Krishi honda subsidy ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿಹೊಂಡ ನಿರ್ಮಾಣಕ್ಕೆ ಸಬ್ಸಿಡಿ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
2023-24ನೇ ಸಾಲಿಗೆ ಕಲಬುರಗಿ ಜಿಲ್ಲೆಯ ಐದು ತಾಲೂಕುಗಳು (ಅಫಜಲ್ಪುರ, ಕಲಬುರಗಿ, ಜೇವರ್ಗಿ, ಚಿತ್ತಾಪುರ ಹಾಗೂ ಸೇಡಂ ತಾಲೂಕು) ಗಳಲ್ಲಿ ಮಳೆಯಾಶ್ರಿತ ಕೃಷಿ ನೀತಿ 2014 ರನ್ವಯ ಪ್ಯಾಕೇಜ್ ಮಾದರಿಯಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿದ್ದು, ಕೃಷಿ ಹೊಂಡಾ, ಕ್ಷೇತ್ರ ಬದು, ಪಂಪ್ ಸೆಟ್ , ಲಘು ನೀರಾವರಿ ಘಟಕ ಹಾಗೂ ತಂತತಿ ಬೇಲಿ ಒಳಗೊಂಡಿರುತ್ತದೆ. ರೈತರು ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವುದು ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಅಥವಾ ಇತರೆ ಯೋಜನೆಗಳಡಿ ಅಥವಾ ಇತರೆ ಯೋಜನೆಗಳಡಿ ಕೃಷಿ ಹೊಂಡಾ ನಿರ್ಮಿಸುವ ರೈತರಿಗೆ ಸದರಿ ಯೋಜನೆಯಡಿ ಪರಿಗಣಿಸಲಾಗುವುದಿಲ್ಲ.
ನಿಗದಿಪಡಿಸಿದ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು 2023 ರ ಡಿಸೆಂಬರ್ 31 ರೊಳಗಾಗಿ ಸಂಬಂಧಿಸಿದ ಆಯಾ ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕು. ನಿಗದಿಪಡಿಸಿದ ಗುರಿಗಿಂತಲೂ ಹೆಚ್ಚಿನ ಪ್ರಮಾಣದ ಅರ್ಜಿಗಳನ್ನು ಸ್ವೀಕರಿಸಿದಲ್ಲಿ ಲಾಟರಿ ಮುಖಾಂತರ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಹಾಗೂ ಜೇಷ್ಠತೆ ಆಧಾರದ ಮೇಲೆ ಫಲಾನುಭವಿಗಳನ್ನು ಅಂತಿಮಗೊಳಿಸಲಾಗುವುದು.
ಇದನ್ನೂ ಓದಿ : ಬೆಳೆ ಹಾನಿಯಾಗಿದೆಯೇ? ಈ ನಂಬರಿಗೆ ಕರೆ ಮಾಡಿ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.
ಏನಿದು ಕೃಷಿ ಭಾಗ್ಯ ಯೋಜನೆ?
ಮಳೆ ಆಶ್ರಿತ ರೈತರನ್ನು ಕೇಂದ್ರೀಕರಿಸಿ ಮಳೆ ನೀರು ಸಂಗ್ರಹಣೆ ಮತ್ತು ಪುನರ್ ಬಳಕೆಗೆ ಆದ್ಯತೆ ನೀಡಿ ಕೃಷಿ ಭಾಗ್ಯ ಯೋಜನೆಯನ್ನು 2014-15 ಸಾಲಿನಿಂದ ಜಾರಿಗೆ ತರಲಾಗಿದೆ.
ಕೃಷಿ ಭಾಗ್ಯ ಯೋಜನೆಯ ಉದ್ದೇಶ
ರಾಜ್ಯದ ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವುದು.ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಹಾಗೂ ಆದಾಯವನ್ನು ಹೆಚ್ಚಿಸುವುದು. ಬಿದ್ದ ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ ಸಂದಿಗ್ದ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದಾಗಿದೆ.
Krishi honda subsidy ಕೃಷಿ ಭಾಗ್ಯ ಯೋಜನೆಯಡಿ ಎಷ್ಟು ಸಬ್ಸಿಡಿ ನೀಡಲಾಗುವುದು?
ಕೃಷಿ ಹೊಂಡ ನಿರ್ಮಾಣ ಮಾಡಿದ ರೈತರಿಗೆ ಅಳತೆಗೆ ಅನುಗುಣವಾಗಿ ಸಾಮಾನ್ಯ ವರ್ಗದವರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ. 90 ರ ಸಬ್ಸಿಡಿ ನೀಡಲಾಗುವುದು.
ಮಳೆ ವಿಫಲವಾದಾಗ, ವಿವಿಧ ಅಳತೆಯ ಕೃಷಿ ಹೊಂಡಗಳಲ್ಲಿ250 ಘನ ಮೀಟರ್ ನೀರು ಶೇಖರಣೆಯಾದರೆ ತುಂತುರು ನೀರಾವರಿ ಘಟಕದಿಂದ1 ಹೆಕ್ಟೇರ್ ಪ್ರದೇಶದಲ್ಲಿ ಮತ್ತು ನೀರಾವರಿ ಘಟಕದಿಂದ 2 ಹೆಕ್ಟೇರ್ ಪ್ರದೇಶಕ್ಕೆ ಬೆಳೆದ ಬೆಳೆಗೆ ಒಮ್ಮೆ ರಕ್ಷಣಾತ್ಮಕ ನೀರಾವರಿಯನ್ನು ನೀಡಬಹುದು.
2018-19 ನೇ ಸಾಲಿನ ಪ್ರಕಾರ ಈ ಯೋಜನೆಯಡಿಯಲ್ಲಿ ನೀರು ಸಂಗ್ರಹಣಾ ರಚನೆ (ಕೃಷಿ ಹೊಂಡ) ನಿರ್ಮಾಣಕ್ಕೆ ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆಗೆ 50 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. 3ರಿಂದ 4 ಹೆಚ್.ಪಿ ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ ಸೆಟ್ ಸಾಮಾನ್ಯ ವರ್ಗದವರಿಗೆ ಶೇ. 80 ರಷ್ಟು ಸಬ್ಸಿಡಿ ಅದೇ ರೀತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು.
ಕೃಷಿ ಹೊಂಡದ ಸುತ್ತಲೂ ನೆರಳು ಪರದೆ ಅಳವಡಿಸಲು ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ (ಹನಿ ನೀರಾವರಿ) ಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುವುದು.