Mini Tractor Subsidy : ಟ್ರ್ಯಾಕ್ಟರ್ ಖರೀದಿ ಮಾಡಿ ವ್ಯವಸಾಯ ಮಾಡಲು ಇಚ್ಚಿಸುವ ರೈತರಿಗೆ ಇಲ್ಲಿದೆ ಗುಡ್ ನ್ಯೂಸ್. ಹೌದು, ರೈತರಿಗೆ ಸಬ್ಸಿಡಿಯೊಂದಿಗೆ ಮಿನಿ ಟ್ರ್ಯಾಕ್ಟರ್ ಸೇರಿದಂತೆ ಇನ್ನಿತರ ಉಪಕರಣಗಳ ಖರೀದಿಗೆ ಸಬ್ಸಿಡಿ ನೀಡಲಾಗುತ್ತಿದೆ. ಹಾಗಾದರೆ ಯಾವ ಯಾವ ಉಪಕರಣಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ ಎಂಬುದರ ಸಂಪೂರ್ಣ ಮಾಹಿತಿ.
ಹೌದು, ಬಿತ್ತನೆಯಿಂದ ಹಿಡಿದು ಬೆಳೆ ಕಟಾವು ಮಾಡುವವರಿಗೆ ಬೇಕಾಗುವ ರೈತರ ಕೃಷಿ ಯಂತ್ರೋಪಕರಣ ಖರೀದಿಗೆ ಶೇ. 50 ರಿಂದ 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯಾವ ಜಿಲ್ಲೆಯ ರೈತರು ಅರ್ಜಿ ಸಲ್ಲಿಸಬೇಕು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
Mini Tractor Subsidy ಕೃಷಿ ಯಾಂತ್ರೀಕರಣ ಯೋಜನೆಯಡಿ ಮಿನಿ ಟ್ರ್ಯಾಕ್ಟರ್ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಕೃಷಿ ಇಲಾಖೆಯ ಕೃಷಿ ಯಾಂತ್ರೀಕರಣ ಯೋಜನೆಯಡಿ ಸಹಾಯಧನ ಸೌಲಭ್ಯ ಕಲ್ಪಿಸಲು ಭೂ ಸಿದ್ಧತೆ ಉಪಕರಣಗಳಾದ ಲೆವಲರ್, ರೋಟೋವೇಟರ್, ಕಲ್ಟಿವೇಟರ್, ಎಂ.ಬಿ.ನೇಗಿಲು, ಫರೋ ಓಪನರ್, ಪವರ್ ಟಿಲ್ಲರ್, ಮಿನಿ ಟ್ರ್ಯಾಕ್ಟರ್ ಹಾಗೂ ಅಂತರ ಬೇಸಾಯ ಉಪಕರಣಗಳಾದ ಪವರ್ ವೀಡರ್, ಬ್ರಷ್ ಕಟರ್, ಮತ್ತಿತರ ಉಪಕರಣಗಳಿಗೆ ಶೇ. 50 ರಷ್ಟು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನದಲ್ಲಿ ವಿತರಿಸಲು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಹಾಗೂ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನಿ ನೀರಾವರಿ ಯೋಜನೆಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ : 2024-25 ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಮತ್ತು ಅಟಲ್ ಭೂಜಲ್ ಯೋಜನೆಯಡಿ ಕೃಷಿ ಬೆಳೆಗಳಲ್ಲಿ ನೀರಿನ ಸಮರ್ಥ ಬಳಕೆಯನ್ನು ಉತ್ತೇಜಿಸಲು ಕೃಷಿ ಇಲಾಖೆ ವತಿಯಿಂದ ತುಂತುರು ಮತ್ತು ಹನಿ ನೀರಾವರಿ ಘಟಕಗಳನ್ನು ಶೇ. 90 ರ ರಿಯಾಯಿತಿ ದರದಲ್ಲಿ ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಹಣಿ, ಕೃಷಿ ಬೆಳೆ ದೃಢೀಕರಣ ಪತ್ರ, ಕೊಳವೆಬಾವಿ, ತೋಟಗಾರಿಕೆ ಮತ್ತು ರೇಷ್ಮೆಇಲಾಖೆಗಳ ನಿರಕ್ಷೇಪಣೆ ಪತ್ರ, 100 ರೂಪಾಯಿ, ಸ್ಟ್ಯಾಂಪ್ ಪೇಪರ್, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಪ್ರತಿ, 4 ಪಾಸ್ ಪೋರ್ಟ್ ಭಾವಚಿತ್ರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರು ಜಾತಿ ಪ್ರಮಾಣ ಪತ್ರ, ಮತ್ತಿತರ ದಾಖಲೆ ಸಲ್ಲಿಸಬೇಕು.
ಇದನ್ನೂ ಓದಿ : Pmkisan farmers new list ಪಿಎಂ ಕಿಸಾನ್ ಹೊಸ ಪಟ್ಟಿ ಬಿಡುಗಡೆ
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಗುಡಿಬಂಡೆ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾದಎ. ಕೇಶವರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಯಂ ಉದ್ಯೋಗ ಕೈಗೊಳ್ಳಲು 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಕೃಷಿ / ಕೃಷಿ ಅವಲಂಬಿತ ಚಟುವಟಿಕೆ ಕೈಗೊಳ್ಳಲು ಆಸಕ್ತಿಯಿದೆಯೇ? ಕೂಡಲೇ 1 ಲಕ್ಷ ರೂಪಾಯಿ ಸಬ್ಸಿಡಿ ಪಡೆಯಲು ಎಲ್ಲಾ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕೃಷಿ / ಕೃಷಿ ಅವಲಂಬಿತ ಚಟುವಟಿಕೆ ಹಾಗೂ ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳ ಖರೀದಿಗೂ 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುವುದು. ಇದರೊಂದಿಗೆ ಆರ್ಥಿಕ ಚಟುವಟಿಕೆಗಳು ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ. 20 ರಷ್ಟು ಅಥವಾ ಗರಿಷ್ಠ 1 ಲಕ್ಷ ರೂಪಾಯಿ ಸಹಾಯಧನ ಮಂಜೂರು ಮಾಡಲಾಗುವುದು. ಹಾಗಾದರೆ ಯಾರು ಯಾರು ಸ್ವಯಂ ಉದ್ಯೋಗಕ್ಕೆ 1 ಲಕ್ಷ ರೂಪಾಯಿ ಸಬ್ಸಿಡಿ ನೀಡಲಾಗುವದು ಇಲ್ಲಿದೆ ಮಾಹಿತಿ.
ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದ್ದರು ಆಸಕ್ತ ಫಲಾನುಭವಿಗಳು ವೀರಶೈವ – ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರು (ಪ್ರವರ್ಗ –III ಬಿ) ಅರ್ಜಿ ಸಲ್ಲಿಸಬಹುದು.