ಇಂದಿನಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Written by Ramlinganna

Updated on:

Monsoon Heavy rain alert ರಾಜ್ಯದಲ್ಲಿಇಂದಿನಿಂದ ಇನ್ನೆರಡು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಒಂದು ಜಿಲ್ಲೆಗೆ ರೆಡ್ ಅಲರ್ಟ್, 7 ಜಿಲ್ಲೆಗಳಿಗೆ ಆರೇಂಜ್ಅಲರ್ಟ್ ಹಾಗೂ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರೆದಿದ್ದರಿಂದ ಮುಂದಿನ 24 ಗಂಟೆಯಲ್ಲಿ 20 ಸೆಂ.ಮೀ ಕ್ಕೂ ಅಧಿಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ. ಉಡುಪಿ, ಬೆಳಗಾವಿ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 11 ಸೆಂ. ಮೀ ಅಧಿಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ವಿಜಯನಗರ, ದಾವಣಗೆರೆ, ರಾಯಚೂರು, ಗದಗ ಹಾಗೂ ಧಾರವಾಡ ಜಿಲ್ಲೆಗಳ್ಲಲಿ 6 ಸೆಂ.ಮೀಗೂ ಅಧಿಕ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಗಳೂರು, ಹಾಗೂ ಕೊಡಗಿನ ಹಲವೆಡೆ ಭಾರಿ ಮಳೆ ಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ಬೆಳೆ ವಿಮೆ ಹಣ ಜಮೆಯಾಗಲು ರೈತರೇನು ಮಾಡಬೇಕು? ಇಲ್ಲಿದೆ ಮಾಹಿತಿ

ಒಳನಾಡಿನಲ್ಲಿ ಗಂಟೆಗೆ 30-40  ಕಿಲೋ ಮೀಟರ್ವೇಗದಲ್ಲಿಗಾಳಿ ಬೀಸಲಿದೆ. ಕರಾವಳಿಯಲ್ಲಿ ಗಂಟೆಗೆ 44- 65 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿಯೂ ಮೋಡ ಕವಿದ ವಾತಾವರಣವಿದೆ. ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Monsoon Heavy rain alert ಈ ಭಾಗದಲ್ಲಿ ಮೂರು ದಿನ ಮಳೆಯ ಮುನ್ಸೂಚನೆ- 3 ದಿನ ಆರೇಂಜ್ ಅಲರ್ಟ್

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಲೆನಾಡು ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ 3 ದಿನ ಆರೇಂಜ್ ಅಲರ್ಟ್ ನೀಡಲಾಗಿದೆ. ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮಹಿಸಬೇಕಾಗಿರುವುದರಿಂದ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡಲಾಗಿದೆ.

ಸಾರ್ವಜನಿಕರು, ಪ್ರವಾಸಿಗರು, ನದಿಗೆ ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಅಪಾಯಕಾರಿ ವಿದ್ಯುತ್ ಕಂಪ, ಕಟ್ಟಡ, ಮರಗಳ ಹತ್ತಿರ, ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳನ್ನು ತಲುಪುವುದು. ವಿದ್ಯಾರ್ಥಿಗಳ ಪೋಷಕರು, ಶಾಲಾ ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸಬೇಕು.

ಹೊರಗೆ ತೆರಳುವುದು ಅನಿವಾರ್ಯವಿದ್ದಲ್ಲಿ ಕುಟುಂಬದ ಸದಸ್ಯರೊಂದಿಗೆ ತೆರಳಬೇಕು.ಸಾರ್ವಜನಿಕರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಲು ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08262 238950 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಳೆಯ ಮುನ್ಸೂಚನೆ ಪಡೆಯಲು ವರುಣಮಿತ್ರ ಸಹಾಯವಾಣಿಗೆ ಕರೆ ಮಾಡಿ

ರೈತರು, ಸಾರ್ವಜನಿಕರು ತಮ್ಮೂರಿನ ಸುತ್ತಮುತ್ತಲಿನ ಹವಾಮಾನ, ಮಳೆಯ ವರದಿ ಪಡೆಯಲು ವರುಣಮಿತ್ರ ಸಹಾಯವಾಣಿ 9243345433 ಗೆ ಕರೆ ಮಾಡಬಹುದು. ದಿನದ 24 ಗಂಟೆ ಕಾರ್ಯನಿರ್ವಹಿಸುವ ಈ ನಂಬರಿಗೆ ಕರೆ ಮಾಡಿ ಹವಾಮಾನದ ಮಾಹಿತಿಯನ್ನು ರೈತರು ಮನೆಯಲ್ಲಿಯೇ ಕುಳಿತು ಪಡೆದುಕೊಳ್ಳಬಹುದು.

ಗೋವಾದಲ್ಲಿಯೂ ಭಾರಿ ಮಳೆಯ ಮುನ್ಸೂಚನೆ

ಗೋವಾ ರಾಜ್ಯದ ಎರಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.

ಗೋವಾದಲ್ಲಿ ನಿನ್ನೆಯಿಂದಲೇ ಮಳೆಯಾಗುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ಜನರು ಹೋಗದಂತೆ ಸೂಚಿಸಲಾಗಿದೆ. ಅಗತ್ಯ ಸೇವೆಗಳಿಗೆ ಅಲ್ಪಾವಧಿಯ ಅಡ್ಡಿ ಹಾಗೂ ಭಾರಿ ಮಳೆಯ ಸಮಯಲ್ಲಿ ಕಡಿಮೆ ಗೋಚರತೆ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

Leave a Comment