂಡಗೋಡ ತಾಲೂಕಿನ ಹನುಮಾಪುರ, ಇಂದೂರು. ಶಿರಸಿಯ ಬದನಗೋಡ, ಹಳಿಯಾಳದ ಗುಂಡೊಳ್ಳಿ ಹಾಗೂ ಕಾರವಾರದ ದೇವಳಮಕ್ಕಿ ಗ್ರಾಮ ಪಂಚಾಯತ್‍ಗಳಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಸಲು ಜುಲೈ 7 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಯಲ್ಲಾಪುರ(08419-261130), ಮುಂಡಗೋಡ(08301-22212), ಶಿರಸಿ(08384-22642) ಹಳಿಯಾಳ (08284-220135), ಕಾರವಾರ (08382-22389) ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.
ಅರ್ಹ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಲು ಕೋರಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ, ಕಡೂರ, ಮೂಡಿಗೆರೆ, ನರಸಿಂಹರಾಜಾಪುರ ಮತ್ತು ತರಿಕೇರಿ ತಾಲೂಕುಗಳಲ್ಲಿ 2020-21ನೇ ಸಾಲಿನಲ್ಲಿ 20 ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿದ 39 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರರನ್ನು ಗೌರವಧನ ಆಧಾರದಲ್ಲಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜುಲೈ 9 ಕೊನೆಯ ದಿನಾಂಕವಾಗಿದ್ದು, ಅರ್ಜಿಯನ್ನು ನೇರವಾಗಿ ತಮ್ಮ ವ್ಯಾಪ್ತಿಯ ಗ್ರಾ ಪಂಚಾಯತಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://chikkamagaluru.nic.in ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಸಂಬಂಧಿಸಿದ ಪೂರಕ ದಾಖಲೆಗಳನ್ನು ತಪ್ಪದೆ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂವಿತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಗ್ರಾಮ ಕಾಯಕ ಮಿತ್ರ ನೇಮಕಕ್ಕೆ ಅರ್ಜಿ ಆಹ್ವಾನ
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬಳ್ಳಾರಿ ತಾಲೂಕಿನ ವ್ಯಾಪ್ತಿಯಲ್ಲಿ 2020-21ನೇ ಸಾಲಿನಲ್ಲಿ 20 ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿದ 18 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರರನ್ನು ಗೌರವಧನ ಆಧಾರದಲ್ಲಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅಮರಾಪುರ, ಬಸರಕೋಡು, ಬೆಳಗಲ್ಲು, ಬೈರದೇವನಹಳ್ಳಿ, ಚಾನಾಳು, ಹನಕುಂದಿ, ಕಪ್ಪಗಲ್ಲು, ಕಾರೇಕಲ್ಲು, ಕೊಳಗಲ್ಲು, ಕೊರ್ಲಗುಂದಿ, ಮೋಕ, ಪರಮದೇವನಹಳ್ಳಿ, ರೂಪನಗುಡಿ, ಸಂಗನಕಲ್ಲು, ಸಂಜೀವರಾಯಕೋಟೆ, ಶಂಕರಬಂಡೆ, ಸಿರವಾರ, ಯರ್ರಗುಡಿ ಗ್ರಾಪಂಗಳ ವ್ಯಾಪ್ತಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜುಲೈ 12 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.