Krishi prashasti award application : ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಾಗೂ ವಿವಿಧ ಬೆಳೆಯಲ್ಲಿ ಹೆಚ್ಚು ಇಳುವರಿ ಪಡೆದ ರೈತರಿಗೆ ಕೃಷಿ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2026-27ನೇ ಸಾಲಿ ಬೆಳೆ ಸ್ಪರ್ಧೆ ಯೋಜನೆಯಲ್ಲಿ ಭತ್ತದ ಬೆಳೆಯಲ್ಲಿ ಅಧಿಕ ಇಳುವರಿ ಪಡೆಯುವ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ರೈತರಿಂದ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವತಃ ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕರಾಗಿರಬೇಕು. ಸ್ವತಃ ಜಮೀನು ಹೊಂದಿರದಿದ್ದರೂ ಬೇಸಾಯದಲ್ಲಿ ತೊಡಗಿರುವ ಕೃಷಿ ಜಮೀನು ಮಾಲೀಕರಿಂದ ಸಾಮಾನ್ಯ ವ್ಯವಹಾರಿಕ ಅಧಿಕಾರ ಹೊಂದಿದ್ದ ಪಕ್ಷದಲ್ಲಿ (ಭೂ ಸುಧಾರಣೆಯ ಕಾಯ್ದೆಗೆ ಒಳಪಟ್ಟು) ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ಮಹಿಳೆಯರಿಗೆ ಅವಕಾಶ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಜಮೀನಿನ ಕನಿಷ್ಠ ವಿಸ್ತೀರ್ಣ 1 ಎಕರೆ ಇರಬೇಕು. ರೈತರು ಪಹಣಿ ಪತ್ರಿಕೆ, ರೈತರ ಛಾಯಾಚಿತ್ರ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಾಗಿದ್ದರಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಆಸಕ್ತರು ರೈತರು ಕ್ಷೇತ್ರ ಚಿತ್ರಗಳ ಸಹಿತ ಆಗಸ್ಟ್ 31 ರೊಳಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಪಿ.ಐ. ಮಾನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Krishi prashasti award application ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಕೃಷಿ ಮತ್ತು ಪೂರಕ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ರೈತರನ್ನು ಗುರುತಿಸಿ, ಪುರಸ್ಕರಿಸಿ ಪ್ರೋತ್ಸಾಹಿಸುವ ಕುರಿತಾಗಿ ಕೇಂದ್ರ ಪುರಸ್ಕೃತ ಆತ್ಮ ಯೋಜನೆಯಡಿ 2026-27ನೇ ಸಾಲಿಗೆ ಅನ್ವಯವಾಗುವಂತೆ ಉತ್ತರ ಕನ್ನಡ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಕುರಿತಂತೆ ಕೃಷಿ ವಿಭಾಗದಲ್ಲಿ ಸಮಗ್ರ ಕೃಷಿ ಪದ್ಧತಿ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರಪೋಪಕರಣ ಬಳಕೆ, ತೋಟಗಾರಿಕೆ, ವಿಭಾಗದಲ್ಲಿ ಸಮಗ್ರ ತೋಟಗಾರಿಕೆ ಸುಧಾರಿತ ಕಾಳು ಮೆಣಸುಬೇಸಾಯ, ವಿದೇಶಿ ಹಣ್ಣುಗಳ ಬೇಸಾಯ, ಜೇನುಕೃಷಿ, ಪಶುಸಂಗೋಪನೆ ವಿಭಾಗದಲ್ಲಿ ಸುಧಾರಿತ ಹೈನುಗಾರಿಕೆ ಮತ್ತು ಮೀನುಗಾರಿಕೆಯಲ್ಲಿ ಗಣನೀಯ ಸಾಧನೆ ಮಾಡಿದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿದೆ.
ವಿವಿಧ ಭಾಗದಲ್ಲಿ ಒಟ್ಟೂ 5 ಪ್ರಶಸ್ತಿ ನೀಡಲು ಅವಕಾಶವಿದ್ದು, ಆಸಕ್ತ ರೈತರು ರೈತ ಸಂಪರ್ಕ ಕೇಂದ್ರ ಯಲ್ಲಾಪೂರದಿಂದ ಅರ್ ನಮೂನೆ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಕ್ಷೇತ್ರ ಚಿತ್ರಗಳ ಸಹಿತ ಅರ್ಜಿ ಸಲ್ಲಿಸಬಹುದೆಂದು ಯಲ್ಲಾಪೂರ ಸಹಾಯಕ ಕೃಶಿ ನಿರ್ದೇಶಕ ನಾಗರಾಜ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆತ್ಮ ಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ಗದಗ ಜಿಲ್ಲೆಯ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ 2026-27ನೇ ಸಾಲಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಜಿಲ್ಲೆಯ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅರ್ಜಿಗಳನ್ನು ತಮ್ಮ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು ಆಗಸ್ಟ್ 29 ರೊಳಗಾಗಿ ನಿಗದಿತ ನಮೂನೆಯಲ್ಲಿ ಸಂಪೂರ್ಣ ಮಾಹಿತಿಯನ್ನು ದಾಖಲಾತಿಯೊಂದಿಗೆ ಸಂಬಂಧಿಸಿದ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ ಸಂಬಂಧಿಸಿದ ಕ್ಷೇತ್ರಗಳಲ್ಲಿ ಚಟುವಟಿಕಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಅನುಷ್ಠಾನಗೊಳಿಸುತ್ತಿರುವ ರೈತರಿಗೆ,ರೈತ ಮಹಿಳೆಯರಿಗೆ ನೀಡಲಾಗುವುದು.
ಇದನ್ನೂ ಓದಿ ಬ್ಯಾಂಕ್ ಅಕೌಂಟ್ ಆಧಾರ್ ಲಿಂಕ್ ಆಗಿದೆಯೇ ಮೊಬೈಲ್ ನಲ್ಲೇ ಚೆಕ್ ಮಾಡಿ
ಅರ್ಹ ಆಸಕ್ತ ರೈತರು, ರೈತ ಮಹಿಳೆಯರು ಅರ್ಜಿಗಳನ್ನು ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು (ಆತ್ಮ) ಚಿಕ್ಕಬಳ್ಳಾಪುರ ಇವರ ಕಚೇರಿಯಲ್ಲಿ ಅಥವಾ ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಆಗಸ್ಟ್ 20 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಿದೆ.





