ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿ ಸರ್ಕಾರಿ ಸೌಲಭ್ಯ ಪಡೆಯಿರಿ

Written by Ramlinganna

Published on:

ರೈತರು ಮನೆಯಲ್ಲಿಯೇ ಕುಳಿತು ತಮ್ಮ ಸರ್ವೆ ಪಹಣಿಯನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಬಹುದು. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ನಿಮ್ಮ ಎಲ್ಲಾ ಜಮೀನುಗಳ ಸರ್ವೆ ನಂಬರ್ ಗಳನ್ನು ಒಂದೇ ನಿಮಿಷದಲ್ಲಿ ಲಿಂಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಪಹಣಿಗೆ ಆಧಾರ್ ಲಿಂಕ್ ಮಾಡುವುದು ಹೇಗೆ?

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಪಹಣಿಗೆ ಆಧಾರ್ ಲಿಂಕ್ ಮಾಡಲು ಈ

https://landrecords.karnataka.gov.in/service4

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂಮಿ ನಾಗರಿಕ ಸೇವೆಗಳು (Bhoomi Citizen Services) ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Send OTP ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ಬಾಕ್ಸ್ ನಲ್ಲಿ ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಬೇಕು.

ಲಿಂಕ್ ಆಧಾರ್ /Link Aadhaar

ಭೂಮಿ ನಾಗರಿಕ ಸೇವೆಗಳು ಮುಖಪುಟದ ಎಡಗಡೆ ನಿಮ್ಮ ಮೊಬೈಲ್ ನಂಬರ್ ಕೆಳಗಡೆ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅರ್ಜಿದಾರರನ ವಿವರಗಳು (Details of the Applicant)

ಕೆಳಗಡೆ ಪಹಣಿಯೊಂದಿಗೆ ನಿಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿ ಸೇರಿದಂತೆ ಇನ್ನಿತರ ಮಾಹಿತಿ ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಬೇಕು. ನಂತರ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು ನಮೂದಿಸಬೇಕು. ನಂತರ ನಾನು ಇಲ್ಲಿ ಸ್ವಯಂ ಪ್ರೇರಣೆಯಿಂದ ಆಧಾರ್ ಗಾಗಿ ನನ್ನ ಒಪ್ಪಿಗೆಯನ್ನು ನೀಡುತ್ತೇನೆ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ Verify ಮೇಲೆ ಕ್ಲಿಕ್ ಮಾಡಬೇಕು. ಆಗ ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ (Aadhaar verified successfully ಎಂಬ ಮೆಸೆಜ್ ಬರುತ್ತದೆ. ಅಲ್ಲಿ ಓಕೆ ಮೇಲೆ ಕ್ಲಿಕ್ ಮಾಡಬೇಕು.

ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮ ಆಯ್ಕೆ ಮಾಡಿಕೊಂಡು ಸರ್ವೆ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಬೇಕು. ನಂತರ ಹಿಸ್ಸಾ ಸಂಖ್ಯೆಯಲ್ಲಿ ಸ್ಟಾರ್ ಆಯ್ಕೆ ಮಾಡಿಕೊಂಡು Search ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ ರೈತರ ಜಮೀನಿಗೆ ಹೋಗುವ ಕಾಲಾದಾರಿ, ಬಂಡಿದಾರಿ ಹಳ್ಳಕೊಳ್ಳಗಳ, ಬೆಟ್ಟಗುಡ್ಡಗಳ ಮಾಹಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಮಾಲೀಕರ ಹೆಸರು  ಆಧಾರ್ ನಲ್ಲಿರುವ ಹೆಸರಿಗೆ ಹೊಂದಿಕೆಯಾಗಬೇಕು. ಆಗ ಮಾತ್ರ ಆಧಾರ್ ಪಹಣಿಗೆ ಲಿಂಕ್ ಆಗುತ್ತದೆ. ಅಲ್ಲಿ ನೀವು ನಮೂದಿಸಿದ ಸರ್ವೆ ನಂಬರ್ ನಲ್ಲಿ ಬರುವ ಜಮೀನು ಮಾಲಿಕರ ಹೆಸರು ಕಾಣಿಸುತ್ತದೆ. ಹಾಗೂ ಅವರ ಹೆಸರಿಗೆ ಎಷ್ಟು ಎಕರೆ ಜಮೀನಿದೆ ಎಂಬುದುಕಾಣಿಸುತ್ತದೆ. ಅದರ ಮುಂದುಗಡೆ ಲಿಂಕ್ ಕಾಣಿಸುತ್ತದೆ. ನಿಮ್ಮ ಹೆಸರಿನ ಹಿಂದಿರುವ ಸಣ್ಣ ಸರ್ಕಲ್ ಬಾಕ್ಸ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಪಹಣಿ ಆಧಾರ್ ಗೆ ಲಿಂಕ್ ಆಗಿರುತ್ತದೆ. ಒಂದು ವೇಳೆ  ನಿಮ್ಮ ಹೆಸರು ಆಧಾರ್ ಕಾರ್ಡ್ ಹಾಗೂ ಪಹಣಿಯಲ್ಲಿ ವಿಭಿನ್ನವಾಗಿದ್ದರೆ ಅರ್ಜಿದಾರ ಮತ್ತು ಆರ್.ಟಿ.ಸಿ ಮಾಲಿಕರ ನಡುವೆ ಹೆಸರು ಹೊಂದಿಕೆಯಾಗುವುದಿಲ್ಲ (Name Mismatch Between applicant and The RTC owner  ಎಂಬ ಮೇಸೆಜ್ ಕಾಣಿಸುತ್ತದೆ.

ನಿಮ್ಮ ಪಹಣಿ ಆಧಾರ್ ಗೆ ಲಿಂಕ್ ಆಗಿದ್ದರೆ ನಿಮ್ಮ ಪಹಣಿ ಈಗಾಗಲೇ ಆಧಾರ್ ಕಾರ್ಡ್ ಗೆ ಲಿಂಕ್ ಆಗಿದೆ (Your RTCs already linked to Aadhaar ಎಂಬ ಮೆಸೆಜ್ ಬರುತ್ತದೆ.

Leave a comment