ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರಗೊಂಡಿರುವುದರಿಂದ  ರಾಜ್ಯದ ಕರಾವಳಿ ಸೇರಿದಂತೆ ಇತರೆಡೆ ಜೂನ್ 1 ರಿಂದ ಜೂನ್ 3 ರವರೆಗೆ ವ್ಯಾಪಕ ಮಳೆಯಾಗುವ (Monsoon-rain alert) ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಉಡುಪಿ, ಬೀದರ್, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಜೂನ್ 3 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಲಬುರಗಿ, ಗದಗ, ಕೊಪ್ಪಳ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 1 ಮತ್ತು 2 ರಂದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ 7 ಸೆಂ.ಮೀ, ಕಾರವಾರದಲ್ಲಿ 5, ಕುಂದಾಪುರದಲ್ಲಿ 4 ಸೆಂ.ಮೀ ಹಾಗೂ ಚಿಂತಾಮಣಿಯಲ್ಲಿ ಮೂರು 3 ಸೆಂ.ಮೀಟರ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ನೈರುತ್ಯ ಮಾನ್ಸೂನ್ ಜೂಲ್ 3 ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆಯಿದ್ದು, ರಾಜ್ಯಕ್ಕೆ ಜೂನ್ 5 ರಂದು ಬರುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಇನ್ನಷ್ಟು ಚುರುಕಾಗಿದೆ.

ಇದನ್ನೂ ಓದಿ : ಸಿಡಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ದಯವಿಟ್ಟು ಹೀಗೆ ಮಾಡಿ.

Leave a Reply

Your email address will not be published. Required fields are marked *