Kharif crop survey 2023 ಬೆಳೆ ವಿಮೆ ಹಾಗೂ ಬೆಳೆಹಾನಿ ಪರಿಹಾರ ಜಮೆಯಾಗಬೇಕಾದರೆ ಬೆಳೆ ಸಮೀಕ್ಷೆ ಮಾಡಬೇಕಾಗುತ್ತದೆ. ಹೌದು, ರೈತರು ತಮ್ಮಮೊಬೈಲ್ ನಲ್ಲಿಯೇ ಬೆಳೆ ಸಮೀಕ್ಷೆ ಮಾಡಬಹುದು.
ಬೆಳೆ ಸಮೀಕ್ಷೆ ಎಂದರೇನು? ರೈತರೇಕೆ ಬೆಳೆ ಸಮೀಕ್ಷೆ ಮಾಡಿಸಬೇಕು? ಬೆಳೆ ಸಮೀಕ್ಷೆ ಮಾಡುವುದರಿಂದ ರೈತರಿಗಾಗುವ ಪ್ರಯೋಜನಗಳ ಮಾಹಿತಿ ಇಲ್ಲಿದೆ.
ನನ್ನ ಬೆಳೆ ನನ್ನ ಹಕ್ಕು ಯೋಜನೆಯಡಿ ಬೆಳೆ ಸಮೀಕ್ಷೆ ಉತ್ಸವ 2023-24ನೇ ಸಾಲಿನಲ್ಲಿ ರೈತರಿಗೆ ಒಂದು ಸುವರ್ಣ ಅವಕಾಶವಿದೆ. ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನುಛಾಯಾಚಿತ್ರ ಸಹಿತ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ನಲ್ಲಿ ದಾಖಲಿಸುವ ಯೋಜನೆ ಆರಂಭವಾಗಿದೆ.
ರೈತರ ಪರವಾಗಿ ಅವರ ಕುಟುಂಬ ಸದಸ್ಯರು ಅಥವಾ ಮೊಬೈಲ್ ಮಾಹಿತಿ ಹೊಂದಿದ ಖಾಸಗಿ ನಿವಾಸಿಗಳ ಸಹಯೋಗದೊಂದಿಗೆ ರೈತರು ತಮ್ಮ ಮೊಬೈಲ್ ಸಂಖ್ಯೆಗೆ ಓಟಿಪಿ ಪಡೆದು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳನ್ನು ಛಾಯಾಚಿತ್ರ ಸಹಿತ ಅಫ್ಲೋಡ್ ಮಾಡಲು ಕೋರಲಾಗಿದೆ.
ಬೆಳೆ ಸಮೀಕ್ಷೆಯನ್ನು ಮೊಬೈಲ್ ನಲ್ಲಿ ಹೇಗೆ ಮಾಡಬೇಕು?
ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಮಾಡಿಸಲು ಗೂಗಲ್ ಪ್ಲೇ ಸ್ಟೋರ್ ನಲ್ಲಿ Kharif farmer crop survey 2023-24 ಎಂದು ಟೈಪ್ ಮಾಡಬೇಕು. ಆಗ ಅಲ್ಲಿ ಕಾಣುವ ಮುಂಗಾರು ರೈತರ ಬೆಳೆ ಸಮೀಕ್ಷೆ 2023 ಮೇಲೆ ಕ್ಲಿಕ್ ಮಾಡಬೇಕು. ಅಥವಾ ಈ
https://play.google.com/store/apps/details?id=com.csk.farmer23_24.cropsurvey
ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಅದರ ನಂತರ ರೈತರ ಮೊಬೈಲ್ ನಲ್ಲಿ ಬೆಳೆ ಸಮೀಕ್ಷೆ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯುಸಿಂಗ್ ದಿ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಇಕೆವೈಸಿ ಮೂಲಕ ಆಧಾರ್ ಪರಿಸೀಲಿಸಿ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ I agree ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮಗೆ ಓಟಿಪಿ, ಫೇಸ್ ಕ್ಯಾಪ್ಚರ್ ಹಾಗೂ ಫಿಂಗರ್ ಪ್ರಿಂಟ್ ಕ್ಯಾಪ್ಚರ್ ಹೀಗೆ ಮೂರು ಆಯ್ಕೆಗಳು ಕಾಣಿಸುತ್ತವೆ.
ಅದರಲ್ಲಿ ಓಟಿಪಿ ಆಯ್ಕೆ ಮಾಡಿಕೊಳ್ಳಬೇಕು. ನಂತರ Generate OTP ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ನಮೂದಿಸಿದ ಮುಂದಿನ ಮಾಹಿತಿ ಭರ್ತಿ ಮಾಡಿ ಬೆಳೆ ಸಮೀಕ್ಷೆ ಮಾಡಬಹುದು. ಓಟಿಪಿ ಬರದಿದ್ದರೆ ಫೇಸ್ ಕ್ಯಾಪ್ಚರ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಫೇಸ್ ತೋರಿಸಿ ಮುಂದಿನ ಮಾಹಿತಿಗಳನ್ನು ಭರ್ತಿ ಮಾಡಿ ಬೆಳೆ ಸಮೀಕ್ಷೆ ಮಾಡಬಹುದು.
ಇದನ್ನೂ ಓದಿ : ಪಿಎಂ ಕಿಸಾನ್ 14ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆ – ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ಇಲ್ಲೇ ಚೆಕ್ ಮಾಡಿ
2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದೆ. ರೈತರು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಮಾಡಬಹುದು. ಅಥಾ ಆಯಾ ಗ್ರಾಮದ ಖಾಸಗಿ ನಿವಾಸಿಗಳಿಂದಮುಂಗಾರು ಬೆಳೆ ಸಮೀಕ್ಷೆ 2023-24 ನ್ನು ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬಹುದು..
ಬೆಳೆ ಸಮೀಕ್ಷೆ ಏಕೆ ಮಾಡಿಸಬೇಕು?
ಬೆಳೆ ಸಮೀಕ್ಷೆ ಮಾಡುವುದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆ ಸಾಲ ಪಡೆಯುವಲ್ಲಿ ಅನುಕೂಲವಾಗುವುದರಿಂದ ರೈತರು ಬೆಳೆ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್ ನಲ್ಲಿದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗಾಗಿ ಬೆಳೆ ಸಮೀಕ್ಷೆ ಸಹಾವಾಣಿ 8448447715 ಗೆ ಕರೆ ಮಾಡಬಹುದು.