Krishimela in Bangalore gkvk : ಆಹಾರ ಆರೋಗ್ಯ ಆದಾಯಕ್ಕಾಗಿ ಸಿರಿಧಾನ್ಯಗಳು ಘೋಷವಾಕ್ಯದಡಿ ನವೆಂಬರ್ 17 ರಿಂದ 20 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮೇಳ ಹಮ್ಮಿಕೊಳ್ಳಲಾಗಿದೆ.
ಹೌದು, ಬೆಂಗಳೂರಿನ ಹೆಬ್ಬಾಳದ ಜಿಕೆವಿಕೆಯಲ್ಲಿ ನವೆಂಬರ್ 17 ರಿಂದ220 ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಐದು ಹೊಸ ತಳಿಗಳನ್ನು ಬಿಡುಗಡೆ ಮಾಡಲಾಗುವುದು. ಇದರೊಂದಿಗೆ ಕೃಷಿ ಸಾಧಕರಿಗೆ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ವಿ. ಸುರೇಶ ತಿಳಿಸಿದರು.
ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೃಷಿ ಮೇಳದಲ್ಲಿ ಕ್ಷೇತ್ರಸಂದರ್ಶನ, ತಜ್ಞರೊಂದಿಗೆ ಚರ್ಚೆ, ವಸ್ತು ಪ್ರದರ್ಶನಗಳನ್ನು ಏರ್ಪಡಿಸಲಾಗುವುದು. ವಸ್ತು ಪ್ರದರ್ಶನದಲ್ಲಿ 625 ಮಳಿಗೆಗಳು ಇರಲಿವೆ ಎಂದು ವಿವರಿಸಿದರು.
ಅಧಿಕ ಇಳುವರಿಯ ತಳಿ ಬಿಡುಗಡೆ
ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ನೀಡುವ ಎಂಎಲ್ -322 ರಾಗಿ ತಳಿ, ಜಿಪಿಯುಎಲ್ -11 ಸಾಮೆ, ಜಿಪಿಯುಪಿ -32 ಬರಗು, ಕೆಬಿಎಸ್ಎಚ್ -85 ಸೂರ್ಯಕಾಂತಿ ಹಾಗೂ ಜಿಕೆವಿಕೆ ಕೆಂಪು ಹಲಸಿನ ನೂತನ ತಳಿಗಳನ್ನು ಲೋಕಾರ್ಪಣೆಗೊಳಿಸಲಾಗುವುದು. ಇಧೇ ಸಂದರ್ಭದಲ್ಲಿ ಕೃಷಿ ಸಾಧಕರಿಗೆ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ : ನಿಮ್ಮ ಫ್ರೂಟ್ಸ್ ಐಡಿ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ಮಳೆ ಅಭಾವದ ಹಿನ್ನೆಲೆಯಲ್ಲಿ ಕಡಿಮೆ ನೀರನ್ನು ಬಯಸುವ ಬೆಳೆಗಳ ಬಿತ್ತನೆ ಬೀಜವನ್ನು ಇದೇ ಮೊದಲ ಬಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ನವೆಂಬರ್ 18 ರಂದು ಸಿರಿಧಾನ್ಯಗಳ ಆಹಾರ ಮೇಳ ಆಯೋಜಿಸಲಾಗಿದೆ. ಕೃಷಿ ತಂತ್ರಜ್ಞಾನಗಳ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಸಮಗ್ರ ಬೇಸಾಯ ಪದ್ಧತಿ, ಬೆಳೆ ಪದ್ಧತಿ, ಹನಿ ಮತ್ತು ತುಂತುರು ನೀರಾವರಿ ಸುಧಾರಿತ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಮಾರುಕಟ್ಟೆ ನೈಪುಣ್ಯತೆ, ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆ, ಕೃಷಿ ಪರಿಕರಗಳ ಹಾಗೂ ಪ್ರಕಟಣೆಗಳ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.
ವಿದೇಶಿ ತಳಿಗಳಾದ ಬಾಟಲ್ ಬದನೆ, ಅಲಂಕಾರಿಕ ಸೂರ್ಯಕಾಂತಿ ಮತ್ತಿತರ ಸಸ್ಯಗಳ ಪ್ರಾತ್ಯಕ್ಷಿಕೆಯೂ ಇರಲಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗಲು ದಾರಿಯಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ
ಜಿಕೆವಿಕೆಯ ಮಹಾದ್ವಾರದಿಂದ ಕೃಷಿ ಮೇಳದ ಸಭಾಂಗಣಕ್ಕೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಿದ್ದು, ಪ್ರವೇಶ ಉಚಿತವಾಗಿದೆ. ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
Krishimela in Bangalore gkvk ಮೇಳದಲ್ಲಿ ಪ್ರಾಣ ಪಕ್ಷಿಗಳ ಆಕರ್ಷಣೆ
ಕೃಷಿ ಮೇಳದಲ್ಲಿ ವಿಭಿನ್ನ ಬಗೆಯ ಪ್ರಾಣಿ ಪಕ್ಷಿಗಳ ಪ್ರದರ್ಶನ ಇರಲಿದೆ. ಡಾರ್ಪರ್, ಬನ್ನೂರ್ ಮತ್ತಿತರ ಕುರಿ ತಳಿ, ದುಬಾರಿ ಹೋರಿ, ಹಸುಗಳ ಪ್ರದರ್ಶನ ಏರ್ಪಡಿಸಲಾಗಿದೆ.
ಆಧುನಿಕ ಕೃಷಿ ಸಲಕರಣೆ, ಕೀಟನಾಶಕ, ಬಿತ್ತನೆ ಬೀಜ, ರಸಗೊಬ್ಬರ ಮತ್ತಿತರ ವ್ಯವಸಾಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದು.