Kharif Rabi insurance status ಬೆಳೆ ವಿಮೆ ಜಮೆ ಸ್ಟೇಟಸ್ ಚೆಕ್ ಮಾಡಿ

Written by Ramlinganna

Published on:

Kharif Rabi insurance status ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ರೈತರು ಬೆಳೆ ವಿಮೆ ಮಾಡಿಸಿರುತ್ತಾರೆ.  ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಯಾರು ಯಾರು ಬೆಳೆ ವಿಮೆ ಮಾಡಿಸಿರುತ್ತಾರೋ ಅಂತಹ ರೈತರು ಬೆಳೆ ವಿಮೆ ಸ್ಟೇಟಸನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

ಪ್ರಸಕ್ತ ಸಾಲಿನ ಅಂದರೆ  2023-24 ನೇ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ಯಾವ ಬೆಳೆಗೆ ವಿಮೆ ಹಣ ಜಮೆಯಾಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

Kharif Rabi insurance status  ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರು ತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಬೆಳೆ ವಿಮೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ನೀವು 2023-24 ರ ಕೆಳಗಡೆ ಖಾರೀಫ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಕಾಣಿಸುತ್ತದೆ.  ಫಾರ್ಮರ್ಸ್ ಕಾಲಂ ಕೆಳಗಡೆ ಕಾಣುವ Check Status ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊದು ಪೇಜ್ ತೆರೆದುಕೊಳ್ಳುತ್ತದೆ.

ರೈತರು ಇಲ್ಲಿ ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನಂತರ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ಮೇಲೆ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಕ್ಯಾಪ್ಚ್ಯಾ ಕೋಡ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ವಿಮೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದು ಕಾಣಿಸುತ್ತದೆ.

Kharif Rabi insurance status ಹಿಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ಮಾಡುವುದು ಹೇಗೆ?

ಹಿಂಗಾರು ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀವು 2023-24 ರ ಕೆಳಗಡೆ Rabi ಆಯ್ಕೆ ಮಾಡಿಕೊಳ್ಳಬೇಕು. ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಫಾರ್ಮರ್ಸ್ ಕಾಲಂ ಕೆಳಗಡೆ  check status ಮೇಲೆ ಕ್ಲಿಕ್ ಮಾಡಬೇಕು  ನಂತರ ನೀವು Mobile No ಆಯ್ಕೆ ಮಾಡಿಕೊಳ್ಳಬೇಕು.ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ಇದಾದ ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಬೇಕು.ಆಗ ಇನ್ನೊಂದು ಪೇಜ್ ಕಾಣಿಸುತ್ತದೆ.  ಇದರ ಮೂಲಕ ನೀವು ಹಿಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಬಹುದು.

ಇದನ್ನೂ ಓದಿ :ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ಇದೇ ರೀತಿ ರೈತರು ಕಳೆದ ಸಾಲಿನ ಅಂದರೆ 2022-23ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸನ್ನು ಸಹ ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದಕ್ಕೆ  ಮೇಲೆ ತಿಳಿಸಿದ ಸ್ಪೆಪ್ ಪ್ರಕಾರ ಚೆಕ್  ಮಾಡಿಕೊಳ್ಳಬಹುದು.

Leave a Comment