ಕೃಷಿ ಜಮೀನು ಖರೀಗಿಗೆ 10 ಲಕ್ಷ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

Land Purchase subsidy get : ಭೂ ಒಡೆತನ ಯೋಜನೆಯಡಿ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಲು 10 ಲಕ್ಷ ರೂಪಾಯಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಸೇರಿದಂತೆ ವತಿಯಿಂದ  ಭೂ ಒಡೆತನ ಯೋಜನೆಯಡಿ ಮಹಿಳಾ ಕೃಷಿ ಕಾರ್ಮಿಕರಿಗೆ ಕೃಷಿ ಜಮೀನು ಖರೀದಿಸಲು ಘಟಕ ವೆಚ್ಚಕ್ಕೆ 25 ಲಕ್ಷ ಮತ್ತು 20 ಲಕ್ಷ ರೂಪಾಯಿಗೆ ಶೇ. 50 ರಷ್ಟು ಸಹಾಯಧನ ಅಂದರೆ 10 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು. ಉಳಿದ ಶೇ. 50 ರಷ್ಟು ಅಂದರೆ 10 ಲಕ್ಷ ರೂಪಾಯಿ ಸಾಲದ ರೂಪದಲ್ಲಿ ನೀಡಲಾಗುತ್ತಿದೆ.

Land Purchase subsidy get  ಯಾವ ಯಾವ ನಿಗಮಗಳಿಂದ ಅರ್ಜಿ ಆಹ್ವಾನ

ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಭೂ ರಹಿತ ಕೃಷಿ ಕಾರ್ಮಿಕ ಕುಟುಂಬದ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಕನಿಷ್ಠ 2 ಎಕರೆ ಖುಷ್ಕಿ (ಒಣ) ಭೂಮಿ ಅಥವಾ 1 ಎಕರೆ ಆರ್ದ್ರ (ನೀರಾವರಿ) ಭೂಮಿ  ಖರೀದಿಸಲು ಅವಕಾಶವಿದೆ.

ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರು ಭೂ ರಹಿತ ಕೃಷಿ ಕಾರ್ಮಿಕ ಕುಟುಂಬದವರಾಗಿರಬೇಕು.  ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರ ಇರಬೇಕು. ಅರ್ಜಿದಾರರು ಕುಟುಂಬದ ಅವಲಂಬಿತ ಯಾವುದೇ ಸದಸ್ಯರು ಸರ್ಕಾರಿ ಅರೆ ಸರ್ಕಾರಿ ನೌಕರಿಯಲ್ಲಿರಬಾರದು.

ಮಂಜೂರಾತಿ ಪಡೆದು ಫಲಾನುಭವಿಯು ಅನರ್ಹರೆಂದು ಕಂಡುಬಂದಲ್ಲಿ ಮಂಜೂರಾತಿಯನ್ನು ಯಾವುದೇ ಹಂತದಲ್ಲಿ ರದ್ದು ಪಡಿಸಲಾಗುತ್ತದೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು

ಅರ್ಜಿದಾರರು ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಆದಾಯ ಪ್ರಮಾಮ ಪತ್ರ, ಕೃಷಿ ಕಾರ್ಮಿಕರ ದೃಝೀಕರಣ ಪತ್ರ, ಭಾವಚಿತ್ರ, ಹಾಗೂ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಜಿ ಸಲ್ಲಿಸಲು ಸೇವಾ ಸಿಂಧು ವೆಬ್ಸೈಟ್ ಮೂಲಕ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

https://sevaone.karnataka.gov.in/services

ನಲ್ಲಿ ನೇರವಾಗಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿ ಆಹ್ವಾನ

ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ ಸರಕು ವಾಹನ ಹಾಗೂ ಟ್ಯಾಕ್ಸಿ ವಾಹನ (ಹಳದಿ ಬೋರ್ಡ್) ಉದ್ದೇಶದಡಿ ವಾಹನ ಖರೀದಿಗೆ 4 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯ ( ಬ್ಯಾಂಕ್ ಸಹಯೊಗದೊಂದಿಗೆ) ವಾಹನ ಖರೀದಿಗೆ ಶೇ. 75 ರಷ್ಟು ಅಥವಾ ಗರಿಷ್ಠ 4 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ಬರ ಪರಿಹಾರ ನಿಮಗೆಷ್ಟು ಜಮೆಯಾಯಿತು? ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ

ಪಾಸ್ಟ್ ಫುಡ್ ಟ್ರಕ್ ಟ್ರೈಲರ್ ಅಥವಾ ಮೊಬೈಲ್ ಕಿಚನ್ ಫುಡ್, ಕಿಯೋಸ್ಕ್ (ಸಫಾಯಿ ಕರ್ಮಚಾರಿ ನಿಗಮ ಹೊರತುಪಡಿಸಿ) ಫುಡ್ ಕಾರ್ಟ್ ವಾಹನಗಳ ಉದ್ದೇಶದಡಿ ಘಟಕ ವೆಚ್ಚದ ಶೇ. 75 ರಷ್ಟು ಅಥವಾ ಗರಿಷ್ಠ 4 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿರುತ್ತದೆ.

Leave a Comment