monsoon rain rain ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ತಮಗೆಲ್ಲಾ ಗೊತ್ತಿದ್ದ ಹಾಗೆ, ಕಳೆದ ವಾರ ರಾಜ್ಯದಲ್ಲಿ ಎರಡು ದಿನಕರಾವಳಿ ಮತ್ತು ಮಲೆನಾಡು ಭಾಗದಲ್ಲಿಉತ್ತಮ ಮಳೆಯಾಗಿದೆ. ಆದರೆ, ಒಳನಾಡು ಭಾಗದಲ್ಲಿ ಅಷ್ಟೊಂದು ಮಳೆಯಾಗಿಲ್ಲ. ಇದೀಗ ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ 6 ರಿಂದ 15 ಸೆಂ. ಮೀ. ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಜುಲೈ 1 ಹಾಗೂ 2 ರಂದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಇಂದಿನಿಂದ ಮುಂದಿನ ಒಂದು ವಾರ ರಾಜ್ಯದಲ್ಲಿ ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ 74 ಕೋಟಿ ಬರ ಪರಿಹಾರ ಜಮೆ: ನಿಮಗೆಷ್ಟು ಜಮೆ ಇಲ್ಲೇ ಚೆಕ್ ಮಾಡಿ
ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಹೆಚ್ಚಿ ಪ್ರಮಾಣ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನೂ ಕರಾವಳಿ ತೀರದಲ್ಲಿ ಬಿರುಗಾಳಿಯು 35 ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾಗರರು ಸಮುದ್ರಕ್ಕೆ ಇಳಿಯದಂತೆ ಮತ್ತು ಕಡಲ ತೀರದಲ್ಲಿ ಮನೋರಂಜನಾ ಕಾರ್ಯಕ್ರಮ ಆಯೋಜಿಸದಂತೆ ಸೂಚಿಸಲಾಗಿದೆ.
ಭಾನುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡ ವರದಿ ಪ್ರಕಾರ ಶಿವಮೊಗ್ಗದ ಆಗುಂಬೆ ಹಾಗೂ ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಅತೀ ಹೆಚ್ಚು 9 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ 7ಸೆಂ. ಮೀಟರ್ ಮಳೆಯಾಗಿದೆ.
ಮೇಘದೂತ್ ಆ್ಯಪ್ ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬೇಕು ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ. ಅಲ್ಲಿ ನಿಮಗೆ ಹವಾಮಾನ ವರದಿ ಕಾಣಿಸುತ್ತದೆ.
monsoon rain rain ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು. ಇನ್ನೇಕೆ ತಡ ಕೂಡಲೇ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ನಿಮ್ಮೂರಿನ ಸುತ್ತಮುತ್ತ ಮಳೆ ಯಾವಾಗ ಬರುತ್ತದೆ ಎಂಬುದನ್ನು ಈಗಲೇ ತಿಳಿದುಕೊಳ್ಳಬಹುದು. ಮಳೆಯೊಂದಿಗೆ ಗಾಳಿಯು ಯಾವ ದಿಕ್ಕಿಗೆ ಬೀಸುತ್ತಿದೆ. ಗಾಳಿಯ ವೇಗ ಹೇಗಿದೆ ಎಂಬುದರ ಮಾಹಿತಿಯನ್ನು ಸಹ ರೈತರಿಗೆ ನೀಡಲಾಗುವುದು. ಹಾಗಾಗಿ ರೈತರು ವರುಣಮಿತ್ರ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹವಾಮಾನ ಮಾಹಿತಿಯನ್ನು ಮನೆಯಲ್ಲಿ ಕುಳಿತು ಪಡೆದುಕೊಳ್ಳಬಹುದು.