Krishi ratna award ಕೃಷಿ ರತ್ನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Written by Ramlinganna

Published on:

Krishi ratna award : ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 16ನೇ ಸಂಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ 2023-24ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರಿಗೆ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ಇದಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ತಿಳಿಸಿದ್ದಾರೆ.

ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ16ನೇ ಸಂಸ್ಥಾಪನಾ ದಿನಾಚರಣೆಯನ್ನು ನವೆಂಬರ್ 22 ರಂದು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೃಷಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಅರ್ಹ ರೈತರು ನಿಗದಿತ ಅರ್ಜಿ ನಮೂನೆಯನ್ನು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ https://uasraichur.karnataka.gov.in

Krishi ratna award ವೆಬ್ಸೈಟ್ ದಿಂದ ಪಡೆದು ಭರ್ತಿ ಮಾಡಿ ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರಗಳ ಮುಖ್ಯಸ್ಥರಿಗೆ ಅಥವಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳ ಮುಖ್ಯಸ್ಥರ ಕಚೇರಿಯಲ್ಲಿ ಅಕ್ಟೋಬರ್ 31 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಕೃಷಿ ವಿಜ್ಞಾನ ಕೇಂದ್ರ, ರಾಯಚೂರು, ಬೀದರ್, ಕಲಬುರಗಿ, ರದ್ದೇವಾಡಗಿ, ಕೊಪ್ಪಳ (ಗಂಗಾವತಿ) ಯಾದಗಿರಿ (ಕವಡಿಮಟ್ಟಿ), ಬಳ್ಳಾರಿ (ಹಗರಿ)ಮತ್ತು ಮುಖ್ಯಸ್ಥರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಭೀಮರಾಯನಗುಡಿ, ಲಿಂಗಸೂಗುರು, ಕೊಪ್ಪಳ, ನಾಲವಾರ, ದೇವದುರ್ಗ, ವಿಜಯನಗರ (ಹೂವಿನಹಡಗಲಿ) ಇವರನ್ನು ಸಂಪರ್ಕಿಸಲು ಹಾಗೂ ಮೊಬೈಲ್ ಸಂಖ್ಯೆ 9480696314, 9480696315, 9480696316, 9480696317, 9480696318, 9480696319 ಗೆ ಸಂಪರ್ಕಿಸಲು ಕೋರಲಾಗಿದೆ.

ದ್ರಾಕ್ಷಿ ಬೆಳೆಗಾರರಿಗೆ 40.10 ಕೋಟಿ ಬೆಳೆ ವಿಮೆ ಜಮೆ

ಪ್ರಸಕ್ತ ವರ್ಷದಲ್ಲಿ ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ 40.10 ಕೋಟಿ ವಿಮೆ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅಥಣಿ ತಾಲೂಕಿನ ಘಟನಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಥಣಿ  ಹಾಗ ಕೋರಮಂಡಲ ಇಂಟರ್ನ್ಯಾಶನಲ್ ಲಿ. ಸಹಯೋಗದಲ್ಲಿ ಜರುಗಿದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಶಾಲಾ ಕಂಪೌಂಡ್ ನಿರ್ಮಾಣ, ಅಡುಗೆ ಕೋಣೆ ನಿರ್ಮಾಣಕ್ಕೆ ಅಡಿಗಲ್ಲು, ಪ್ರಧಾನಮಂತ್ರಿ ಅವಾಸ್ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಹಾಗೂ ಗ್ರಂಥಾಲಯಕ್ಕೆ ಕಂಪ್ಯೂಟರ್ ವಿತರೆಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ ಅಕ್ಟೋಬರ್ 5 ರಂದು ಪಿಎಂ ಕಿಸಾನ್ ಹಣ ಈ ರೈತರ ಖಾತೆಗೆ ಜಮೆ

ಕಳೆದ ಸಾಲಿನಲ್ಲಿದ್ರಾಕ್ಷಿ ಬೆಳೆಗಾರರಿಗೆ 36 ಕೋಟಿ ರೂಪಾಯಿ ಬೆಳೆವಿಮೆ ಮಾಡಲಾಗಿತ್ತು.  ಈ ವರ್ಷ ಎಕರೆಗೆ 50 ರಿಂದ 90 ಸಾವಿರದಂತೆ ತಾಲೂಕಿನಲ್ಲಿ 40.10 ಕೋಟಿ ಸರ್ಕಾರದಿಂದ ಪರಿಹಾರ ನೀಡಲಾಗಿದೆ. ಇದರಿಂದ ಕಷ್ಟ ಕಾಲದಲ್ಲಿರೈತರಿಗೆ ಅನುಕೂಲವಾಗಲಿದೆ ಎಂದು ಅವರು ಕೃಷಿ ವಿಮೆ, ತಾಂತ್ರಿಕ ದೋಷ ಹಾಗೂ ಮಾಹಿತಿ ಕೊರತೆಯಿಂದ ರೈತರಿಗೆ ಸರಿಯಾದ ಸಮಯಕ್ಕೆ ವಿಮೆ ಹಣ ಬರುತ್ತಿಲ್ಲ. ಮುಂಬರುವ ದಿನಗಳಲ್ಲಿ ಈಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿಸರ್ಕಾರ ಚಿಂತನೆ ನಡೆಸಿದೆ. ಮೆಕ್ಕೆಜೋಳ, ಸೋಯಾಬಿನ್, ತೊಗರಿ, ಶೇಂಗಾ ಸೇರಿದಂತೆ ಇನ್ನಿತರ ಬೆಳೆಗಳ ಹಾನಿ ಹಾಗೂ ವಿಮೆ ಹಣ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಅಥಣಿ ಪೂರ್ವ ಭಾಗದ ರೈತರ ಬಹುದಿನಗಳ ಕನಸಾಗಿದ್ದ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಕೃಷ್ಣಾ ನದಿ ದಡದ ಝಂಡರವಾಡ ಗ್ರಾಮದ ರೈತರು ಭೂಮಿ ನೀಡಲು ಒಪ್ಪಿದ್ದು, ಶೀಘ್ರದಲ್ಲಿಯೇ ನೀರಾವರಿ ಕಾಮಗಾರಿ ಆರಂಭಿಸುವ ಮೂಲಕ ಬರುವ 20 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಆ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

Leave a Comment