ಪ್ರಸಕ್ತ ವರ್ಷ ದೇಶಾದ್ಯಂತ ವಾಡಿಕೆಯಷ್ಟು ಮಳೆ (monosoon likely to be normal) ಸುರಿಯಲಿದೆ. ದೇಶದ ಪೂರ್ವ ಮತ್ತುಪ ಈಶಾನ್ಯ ಭಾರತದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಉಳಿದ ಕಡೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಮತ್ತು ಉತ್ತರ ಭಾರತದಲ್ಲಿ  ಮುಂಗುರು ಮಳೆ ವಾಡಿಕೆಯಂತೆ ಸುರಿಯಲಿದ್ದು, ದೇಶದ ಮಧ್ಯಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯಲಿದೆ. ನೈರುತ್ಯ ಮುಂಗಾರು 2021 ಕ್ಕೆ ಸಂಬಂಧಿಸಿದಂತೆ ಮುನ್ಸೂಚನೆಯ ಎರಡನೇ ಕಂತಿನ ಮಾಹಿತಿಯನ್ನು ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಬಿಡುಗಡೆ ಮಾಡಿದ್ದಾರೆ.

50 ವರ್ಷಗಳ ದೀರ್ಘಾವಧಿ ಸರಾಸರಿಗೆ ಹೋಲಿಸಿದರೆ ಈ ಬಾರಿ ದಕ್ಷಿಣ. ಉತ್ತರ ಮತತ್ ವಾಯುವ್ಯ ಭಾರತದಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ. ಎಲ್ಲಿಯೂ ಮಳೆಯ ತೀವ್ರ ಕೊರತೆ ಇರುವುದಿಲ್ಲ. ‘ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ದೀರ್ಘಾವಧಿ ಸರಾಸರಿಯ ಶೇ 101ರಷ್ಟು ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಶೇ 4ರಷ್ಟು ವ್ಯತ್ಯಾಸವಾಗುವ ಸಾಧ್ಯತೆ ಇದೆ. ಒಟ್ಟಾರೆ ಮುಂಗಾರಿನಲ್ಲಿ ದೇಶದಾದ್ಯಂತ ವಾಡಿಕೆಯಷ್ಟು ಮಳೆಯಾಗುವ ಕಾರಣ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ‘ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ದೀರ್ಘಾವಧಿ ಸರಾಸರಿಯ ಶೇ 101ರಷ್ಟು ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದರಲ್ಲಿ ಶೇ 4ರಷ್ಟು ವ್ಯತ್ಯಾಸವಾಗುವ ಸಾಧ್ಯತೆ ಇದೆ. ಒಟ್ಟಾರೆ  ಈ ಬಾರಿ ಉತ್ತಮ ಮುಂಗಾರಿನಿಂದ ಕೃಷಿ ವಲಯಕ್ಕೆ ನೆರವಾಗಲಿದೆ ಎಂದು ಹವಾಮಾನ ಇಲಾಖೆ ಮಹಾ ನಿರ್ದೇಶಕ ಮೃತ್ಯುಂಜಯ ಮಹಾಪಾತ್ರ ಅವರು ಹೇಳಿದ್ದಾರೆ.

ಇದನ್ನೂ ಓದಿ: ಆರಿದ್ರಾ ಇಲ್ಲದಿದ್ದರೆ ದರಿದ್ರ ಖಂಡಿತ, ಮಳೆ ನಕ್ಷತ್ರಗಳ ಮೇಲೆ ಕಟ್ಟಿದ ಇನ್ನಿತರ ಗಾದೆಗಳು, ಕಾಲಾವಧಿ ಮಾಹಿತಿ ಇಲ್ಲಿದೆ

ದೀರ್ಘಾವಧಿ ಸರಾಸರಿಯ ಶೇ. 96-104 ರಷ್ಟು ಮಳೆಯನ್ನು ಹವಾಮಾನ ಇಲಾಖೆಯು ವಾಡಿಕೆಯ ಮಳೆ ಎಂದು ಪರಿಗಣಿಸಲಾಗುತ್ತದೆ. ‘ಉತ್ತರ, ವಾಯವ್ಯ, ಮಧ್ಯ ಭಾರತ ಮತ್ತು ದಕ್ಷಿಣ ಭಾರತದ ಪೂರ್ವದ ರಾಜ್ಯಗಳ ಆಯ್ದ ಪ್ರದೇಶಗಳಲ್ಲಿ ವಾಡಿಕೆಯಷ್ಟು ಮಳೆಯಾಗಲಿದೆ. ಉಳಿಕೆ ಪ್ರದೇಶಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಈಶಾನ್ಯ ಭಾರತದ ಎಲ್ಲೆಡೆ, ಉತ್ತರ ಭಾರತದ ಕೆಲವೆಡೆ ಮತ್ತು ದಕ್ಷಿಣ ಭಾರತದ ಪಶ್ಚಿಮದ ರಾಜ್ಯಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ  ಎಂದು ಅವರು ಮಾಹಿತಿ ನೀಡಿದ್ದಾರೆ.

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಬೇಸಾಯದ ಚಟುವಟಿಕೆಗಳು ಈಗಾಗಲೇ ಆರಂಭವಾಗಿದೆ. ಕರ್ನಾಟಕದಲ್ಲಿ ಕಳೆದ ಹದಿನೈದು ದಿನಗಳಿಂದ ಆಗಾಗ ಮಳೆ ಸುರಿಯುತ್ತಿರುವುದರಿಂದ ಕೃಷಿ ಚಟುವಟಿಕೆ ಜೋರಾಗಿ ನಡೆದಿದೆ. ಮುಂಗಾರು ಬಿತ್ತನೆಗೆ ತಯಾರಿಯಲ್ಲಿದ್ದಾರೆ.

Leave a Reply

Your email address will not be published. Required fields are marked *