ನಾಳೆಯಿಂದ ಈ ಜಿಲ್ಲೆಗಳಲ್ಲಿ ಭಾರಿ ಮಳೆ! ಯೆಲ್ಲೋ ಅಲರ್ಟ್ ಘೋಷಣೆ

Written by Ramlinganna

Published on:

monsoon rain yellow alert : ಬಿಸಿಲಿನ ಝಳಕ್ಕೆ ಕಂಗೆಟ್ಟಿರುವ ರಾಜ್ಯದ ಜನತೆಗೆ ಸಂತಸದ ಸುದ್ದಿ. ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹೌದು, ಜೂನ್ 4 ಕ್ಕೆ ಕೇರಳಕ್ಕೆ ಮುಂಗಾರು ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮತ್ತೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಜೂನ್ 4ಕ್ಕೆ ಮುಂಗಾರು ಮಳೆ ಆರಂಭವಾಗಲಿರುವುದರಿಂದ ರಾಜ್ಯದ 11 ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಯಾವ ಯಾವ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಯಾವ ಯಾವ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಮುಂಗಾರು ಮಳೆ ಇನ್ನೆರಡು ದಿನಗಳಲ್ಲಿ ಕೆರಳಕ್ಕೆ ಪ್ರವೇಶ ಮಾಡಲಿದೆ. ಅಂದರೆ ಜೂನ್ 4 ರಂದು ಕೇರಳಕ್ಕೆ ಕಾಲಿಡಲಿದೆ. ಹಾಗಾಗಿ ಮುಂದಿನ 2-3 ದಿನಗಳಲ್ಲಿ ಕರ್ನಾಟಕಕ್ಕೂ ಪ್ರವೇಶ ಪಡೆಯಲಿದ್ದು, ಆರಂಭದಲ್ಲಿ ಮುಂಗಾರು ಮಳೆ ಅಬ್ಬರ ಇರಲಿದೆ.

monsoon rain yellow alert ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ?

ಜೂನ್ 2 ರಿಂದ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿರುವುದರಿಂದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಧಾರವಾಡ ಗದಗ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ  ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಬೀದರ್, ಕಲಬುರಗಿ, ಯಾದಗಿರಿ, ರಾಯೂರು, ವಿಜಯಪುರ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಸಾಧಾರಣ ಮಳೆಯಾಗಲಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಇದನ್ನೂ ಓದಿ : ರೈತರಿಗೆ ಗುಡ್ ನ್ಯೂಸ್ ನಿಮ್ಮ ಜಮೀನಿನ ಇ ಸ್ಕೇಚ್ ಮೊಬೈಲ್ ನಲ್ಲಿ ಹೀಗೆ ಪಡೆಯಿರಿ

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ಮಾಹಿತಿ ಸಿಗಲಿದೆ ಇದಾದ ನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ನೀವು ಈ ಯಾಪ್ ಒಮ್ಮೆ ಮೊಬೈಲ್ ನಲ್ಲಿ ಇನಸ್ಟಾಲ್ ಮಾಡಿಕೊಂಡರೆ ಸಾಕು, ಮತ್ತೆ ಮತ್ತೆ ನೀವು ಮನೆಯಲ್ಲಿಯೇ ಕುಳಿತು ಮಳೆಯ ಮಾಹಿತಿ ಪಡೆಯಬಹುದು. ಇದಕ್ಕಾಗಿ ನೀವು ಯಾವ ಹಣವೂ ಖರ್ಚು ಮಾಡಬೇಕಿಲ್ಲ. ಹವಾಮಾನ ವರದಿ, ಗಾಳಿಯ ಬೀಸುವ ದಿಕ್ಕು, ಮಂದಿನ ಐದು ದಿನದ ಹವಾಮಾನ ಮಾಹಿತಿ  ಪಡೆಯಬಹುದು.

Leave a Comment