midterm crop insurance ಬಿಡುಗಡೆ- ಸ್ಟೇಟಸ್ ಚೆಕ್ ಮಾಡಿ

Written by Ramlinganna

Updated on:

midterm crop insurance : ಮುಂಗಾರು ಹಂಗಾಮಿಗೆ ಬೆಳೆ ವಿಮೆ ಮಾಡಿಸಿದ ರೈತರಿಗೆ ವಿಮೆ ಹಣ ಜಮೆಯಾಗಿದೆ. ರೈತರು ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.

ಹೌದು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮಧ್ಯಂತರ ಬೆಳೆ ವಿಮೆ ಪರಿಹಾರವನ್ನುರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಎನ್.ಎಫ್ ಕಟ್ಟೆಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೌದು, ಹುಬ್ಬಳ್ಳಿ ಜಿಲ್ಲೆಯ ಕಲಘಟಗಿ ತಾಲೂಕಿನ ಭತ್ತ ಬೆಳೆಗೆ ವಿಮಾ ಕಂತು ಪಾವತಿಸಿದ2153 ರೈತರು ಹಾಗೂ ಗೋವಿನಜೋಳ ಬೆಳೆಗೆ ವಿಮಾ ಕಂತು ಪಾವತಿಸಿದ 13,095 ರೈತರು ಒಳಗೊಂಡಂತೆ ಒಟ್ಟು15248 ರೈತರಿಗೆ 9.73 ಕೋಟಿ ಮಧ್ಯಂತರ ಬೆಳೆ ವಿಮಾ ಪರಿಹಾರ ಇತ್ಯರ್ಥವಾಗಿದ್ದು, ಅದರನ್ವಯ ಆಧಾರ್ ಜೋಡಣೆಯಾದ ರೈತರ ಬ್ಯಾಂಕ್ ಖಾತೆಗಳಿಗೆ ಸಂದಾಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

midterm crop insurance ನಿಮಗೆಷ್ಟು ಬೆಳೆ ವಿಮೆ ಜಮೆಯಾಗಿದೆ?

ರೈತರು ತಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಬೆಳೆ ಖಾರೀಪ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಚೆಕ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಇದಾದ ನಂತರ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡು ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು.

ಫ್ರೂಟ್ಸ್ ಐಡಿಗೆ ನೋಂದಣಿ ಕಡ್ಡಾಯ- ಕೃಷಿ ಇಲಾಖೆ

ನಾಗಮಂಗಲ ತಾಲೂಕಿನ ರೈತರು ಬೆಳೆ ಪರಿಹಾರ ಸೌಲಭ್ಯ ಪಡೆಯಲು ಕೂಡಲೇ ಫ್ರೂಟ್ಸ್ ತಂತ್ರಾಂಶದಲ್ಲಿ ಎಫ್ಐಡಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬರಪೀಡಿವೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಜಮೀನು ಹೊಂದಿರುವ ಹಾಗೂ ಹೊಸದಾಗಿ ಖಾತೆ ಮಾಡಿಸಿಕೊಂಡಿರುವ ತಾಲೂಕಿನ ಎಲ್ಲಾ ರೈತರು ಸರ್ಕಾರದಿಂದ ಬೆಳೆ ಪರಿಹಾರ ಸೌಲಭ್ಯ ಪಡೆಯಲು ತಮ್ಮ ಹೆಸರಿನಲ್ಲಿರುವ ಆರ್.ಟಿ.ಸಿ ಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಕಡ್ಡಾಯವಾಗಿ ಎಫ್ಐಡಿ ನೋಂದಣಿ ಮಾಡಿಸಬೇಕು. ಎಫ್ಐಡಿ ನೋಂದಣಿ ಮಾಡಿಸದ ರೈತರಿಗೆ ಸರ್ಕಾರದ ಬೆಳೆ ಪರಿಹಾರ ಸಿಗುವುದಿಲ್ಲ. ಆದ್ದರಿಂದ ತಮ್ಮ ಖಾತೆಯಲ್ಲಿನ ಎಲ್ಲಾ ಆರ್.ಟಿಸಿಗಳು, ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಝರಾಕ್ಸ್ ಪ್ರತಿಯೊಂದಿಗೆ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಥವಾ ತಮ್ಮ ವೃತ್ತದ ಗ್ರಾಮ ಲೆಕ್ಕಾಧಿಕಾರಿಗಳನ್ನು ಸಂಪರ್ಕಿಸಿ ಎಫ್ಐಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕೋರಿದ್ದಾರೆ.

ಮುಂಗಾರು ಬೆಳೆ ವಿಮೆಗೆ ಅರ್ಜಿ ಆಹ್ವಾನ

ಮುಂಗಾರು ಹಂಗಾಮಿಗಾಗಿ ಕರ್ನಾಟಕ ರಾಜ್ಯ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಅಧಿಸೂಚಿತ ಬೆಳೆಗಳಿಗೆ ನೋಂದಣಿ ಮಾಡಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಇದನ್ನೂ ಓದಿ ಬರ ಪರಿಹಾರ 2 ಸಾವಿರ ರೂಪಾಯಿ ಬಿಡುಗಡೆ: ಯಾವ ಬೆಳೆಗೆ ಎಷ್ಟು ಜಮೆ? ಇಲ್ಲಿದೆ ಮಾಹಿತಿ

ಹೆಸರು, ಉದ್ದು, ತೊಗರಿ, ಭತ್ತ, ನೆಲಗಡಲೆ,ಸೂರ್ಯಕಾಂತಿ ಸೇರಿದಂತೆ ಇನ್ನಿತರ ಬೆಳಗಳ ವಿಮೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಕೂಡಲೇ ತಮ್ಮ ಹತ್ತಿರ  ಗ್ರಾಮ ಒನ್ ಕೇಂದ್ರ, ಅಥವಾ ಬ್ಯಾಂಕಿನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಬಹುದು.  ಬೆಳೆ ವಿಮೆ ಮಾಡಿದರೆ ಮುಂದೆ  ಪ್ರಾಕೃತಿಕ ವಿಕೋಪದಿಂದಾಗಿ ಬೆಳೆ ಹಾನಿಯಾದರೆ ರೈತರಿಗೆ ಅನುಕೂಲವಾಗಲಿದೆ. ಹಾಗಾಗಿ ರೈತರು ವಿಮಾ ಸೌಲಭ್ಯ ಪಡೆದುಕೊಳ್ಳಬಹುದು.

Leave a Comment