ಬೆಳೆ ಸಮೀಕ್ಷೆ ಮಾಡುವುದರಿಂದ ರೈತರಿಗಾಗುವ ಪ್ರಯೋಜ

Written by Ramlinganna

Updated on:

Kharif Farmer Crop survey ರೈತರು ಬೆಳೆ ವಿಮೆ, ಬೆಳೆ ಪರಿಹಾರ ಹಾಗೂ ಬೆಳೆ ಸಾಲ ಪಡೆಯಲು ಬೆಳೆ ಸಮೀಕ್ಷೆ ಮಾಡಿಸಬೇಕು. ಹೌದು, ಬೆಳೆ ಸಮೀಕ್ಷೆ ಮಾಡಿದರೆ ರೈತರಿಗೆ ಬೆಳೆ ವಿಮೆ, ಬೆಳೆ ಪರಿಹಾರ, ಬೆಳೆ ಸಾಲ  ಸೇರಿದಂತೆ ಇತರ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ.

ಬೆಳೆ ಸಮೀಕ್ಷೆ ಮಾಡುವುದರಿಂದ ರೈತರಿಗಾಗುವ ಪ್ರಯೋಜನ, ಬೆಳೆ ಸಮೀಕ್ಷೆ ಮೊಬೈಲ್ ನಲ್ಲಿ ಹೇಗೆ ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಜಮೀನಿನ ಬೆಳೆ ವಿವರಗಳನ್ನು ದಾಖಲಿಸಲು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆಯಾಗಿದೆ. ಈ ಆ್ಯಪ್ ಬಳಸಿಕೊಂಡು ರೈತರು ಸ್ವತಂತ್ರವಾಗಿ ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಗಳ ಛಾಯಾಚಿತ್ರ ಮತ್ತು ಬೆಳೆ ವಿವರಗಳನ್ನು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ನಲ್ಲಿ ಅಪ್ಲೋಡ್ ಮಾಡಬಹುದು.

ರೈತರು ಆ್ಯಪ್ ಮೂಲಕ ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್, ಬೆಳೆದ ಬೆಳೆಗಳ ವಿವರ ಸೇರಿದಂತೆ ಇತರ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆಯ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.

Kharif Farmer Crop survey ಬೆಳೆ ಸಮೀಕ್ಷೆ ಮೊಬೈಲ್ ನಲ್ಲಿ ಹೇಗೆ ಮಾಡಬೇಕು?

ರೈತರು ತಮ್ಮ ಬೆಳೆಗಳ ಸಮೀಕ್ಷೆ ಮಾಡಲು ಆ್ಯಪನ್ನು ಗೂಗಲ್ ಪ್ಲೇ ಸ್ಟೋರ್ ನಲ್ಲಿ Khariff Farmer Crop survey 2022-23 ಎಂದು ಟೈಪ್ ಮಾಡಿ  ಡೌನ್ಲೋಡ್ ಮಾಡಿಕೊಳ್ಳಬೇಕಾಗುತ್ತದೆ. ಅಥವಾ ಈ

https://play.google.com/store/apps/details?id=com.csk.KharifOfficer2022.cropsurvey

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ಐದಾರು ಸೆಕೆಂಡ್ ನಂತರ ನಿಮಗೆ ಓಪನ್ ಕಾಣುತ್ತದೆ. ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇನ್ನೊಂದು ಪೇಜ್ ಕಾಣುತ್ತದೆ. ಅಲೋ ರೈತರ ಬೆಳೆ ಸಮೀಕ್ಷೆ 2022-23 ಟು ಟೇಕ್ ಪಿಕ್ಚರ್ಸ್  ಆ್ಯಂಡ್ ರಿಕಾರ್ಡ್ ವೀಡಿಯೋ ಮೆಸೆಜ್ ಕಾಣುತ್ತದೆ.ವೈಲ್ ಯೂಸಿಂಗ್ ದಿಸ್ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು ಆಗ ಮುಂಗಾರು ಬೆಳೆ ಸಮೀಕ್ಷೆ 2022-23 ಕೆಳಗೆ ವರ್ಷ ಹಾಗೂ ಋತು ಮುಂಗಾರು ಎಂದು ಆಯ್ಕೆ ಮಾಡಿಕೊಂಡು ಸರಿ ಮೇಲೆ ಕ್ಲಿಕ್ ಮಾಡಬೇಕು. ನಂತರ ವೈಲ್ ಯೂಸಿಂಗ್ ದಿ ಆ್ಯಪ್ ನ್ನು ಕ್ಲಿಕ್ ಮಾಡುತ್ತಾ ಹೋಗಬೇಕು.

ಸಮೀಕ್ಷೆ ಕೈಗೊಳ್ಳುತ್ತಿರುವ ಋತು ಸರಿಯಾಗಿದೆಯೇ ಎಂಬ ಸಂದೇಶ ಕಾಣುತ್ತದೆ. ಆಗ ನೀವು ಹೌದು ಮೇಲೆಕ್ಲಿಕ್ ಮಾಡಬೇಕು. ಆಧಾರ್ ಕಾರ್ಡ್ ನಲ್ಲಿರುವ ಂತೆರ ಹೆಸರು ಆಧಾರ್ ಕಾರ್ಡ್ ನಂಬರ್ ನಮೂದಿಸಿ ಸಕ್ರಿಯಗೊಳಿಸಿ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸರ್ವೆ ನಂಬರ್ ವಿವರಗಳನ್ನು ಸೆಳೆಯಿರಿ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ನಿಮ್ಮ ಜಮೀನಿನ ಆಕಾರ್ ಬಂದ್ ಪ್ರಕಾರ ಯಾರಿಗೆ ಎಷ್ಟು ಎಕರೆ ಜಮೀನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಇದಾದನಂತರ ಹಿಸ್ಸಾನಂಬರ್, ಮಾಲಿಕರ ಹೆಸರು ಕಾಣುತ್ತದೆ. ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ಇದಾದನಂತರ ನಿಮಗೆ ಕೇಳಲಾದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಬೆಳೆ ಸಮೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಬೆಳೆ ಸಮೀಕ್ಷೆ ಏಕೆ ಮಾಡಬೇಕು?

ತಮ್ಮ ಜಮೀನುಗಳ ಬೆಳೆ ವಿವರಗಳನ್ನು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ನಲ್ಲಿ ಅಪ್ಲೋಡ್ ಮಾಡಬೇಕು. ಬೆಳೆ ಸಮೀಕ್ಷೆ ವಿವರವನ್ನು ಬೆಳೆ ವಿಸ್ತೀರ್ಣ, ಬೆಳೆ ವಿಮೆ, ಬೆಳೆ ಪರಿಹಾರ, ಬೆಳೆ ಸಾಲ, ಬೆಂಬಲ ಬೆಲೆ ಖರೀದಿ ಹಾಗೂ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಉಪಯೋಗಿಸಲಾಗುವುದು

ಹೆಚ್ಚಿನ ಮಾಹಿತಿಗಾಗಿ ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ ಮತ್ತು ಸಾಂಖ್ಯಿಕ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Leave a Comment