ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಸ್ಟೇಟಸ್ ಚೆಕ್ ಮಾಡುವ ವಿಧಾನ ಈಗ ಬದಲಾಗಿದೆ. ಹೌದು, ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಈಗ ಬದಲಾಗಿದೆ. ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಮೊಬೈಲ್ ನಲ್ಲಿ ಹೇಗೆ ಚೆಕ್ ಮಾಡಬೇಕೆಂಬುದರ ಮಾಹಿತಿ ಇಲ್ಲಿದೆ.
ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಲು ಈ
https://pmkisan.gov.in/BeneficiaryStatus_New.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪೇಜ್ ತೆರೆದುಕೊಳ್ಳುತ್ತದೆ. Know Your status pm kisan ಕೆಳಗಡೆ ಎಂಟರ್ ರೆಜಿಸ್ಟ್ರೇಶನ್ ನಂಬರ್ ಇರುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ಯೋಜನೆಯ Registration No ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Get OTP ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಹೊಸ ಸ್ಟೇಟಸ್ ಪೇಜ್ ಕಾಣಿಸುತ್ತದೆ.
ಒಂದು ವೇಳೆ ನಿಮಗೆ ಪಿಎಂ ಕಿಸಾನ್ ರಿಜಿಸ್ಟ್ರೇಶನ್ ನಂಬರ್ ಗೊತ್ತಿಲ್ಲದಿದ್ದರೆ Know Your Registration No ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Get Mobile OTP ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಅದನ್ನು ನಮೂದಿಸಿ ಗೆಟ್ ಡಿಡೇಟಲ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಪಿಎಂ ಕಿಸಾನ್ ಯೋಜನೆಯ ನಿಮ್ಮ ರೆಜಿಸ್ಟ್ರೇಶನ್ ನಂಬರ್ ಕಾಣಿಸುತ್ತದೆ.
ಅದರ ಮುಂದೆ ನಿಮ್ಮ ಹೆಸರು ಕಾಣಿಸುತ್ತದೆ. ನಿಮ್ಮ ರೆಜಿಸ್ಟ್ರೇಶನ್ ನಂಬರ್ ಕಾಪಿ ಮಾಡಿಕೊಳ್ಳಬೇಕು. ಅಥವಾ ಬರೆದಿಟ್ಟುಕೊಳ್ಳಬೇಕು. ನಂತರ ಅದನ್ನು ಎಂಟರ್ ರೆಜಿಸ್ಟ್ರೇಶನ್ ಕೆಳಗಡೆ ಪೇಸ್ಟ್ ಮಾಡಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಮತ್ತೇ ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಮತ್ತೊಂದು ಓಟಿಪಿ ಬರುತ್ತದೆ. ಅದನ್ನು ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದೇ ಪಿಎಂ ಕಿಸಾನ್ ಸ್ಟೇಟಸ್ ಪೇಜ್ ಆಗಿರುತ್ತದೆ.
ಪಿಎಂ ಕಿಸಾನ್ ಸ್ಟೇಟಸ್ ನಲ್ಲಿ ಏನೇನು ಮಾಹಿತಿ ಇರುತ್ತದೆ?
ಪಿಎಂ ಕಿಸಾನ್ ಸ್ಟೇಟಸ್ ಹೊಸ ಪೇಜ್ ನಲ್ಲಿ ನಿಮ್ಮ ಮಾಹಿತಿ ಇರುತ್ತದೆ. ಅದಂರೆ ಪಿಎಂ ಕಿಸಾನ್ ಯೋಜನೆಯ ರಿಜಿಸ್ಟ್ರೇಶನ್ ನಂಬರ್, ನೀವು ರಿಜಿಸ್ಟ್ರೇಶನ್ ಮಾಡಿದ ದಿನಾಂಕ. ನಿಮ್ಮ ಹೆಸರು, ತಂದೆ ಅಥವಾ ಗಂಡನ ಹೆಸರು ಇರುತ್ತದೆ. ಅದರ ಕೆಳಗಡೆ ಎಲಿಬಿಲಿಟಿ ಸ್ಟೇಟಸ್ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಆಗ ಲ್ಯಾಂಡ್ ಸೀಡಿಂಗ್ ಯಸ್ ಅಥವಾ ನೋ ಇರುತ್ತದೆ. ಯಸ್ ಇರಬೇಕು. ಇದೇ ರೀತಿ ಇ ಕೆವೈಸಿ ಸ್ಟೇಟಸ್ ಯಸ್ ಇರಬೇಕು. ಆಧಾರ್ ಬ್ಯಾಂಕ್ ಅಕೌಂಟ್ ಸಿಡಿಂಗ್ ಸ್ಟೇಟಸ್ ಯಸ್ ಇರಬೇಕು.
ಇದನ್ನೂ ಓದಿ : ಪಿಎಂ ಕಿಸಾನ್ ಹಣ ಜಮೆಯಾಗಲು ಇಕೆವೈಸಿ ಕಡ್ಡಾಯ- ಇಕೆವೈಸಿ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ವೀವ್ ಅಕೌಂಟ್ ಡಿಟೇಲ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಯಾವ ಬ್ಯಾಂಕಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿದೆ ಎಂಬ ಮಾಹಿತಿ ಇರುತ್ತದೆ.
ಲೇಟೇಸ್ಟ್ ಇನಸ್ಟಾಲ್ ಮೆಂಟ್ ಡಿಟೇಲ್ ಕೆಳಗಡೆ ನಿಮಗೆ ಇಲ್ಲಿಯವರೆಗೆ ಎಷ್ಟು ಕಂದುಗಳು ಜಮೆಯಾಗಿದೆ. ಹಾಗೂ ಬ್ಯಾಂಕ್ ಡಿಟೇಲ್ ಇರುತ್ತದೆ. ಎಫ್.ಟಿ.ಓ ಪ್ರೊಸೀಡ್ ಎದುರು ಯಸ್ ಇರಬೇಕು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಕೃಷಿ ಇಲಾಖೆಗೆ ಸಂಪರ್ಕಿಸಬಹುದು.