Land Old pahani mutation check : ರೈತಬಾಂಧವರಿಗೆ ಗುಡ್ ನ್ಯೂಸ್ ಇಲ್ಲಿದೆ. ರೈತರು ಈಗ ತಮ್ಮ ಬಳಿಯಿರುವ ಮೊಬೈಲ್ ನಲ್ಲಿ 25 ವರ್ಷದ ಹಳೆಯ ಪಹಣಿ ಹಾಗೂ ಜಮೀನಿನ ಮುಟೇಶನ್ ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಹೌದು, ಇದಕ್ಕೆ ರ ಸಹಾಯವೂ ಬೇಕಿಲ್ಲ, ಯಾವ ಕಚೇರಿಗೂ ಹೋಗಬೇಕಿಲ್ಲ. ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿಯೇ ಕೇವಲ ಒಂದೇ ನಿಮಿಷದಲ್ಲಿ ಇಲ್ಲಿ ಹೇಳಿದಂತೆ ನೀವು ಯಾರ ಸಹಾಯವಿಲ್ಲದೆ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.
Land Old pahani mutation check 25 ವರ್ಷ ಹಳೆಯ ಪಹಣಿ ಚೆಕ್ ಮಾಡುವುದು ಹೇಗೆ?
25 ವರ್ಷದ ಹಳೆಯ ಪಹಣಿ ನಿಮ್ಮ ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://www.landrecords.karnataka.gov.in/service2/RTC.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು Old Year ಮೇಲೆ ಕ್ಲಿಕ್ ಮಾಡಬೇಕು. ಇದಾದಮೇಲೆ ನೀವು ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಊರು ಆಯ್ಕೆ ಮಾಡಿಕೊಂಡು ನೀವು ಯಾವ ಸರ್ವೆ ನಂಬರ್ ಹಳೆಯ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಅದನ್ನು ಅಲ್ಲಿ ನಮೂದಿಸಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಸರ್ನೋಕ್ ನಲ್ಲಿ ಸ್ಟಾರ್ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ಹಿಸ್ಸಾ ನಂಬರ್ ನಲ್ಲಿ ನಿಮ್ಮ ಹಿಸ್ಸಾ ನಂಬರ್ ಆಯ್ಕೆಮಾಡಿಕೊಳ್ಳಬೇಕು. ನಂತರ ಯಾವ ವರ್ಷದಿಂದ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕ ಮಾಡಿಕೊಳ್ಳಬೇಕು. ನಂತರ Year ನಲ್ಲಿ ಎಷ್ಟು ವರ್ಷದಿಂದ ನೀವು ಪಹಣಿ ನೋಡಬಹುದು ಎಂಬ ಆಯ್ಕೆ ಕಾಣಿಸುತ್ತದೆ. ಅಲ್ಲಿ ನೀವು 2000 ಇದ್ದರೆ 2000 ಒಂದುವೇಳೆ 2001 ಇದ್ದರೆ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ಹೀಗೆ ಎಷ್ಟು ವರ್ಷ ಹಳೆಯ ಪಹಣಿ ನೋಡಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ Fetch details ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ ನಿಮ್ಮೂರಿನಲ್ಲಿ ಯಾವ ರೈತರಿಗೆಷ್ಟು ಬೆಳೆ ಪರಿಹಾರ ಜಮೆ ಮೊಬೈಲ್ ನಲ್ಲೇ ಚೆಕ್ ಮಾಡಿ
ಅಲ್ಲಿ ನಿಮ್ಮ ಹೆಸರು ನಿಮ್ಮ ತಂದೆಯ ಹೆಸರು ಕಾಣಿಸುತ್ತದೆ. ನಂತರ ನಿಮ್ಮ ಖಾತಾ ನಂಬರ್ ಕಾಣಿಸುತ್ತದೆ. ಅದರ ಮುಂದೆ ಕಾಣುವ View ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅದೇ ನಿಮ್ಮ ಜಮೀನಿನ 20 ವರ್ಷ ಹಳೆಯ ಪಹಣಿಯಾಗಿರುತ್ತದೆ. ಅಲ್ಲಿ ನಿಮ್ಮ ಹೆಸರು ತಂದೆಯ ಹೆಸರು, ಮುಟೇಶನ್ ನಂಬರ್, ನಿಮ್ಮ ಜಮೀನಿನ ಮಣ್ಣಿನ ನಮೂನೆಯ ಮಾಹಿತಿ, ಪಟ್ಟಾ ಮಾಹಿತಿ ಸೇರಿದಂತೆ ಇನ್ನಿತರ ಮಾಹಿತಿಗಳು ಕಾಣಿಸುತ್ತದೆ.
Land Old pahani mutation check ಮುಟೇಶನ್ ಚೆಕ್ ಮಾಡುವುದು ಹೇಗೆ?
ನಿಮ್ಮ ಜಮೀನಿನ ಮುಟೇಶನ್ ಚೆಕ್ ಮಾಡಬೇಕಾದರೆ ನೀವು ಈ
https://landrecords.karnataka.gov.in/Service11/MR_MutationExtract.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಇಲ್ಲಿಯೂ ನಿಮ್ಮ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು.ನಂತರ ಸರ್ವೆ ನಂಬರ್ ನಮೂದಿಸಬೇಕು. ಇದಾದನಂತರ Fetch Details ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ನೀವು ನಮೂದಿಸಿದ ಸರ್ವೆ ನಂಬರ್ ಹಿಸ್ಸಾ ನಂಬರ್ ಎಲ್ಲವೂ ಕಾಣಿಸುತ್ತದೆ. ನಿಮ್ಮ ಹಿಸ್ಸಾ ನಂಬರ್ ಯಾವುದು ಎಂಬುದನ್ನು ನೋಡಿಕೊಂಡು ಅದರ ಹಿಂದಿರುವ Select ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ ಅಲ್ಲಿ Preview ಮೇಲೆ ಕ್ಲಿಕ್ ಮಾಬೇಕು ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಅವರ ಹೆಸರಿಗೆ ಜಮೀನು ಎಷ್ಟಿದೆ ಜಮೀನು ಜಮೀನು ಜಂಟಿಯಾಗಿದೆ. ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ.





