ಐದು ದಿನಗಳ ಕಾಲ ಅಬ್ಬರದ ಮಳೆ ಸುರಿಯಲಿದೆ

Written by By: janajagran

Updated on:

monsoon heavy rain ರಾಜ್ಯದ ಕರಾವಳಿಯಾದ್ಯಂತ ಮುಂಗಾರು (Monoon) ಮಳೆಯ ಅಬ್ಬರ ಜೋರಾಗಿತ್ತು. ಶುಕ್ರವಾರ ಮಧ್ಯರಾತ್ರಿಯಿಂದ ಆರಂಭಗೊಂಡ ರಭಸದ ಮಳೆ ಶನಿವಾರ ಇಡೀ ದಿನ ಧಾರಾಕಾರವಾಗಿ ಸುರಿದಿದೆ.

ಮುಂಗಾರು ಹಾಗೂ ಪೂರ್ವ ಅರಬ್ಬಿ ಸಮುದ್ರ-ಬಂಗಾಳ ಉಪಸಗಾರದಲ್ಲಿ ವಾಯುಭಾರ ಕುಸಿತ ಮತ್ತು ಮೈಲ್ಮೈ ಸುಳಿಗಾಳಿ ಉಂಟಾಗಿದ್ದರಿಂದ ರಾಜ್ಯ ಕರಾವಳಿ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಭಾರೀ ಮಳೆ(Hevy rain) ಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲುಸಹಿತ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜೂನ್ 17 ರವರೆಗೆ ಆರೇಂಜ್ ಅಲರ್ಟ್ (Orange alert)ಘೋಷಿಸಲಾಗಿದೆ. ಪ್ರತಿಗಂಟೆಗೆ 50.ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಈ ಅವಧಿಯಲ್ಲಿ ಮೀನುಗಾರರು ಸಮುದ್ಯಕ್ಕೆ ಇಳಿಯಬಾರದೆಂದು ಎಚ್ಚರಿಕೆ ನೀಡಲಾಗಿದೆ.

ಸಮುದ್ರದಲ್ಲಿ 45  ರಿಂದಜ 55 ಕಿ.ಮೀ ವೇಗದಲ್ಲಿ ಗಾಳಇ ಬೀಸುವ ಸಾಧ್ಯತೆಯಿರುವುದರಿಂದ ಬಹಳಷ್ಟು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಐದು ದಿನಗಳ ಮೊದಲೇ ಮಳೆಯ ಮುನ್ಸೂಚನೆ ಪಡೆಯುವ (Meghdoot app) ಆ್ಯಪ್‌ ಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿಕ್ಕಮಗಳೂರು, ಯಾದಗಿರಿ, ಹಾಸನ, ಕೊಡಗು, ಶಿವಮೊಗ್ಗ, ವಿಜಯಪುರ, ಕೊಪ್ಪಳ, ಬೆಳಗಾವಿ, ಗದಗ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಸಹ ವ್ಯಾಪಕ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ.

ರಾಜ್ಯದಲ್ಲಿ ಚುರುಕುಗೊಂಡ ಮಳೆ- ಶನಿವಾರ ರಾತ್ರಿ ಬಹುತೇಕ ಜಿಲ್ಲೆಗಳಲ್ಲಿ ಸುರಿದ ಮಳೆ

ಕರಾವಳಿ ಭಾಗದಲ್ಲಿ ಕ್ಷೀಣಿಸಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದಿದೆ. ಮಂಗಳೂರು, ಉಡುಪಿ, ಕಲಬುರಗಿ, ಯಾದಗಿರಿ ಜಿಲ್ಲೆಯಾದ್ಯಂತ ಶನಿವಾರ ಉತ್ತಮ ಮಳೆಯಾಗಿದೆ.ಮಂಗಳೂರಿನಲ್ಲಿ ಶನಿವಾರ ರಾತ್ರಿ ದಿನಪೂರ್ತಿ ಮಳೆಯಾಗಿದೆ. ಕರಾವಳಿಯಾದ್ಯಂತ ಕಡಲಿನ ಅಬ್ಬರವೂ ಬಿರುಸುಗೊಂಡಿದೆ.

monsoon heavy rain  ಮಹಾರಾಷ್ಟ್ರದ ಮುಂಬೈನಲ್ಲಿಯೂ ಬಿರುಸುಗೊಂಡ ಮಳೆ

ವಾಣಿಜ್ಯ ನಗರ ಮುಂಬೈಯಲ್ಲಿ ಬಿರುಗಾಳಿ ಮತ್ತು ಗುಡುಗುಸಹಿತ ಮಳೆಯಾಗಿದೆ. ಶನಿವಾರ ಇಡೀ ದಿನ ಧಾರಾಕಾರ ಮಳೆ ಸುರಿದಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೂ ಎಱಡು ದಿನ ಮುಂಬೈಯಲ್ಲಿ ಮಳೆಯಾಗಲಿದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮೂರಿನಲ್ಲಿ ಮಳೆಯ ಮಾಹಿತಿ ಮೊಬೈಲ್ ನಲ್ಲೇ ಪಡೆಯಿರಿ

ಸಾರ್ವಜನಿಕರು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬದನ್ನು ಈಗ ಮೊಬೈಲ್ ನಲ್ಲೇ ಮಾಹಿತಿ ಪಡೆಯಬಹುದು. ಹೌದು,  ರಾಜ್ಯ ಸರ್ಕಾರದ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ಮಾಹಿತಿ ಪಡೆಯಬಹುದು. ಈ ವರುಣಮಿತ್ರಿ ಉಚಿತ ಸಹಾಯವಾಣಿ 9243345433 ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತದೆ. ಈ ನಂಬರಿಗೆ ಕರೆ ಮಾಡಿ ತಮ್ಮೂರಿನ ಸುತ್ತಮುತ್ತಲಿನ ಹವಾಮಾನ, ಗಾಳಿಯ ವೇಗ, ಗಾಳಿಯ ದಿಕ್ಕು ಸೇರಿದಂತೆ ಹವಾಮಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದು.

Leave a Comment