ಈಗಾಗಲೇ ನಿಗದಿಯಾಗಿರುವ ಮದುವೆಗಳನ್ನು ಮನೆಗಳಲ್ಲಿ ಮಾತ್ರ ನಡೆಸುವಂತೆ ನಿರ್ಬಂಧ ವಿಧಿಸಿ (Marriage participation permission 40 member only) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು,ಕೊರೋನಾ ಸೋಂಕು ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಹೊಸ ಆದೇಶ ಹೊರಡಿಸಿದೆ.  ಈಗಾಗಲೇ ಸೋಮವಾರದಿಂದ 14 ದಿನಗಳ ಕಾಲ ಲಾಕ್ಡೌನ್ ಎಂದು ಘೋಷಿಸಿರುವ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಈಗ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದು,  ಈ ಹಿಂದೆ ಮದುವೆಗೆ 50 ಜನರಿಗೆ ಅವಕಾಶ ನೀಡಲಾಗಿತ್ತು. ಈಗ ಪರಿಷ್ಕೃತ ಆದೇಶದಲ್ಲಿ 40 ಜನರಿಗೆ ಮಾತ್ರ ಅವಕಾಶ ನೀಡಿದೆ.

ಈಗಾಗಲೇ ನಿಗದಿಯಾಗಿರುವ ಮದುವೆಗಳನ್ನು ಕಲ್ಯಾಣಮಂಟಪದಲ್ಲಿ ನೆರವೇರಿಸಲು ಅವಕಾಶವಿಲ್ಲ.  ಮನೆಗಳಲ್ಲಿಯೇ ಈ ಕಾರ್ಯಕ್ಮಮಗಳನ್ನು ಮಾಡಬೇಕೆಂದು ಆದೇಶಿಸಿದೆ. ಮದುವೆಗೆ ಕುಟುಂಬದ ಆಪ್ತರು ಸೇರಿ ಕೇವಲ 40 ಜನರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಕಲ್ಯಾಣ ಮಂಟಪ ಅಥವಾ ಸಭಾಂಗಣದಲ್ಲಿ ಮದುವೆ ಸಮಾರಂಭ ನಡೆಸುವಂತಿಲ್ಲ ಎಂದು ಆದೇಶ ಹೇಳಿದೆ. ಈ ಕುರಿತು ಪರಿಷ್ಕೃತ ಆದೇಶವನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ಎಂ. ಮಂಜುನಾಥ ಪ್ರಸಾದ ಶನಿವಾರ ಹೊರಡಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಬಂಧಿಸಿದ ಜಂಟಿ ಆಯುಕ್ತರಿಂದ ಹಾಗೂ ಜಿಲ್ಲೆಗಳಲ್ಲಿ ಆಯಾ ವ್ಯಾಪ್ತಿಯ ತಹಶೀಲ್ದಾರಗಳಿಂದ ಮದುವೆ ಆಮಂತ್ರಣದ ಜೊತೆ  ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು. ಈ ಆರ್ಜಿ ಆಧರಿಸಿ 40 ಪಾಸ್ ಗಳನ್ನು ವಿತರಿಸಲಾಗುವುದು. ಈ ಪಾಸ್ ಇದ್ದವರಿಗೆ ಮಾತ್ರ ಮದುವೆಯಲ್ಲಿ ಭಾಗವಹಿಸಲು ಅನುಮತಿ ನೀಡಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Leave a Reply

Your email address will not be published. Required fields are marked *